ಸಿದ್ದರಾಮಯ್ಯ ಯಾಕೆ ಸೈಲೆಂಟ್ ಆಗಿದ್ದಾರೆ ಗೊತ್ತಾ? ಸಿದ್ದು ಸೈಲೆಂಟ್ ಸೀಕ್ರೆಟ್ ಬಿಚ್ಚಿಟ್ಟ ಯತ್ನಾಳ್!
ವಿಜಯಪುರ, ಆಗಸ್ಟ್ 29: ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ಪಾಕಿಸ್ತಾನದ ಮುಖ್ಯಮಂತ್ರಿನಾ? ಮುಖ್ಯಮಂತ್ರಿ ಅಂದ್ರೆ ಶಾಸಕರು ಅವರು ಬಳಿ ಹೋಗೋದು ಸಹಜ, ಶಾಸಕರು ಸಿಎಂ ಬಳಿ ತಮ್ಮ ಕ್ಷೇತ್ರದ ಕೆಲಸಕ್ಕೆ ಹೋಗೋದು ಸಾಮಾನ್ಯ ಎಂದು ಸಿಎಂ ಸಿದ್ದರಾಮಯ್ಯ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಾಪ್ಟ್ ಕಾರ್ನಾರ್ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಂಗಳವಾರ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಮ್ಮ ನಡುವೆ ಆತ್ಮೀಯತೆ ಇದೆ. ನಾನು ಆಸ್ಪತ್ರೆಯಲ್ಲಿದ್ದಾಗ ಸಿದ್ದರಾಮಯ್ಯ ನನ್ನ ನೋಡಲು ಬಂದಿದ್ದರು.ಯಾಕೋ ಸಿದ್ದರಾಮಯ್ಯ ಅವರು ಈ ಅವಧಿಯಲ್ಲಿ ಬಹಳ ಸೈಲೆಂಟ್ ಆಗಿದ್ದಾರೆ ಎಂದು ಹೇಳಿದರು.

ಇನ್ನೂ ಈ ಅವಧಿಯಲ್ಲಿ ಯಾಕೆ ಸೈಲೆಂಟ್ ಆಗಿದ್ದಿರಾ ಎಂದು ನಾನು ಸಿದ್ದರಾಮಯ್ಯ ಅವರಿಗೆ ಕೇಳಿದ್ದೇ. ಎನ್ ಮಾಡೋದು ಯತ್ನಾಳ್ ಇದು ಕೊನೆದಿದೆ. ಯಾರು ಏನೇ ಅಂದ್ರ ತಲೆ ಕೊಡಿಸಿಕೊಳ್ಳಲು. ಜನರಿಗೆ ಉತ್ತಮ ಆಡಳಿತ ನೀಡ್ತಿನಿ ಅಂದಿದ್ದರು ಎಂದು ಸಿದ್ದರಾಮಯ್ಯ ಸೈಲೆಂಟ್ ಸಿಕ್ರೆಟ್ ನ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬಿಚ್ಚಿಟ್ಟಿದ್ದಾರೆ.
ಇನ್ನೂ ದೇಶ, ಹಿಂದೂ ಧರ್ಮ ಉಳಿವಿಗಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುವ ಕಾರ್ಯವಾಗಬೇಕು. ದೇಶಕ್ಕಾಗಿ ಸೇವೆ ಸಲ್ಲಿಸಿದ ಮಹಾತ್ಮರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕೆಂದು ಬಸನಗೌಡ ಪಾಟೀಲ್ ಯತ್ನಾಳ್ ಕರೆ ನೀಡಿದರು.












Click it and Unblock the Notifications