Yatnal: ವಿಜಯೇಂದ್ರ ವಿರುದ್ಧ ಮಾತನಾಡುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್ ದಿಢೀರ್ ಬಿಜೆಪಿ ಪಕ್ಷದಿಂದ ಉಚ್ಛಾಟನೆ....

ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿದ್ದರು ಕೂಡ, ಕರ್ನಾಟಕ ಬಿಜೆಪಿ ಪಕ್ಷದ ನಾಯಕರಿಂದಲೇ ಭಾರಿ ದೊಡ್ಡ ವಿರೋಧ ಎದುರಿಸುತ್ತಾ ಪರದಾಡುತ್ತಿದ್ದಾರೆ. ಅದ್ರಲ್ಲಿ, ಯಡಿಯೂರಪ್ಪ ಫ್ಯಾಮಿಲಿ & ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ದೊಡ್ಡ ಯುದ್ಧವೇ ನಡೆಯುತ್ತಿತ್ತು. ಹೀಗಿದ್ದಾಗಲೇ, ಯಡಿಯೂರಪ್ಪ ಅವರ ಮಗ ವಿಜಯೇಂದ್ರ ವಿರುದ್ಧ ಮಾತನಾಡುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್ ದಿಢೀರ್ ಬಿಜೆಪಿ ಪಕ್ಷದಿಂದ ಉಚ್ಛಾಟನೆ....

2024ರ ಬಹು ನಿರೀಕ್ಷಿತ ಉಪಚುನಾವಣೆ ಅಖಾಡದಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಈ ಸೋಲಿಗೆ ಬಿಜೆಪಿ ಪಕ್ಷದಲ್ಲಿ ಇರುವ ಒಡಕು ಕಾರಣ ಎಂಬ ಗಂಭೀರ ಆರೋಪವೂ ಇದೆ. ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ಬಿಜೆಪಿ ನಾಯಕರಿಗೆ ಬಿಸಿ ತುಪ್ಪವಾಗಿ ಕಾಡ್ತಿದ್ದಾರೆ. ತಮ್ಮದೇ ಪಕ್ಷದ ನಾಯಕರ ವಿರುದ್ಧವೇ ಭ್ರಷ್ಟಾಚಾರದ ಆರೋಪ ಹೊರಿಸುತ್ತಾ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಖತ್ ಸುದ್ದಿಯಲ್ಲಿ ಇದ್ದಾರೆ. ಆದ್ರೆ ಈ ಸಮಯದಲ್ಲೇ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ & ಬಸನಗೌಡ ಪಾಟೀಲ್ ಯತ್ನಾಳ್....

Basanagouda Patil Yatnal May Be Face This Situation From The High Command

ಯತ್ನಾಳ್ ದಿಢೀರ್ ಬಿಜೆಪಿ ಪಕ್ಷದಿಂದ ಉಚ್ಛಾಟನೆ....

ಹೌದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಬಿಜೆಪಿ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಮರು ಕ್ಷಣದಿಂದಲೇ, ಬಸನಗೌಡ ಪಾಟೀಲ್ ಯತ್ನಾಳ್ ರೊಚ್ಚಿಗೆದ್ದು ಕೂತಿದ್ದಾರೆ. ಯಡಿಯೂರಪ್ಪ ಅವರ ವಿರುದ್ಧ ಯತ್ನಾಳ್ ಮಾತನಾಡುತ್ತಾ ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದಾರೆ. ಇಂಥ ಸಮಯದಲ್ಲೇ ಬಿಜೆಪಿ ಹೈಕಮಾಂಡ್ ಬಸನಗೌಡ ಪಾಟೀಲ್ ಯತ್ನಾಳ್‌ಗೆ....

ಬಿಜೆಪಿ ಹೈಕಮಾಂಡ್ ದಿಢೀರ್ ಯತ್ನಾಳ್‌ಗೆ....

ಬಸನಗೌಡ ಪಾಟೀಲ್ ಯತ್ನಾಳ್ ಮಾಡುತ್ತಿರುವ ಆರೋಪಗಳು ಕರ್ನಾಟಕ ಬಿಜೆಪಿಗೆ ಭಾರಿ ದೊಡ್ಡ ಪೆಟ್ಟು ನೀಡುತ್ತಿದೆ. ಅದ್ರಲ್ಲೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮಗ & ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಬಾಯಿಗೆ ಬಂದಂತೆ ಮಾತನಾಡ್ತಾ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಮಾಡುತ್ತಿದ್ದಾರೆ ಎಂಬ ಆರೋಪ ಕೂಡ ಕೇಳಿ ಬಂದಿದೆ.

ಇದೇ ಕಾರಣಕ್ಕೆ, ವಿಜಯೇಂದ್ರ ವಿರುದ್ಧ ಮಾತನಾಡುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್ ದಿಢೀರ್ ಬಿಜೆಪಿ ಪಕ್ಷದಿಂದಲೇ ಉಚ್ಛಾಟನೆಯನ್ನ ಮಾಡಬೇಕು ಎಂಬ ಆಗ್ರಹವು ಕೇಳಿ ಬಂದಿದೆ. ಕರ್ನಾಟಕ ಬಿಜೆಪಿ ನಾಯಕರು ಈ ಬೇಡಿಕೆ ಇಡುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳ ಬಿಜೆಪಿ ನಾಯಕರಿಂದ ಈ ರೀತಿ ಒತ್ತಾಯ ಕೂಡ ಕೇಳಿ ಬಂದಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್, ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಮಾಡುತ್ತಾ? ಅಂತಾ ಕಾದು ನೋಡಬೇಕಿದೆ. ಮತ್ತೊಂದು ಕಡೆ ಬಿಬಿಎಂಪಿ ಚುನಾವಣೆಗೆ ಮೊದಲು ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ ಬಂದ್ ಮಾಡಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+