RSS: ಅಮಾನತುಗೊಂಡ ಅಧಿಕಾರಿಗೆ ಕಾನೂನು ಸಲಹೆ, ಬೆಂಬಲ: ಯತ್ನಾಳ್ ಘೋಷಣೆ
ಬೆಂಗಳೂರು, ಅಕ್ಟೋಬರ್ 18: ಪ್ರತ್ಯಕ್ಷವಾಗಿಯು, ಪರೋಕ್ಷವಾಗಿಯು ರಾಜ್ಯ ಸರ್ಕಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)ದ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ. ಆರ್‌ಎಸ್‌ಎಸ್ ಚಟುವಟಿಕೆಯನ್ನು ಸರ್ಕಾರಿ ಜಾಗದಲ್ಲಿ ನಿಷೇಧಿಸಿದ ಬೆನ್ನಲ್ಲೆ, ಸಂಘದ ಪಥಸಂಚಲನದಲ್ಲಿ ಗಣವೇಷಧಾರಿಯಾಗಿದ್ದ ಅಧಿಕಾರಿ ಅಮಾನತು ಮಾಡಲಾಗಿದೆ. ಇದರ ವಿರುದ್ಧ ಆಕ್ರೋಶ ಹೊರ ಹಾಕಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅಧಿಕಾರಿಗಳಿಗೆ ಬೆಂಬಲ ಘೋಷಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರವು RSS ಶಾಖೆಗಳಲ್ಲಿ ಅಥವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರನ್ನು ಅಮಾನತು ಮಾಡುತ್ತಿರುವುದನ್ನು ಖಂಡಿಸಿ ಶಾಸಕ ಯತ್ನಾಳ್ ಅವರು ಎಕ್ಸ್ ಪೊಸ್ಟ್ ಮಾಡಿದ್ದಾರೆ.

ಸಂಘ ಹಾಗು ಹಿಂದೂ ಸಮಾಜವನ್ನು ಎದುರಿಸಲಾಗದೆ ಕಾರ್ಯಕರ್ತರನ್ನು ಗುರಿಯಾಗಿಸುತ್ತಿರುವ ಈ ಸರ್ಕಾರದ ಅಯೋಗ್ಯತನವನ್ನು ನಾನು ಖಂಡಿಸುತ್ತೇನೆ ಹಾಗು ಸರ್ಕಾರದಿಂದ ಗುರಿಯಾಗಿಸುತ್ತಿರುವ ಅಧಿಕಾರಿಗಳಿಗೆ ಸಂಪೂರ್ಣ ಕಾನೂನು ಸಹಾಯ ಹಾಗು ಬೆಂಬಲವನ್ನು ಘೋಷಿಸುತ್ತೇನೆ ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನದಲ್ಲಿ ಭಾಗವಹಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಪ್ರವೀಣ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿದೆ. ಸಂಘ ದೇಶದ ಅಭ್ಯುದಯಕ್ಕೆ ಕೆಲಸ ಮಾಡುತ್ತಿದೆಯೇ ಹೊರತು ದೇಶ ವಿರೋಧಿ ಸಂಘಟನೆಯಲ್ಲ. 100 ವರ್ಷಗಳ ಇತಿಹಾಸದಲ್ಲಿ ಯಾವುದೇ ಕ್ರಿಮಿನಲ್ ಹಿನ್ನೆಲೆಯಿಲ್ಲದ ಸಂಸ್ಕೃತಿ, ಸದಾಚಾರ, ದೇಶಾಭಿಮಾನ, ಶಿಸ್ತನ್ನು ಕಲಿಸುವ ರಾಷ್ಟ್ರೀಯ ಸ್ವಯಂ ಸೇವಕದ ವಿರುದ್ಧ ಇರುವ selective amnesia ಏಕೆಂದು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದೆ ತರ್ಕಾನುಸಾರ ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ಪಿ.ಆಫ್.ಐ, ಎಸ.ಡಿ.ಪಿ.ಐ ಮುಖಂಡರನ್ನು ಬೆಂಬಲಿಸಿದ ಮುಖಂಡರನ್ನು ಸರ್ಕಾರ ಅಮಾನತು ಮಾಡಿ ಕಾನೂನಿನ ಮುಂದೆ ಎಲ್ಲರೂ ಒಂದೇ ಸಾಬೀತುಪಡಿಸಲಿ. ಆಗದಿದ್ದರೆ, ಕೂಡಲೇ ಅಮಾನತನ್ನು ಹಿಂಪಡೆಯಬೇಕೆಂದರು.
ಲಿಂಗಸೂರಿನಲ್ಲಿ ಜರುಗಿದ ಆರ್‌ಎಸ್‌ಎಸ್ ಪಥಸಂಚನದಲ್ಲಿ ಗಣವೇಷಧಾರಿಯಾಗಿದ್ದ ಸಿರವಾರ ಗ್ರಾಮ ಪಂಚಾಯಿತಿ ಅಧಿಕಾರಿ ಪ್ರವೀಣ್ ಕುಮಾರ್ ವಿರುದ್ಧ ಕ್ರಮ ಜರುಗಿಸಲಾಗಿದೆ. ಸಂಘದ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸರ್ಕಾರಿ ಸೇವಾ ನಿಯಮ ಉಲ್ಲಂಘಿಸಲಾಗಿದೆ ಎಂದು ಹೇಳಿ ಸರ್ಕಾರ ಆ ಅಧಿಕಾರಿಯನ್ನು ಅಮಾನತು ಮಾಡಿದೆ. ಇದರ ವಿರುದ್ಧ ಬಿಜೆಪಿ ವಲಯದಲ್ಲಿ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.
RSS ಚಟುವಟಿಕೆಗೆ ಬ್ರೇಕ್
ಇತ್ತೀಚೆಗೆ ನಡೆದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಸಂಘದ ಹೆಸರು ಹೇಳದೇ ಖಾಸಗಿ ಸಂಘ, ಸಂಸ್ಥೆಗಳ ಕಾರ್ಯಕ್ರಮಗಳನ್ನು ಸರ್ಕಾರಿ ಶಾಲೆ, ಕಾಲೇಜು ಮತ್ತು ಜಾಗಗಳಲ್ಲಿ ಕಾರ್ಯಕ್ರಮ ನಡೆದಂತೆ ನಿಷೇಧಿಸಿದೆ. ಒಂದು ವೇಳೆ ಕಾರ್ಯಕ್ರಮ ನಡೆಸಬೇಕಾದರೆ ಯಾವುದೇ ಖಾಸಗಿ ಸಂಸ್ಥೆಗಳು ಸರ್ಕಾರದ ಪೂರ್ವಾನುಮತಿ ಪಡೆಯುವಂತೆ ಸರ್ಕಾರ ನಿರ್ಧಾರ ಕೈಗೊಂಡು ಪ್ರಕಟಿಸಿದೆ. ಈ ಸಂಬಂಧ ಹೊಸ ನಿಯಮ ಜಾರಿಗೆ ತರುವ ಬಗ್ಗೆಯು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications