ಬಿಜೆಪಿ ಹೈಕಮಾಂಡ್‌ಗೆ ಟ್ವೀಟ್‌ನಲ್ಲೇ ತಿವಿದ ಯತ್ನಾಳ್!

ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ಹೈಕಮಾಂಡ್‌ಗೆ ಟಾಂಗ್ ಕೊಟ್ಟಿದ್ದಾರೆ. ಹಿಂದೂ ಫೈರ್‌ ಬ್ರ್ಯಾಂಡ್ ಹಾಗೂ ಉಗ್ರ ಹಿಂದುತ್ವ ವಾದದಿಂದಲೇ ಮುನ್ನೆಲೆಗೆ ಬಂದಿದ್ದ ಹಾಗೂ ಬಿಜೆಪಿಯಲ್ಲಿ ಕೇಂದ್ರ ಮಟ್ಟದಲ್ಲಿ ಮಿಂಚ್ಚಿದ್ದ ಯತ್ನಾಳ್ ಅವರನ್ನು ಬಿಜೆಪಿ ಹೈಕಮಾಂಡ್‌ 6 ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಿ ಆದೇಶ ಮಾಡಿದೆ. ಇದು ರಾಜ್ಯ ರಾಜಕೀಯದಲ್ಲಿ ಭಾರೀ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ. ಬುಧವಾರ ಉಚ್ಚಾಟನೆ ಆದೇಶ ಮಾಡಲಾಗಿದ್ದು. ನೆನ್ನೆ ಸಂಜೆಯಿಂದಲೇ ಮಹತ್ವದ ಬದಲಾವಣೆಗಳು ಆಗುತ್ತಿವೆ. ಈ ರೀತಿ ಇರುವಾಗಲೇ ಯತ್ನಾಳ್ ಅವರು ಬಿಜೆಪಿ ಹೈಕಮಾಂಡ್‌ಗೆ ಟಾಂಗ್‌ ಕೊಟ್ಟಿದ್ದಾರೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಕುಟುಂಬ ರಾಜಕೀಯದ ಬಗ್ಗೆ ಮಾತನಾಡಿರುವ ವಿಡಿಯೋವನ್ನು ಯತ್ನಾಳ್ ಹಂಚಿಕೊಂಡಿದ್ದಾರೆ. ಜೆ.ಪಿ ನಡ್ಡಾ ಅವರು, ದೇಶದ ಜಮ್ಮು ಮತ್ತು ಕಾಶ್ಮೀರ ಹಾಗೂ ಉತ್ತರ ಪ್ರದೇಶದ ರಾಜ್ಯಗಳಲ್ಲಿನ ಕುಟುಂಬ ರಾಜಕೀಯದ ಬಗ್ಗೆ ಉದಾಹರಣೆ ನೀಡಿರುವ ವಿಡಿಯೋ ಇದಾಗಿದ್ದು. ಇದರಲ್ಲಿ ಜೆ.ಪಿ ನಡ್ಡಾ ಅವರು ಇನ್ನೆಷ್ಟು ದಿನ ಕುಟುಂಬ ರಾಜಕೀಯ ಮಾಡುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ.

Basanagouda Patil Yatnal Took Dig BJP High Command in Tweet

ಇದನ್ನು ಶೇರ್‌ ಮಾಡುವ ಮೂಲಕ ಕರ್ನಾಟಕದಲ್ಲಿ ನಡೆಯುತ್ತಿರುವುದು ಇನ್ನೇನು ಎನ್ನುವಂತೆ ಯತ್ನಾಳ್‌ ಸಾಲುಗಳು ಇವೆ. ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿರುವುದಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಜಯಪುರದಲ್ಲೇ ಬಿಜೆಪಿಯ ಕೆಲವು ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಯತ್ನಾಳ್‌ ಮುಂದಿನ ನಡೆ ಏನು ಎನ್ನುವ ಪ್ರಶ್ನೆ ಎದುರಾಗಿರುವಾಗಲೇ ಅವರು ಬಿಜೆಪಿ ಹೈಕಮಾಂಡ್‌ಗೆ ಖಡಕ್‌ ಆಗಿ ಪ್ರಶ್ನೆ ಮಾಡುವುದಕ್ಕೆ ಶುರು ಮಾಡಿದ್ದಾರೆ.

ನಾನು ಬಿಜೆಪಿ ಹೈಕಮಾಂಡ್‌ ಅನ್ನು ಪ್ರಶ್ನೆ ಮಾಡುವುದಕ್ಕೆ ಇಚ್ಛಿಸುತ್ತೇನೆ. ಭ್ರಷ್ಟಾಚಾರ, ಕುಟುಂಬ ರಾಜಕೀಯ ಹಾಗೂ ಸ್ವಜನ ಪಕ್ಷಪಾತದಲ್ಲಿ ನಿಮ್ಮ ನಿಲುವೇನು ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ಜೆ.ಪಿ ನಡ್ಡಾ ಅವರ ವಿಡಿಯೋ ಹಂಚಿಕೊಂಡಿರುವ ಅವರು, This is highly relevant at this moment! ಎಂದು ಒಂದೇ ಸಾಲಿನಲ್ಲಿ ಟಾಂಗ್ ಕೊಟ್ಟಿದ್ದಾರೆ.

ಈ ವಿಡಿಯೋದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ಮಾತನಾಡಿರುವುದಕ್ಕೂ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವುದು ಒಂದೇ ರೀತಿ ಇದೆ ಎಂಬರ್ಥದಲ್ಲಿ ಈ ಟ್ವೀಟ್‌ ಅನ್ನು ವಿಶ್ಲೇಷಣೆ ಮಾಡಲಾಗುತ್ತಿದೆ.

ಸುದೀರ್ಘ ಪತ್ರ ಬರೆದ ಯತ್ನಾಳ್: ಇನ್ನು ಉಚ್ಚಾಟಿತ ಬಿಜೆಪಿ ನಾಯಕ ಹಾಗೂ ಹಿಂದೂ ಫೈರ್‌ ಬ್ರ್ಯಾಂಡ್‌ ಅಂತಲೇ ಖ್ಯಾತಿ ಗಳಿಸಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷದಿಂದ ಉಚ್ಚಾಟನೆಯಾದ ಮೇಲೆ ಸೈಲೆಂಟ್‌ ಆಗಿದ್ದಾರೆ. ಆದರೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಸುದೀರ್ಘ ಪತ್ರವನ್ನು ಅವರು ಬರೆದುಕೊಂಡಿದ್ದಾರೆ. ಇದರಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಪಕ್ಷದ ಅವನತಿಗೆ ಕಾರಣವಾಗಿದ್ದು ಏನು ಎನ್ನುವುದನ್ನು ಅವರು ವಿವರಿಸಿದ್ದಾರೆ.

ಕಾರ್ಯಕರ್ತರ ಪಕ್ಷ ಎಂದು ಫೇಮಸ್‌ ಆಗಿರುವ ಬಿಜೆಪಿಯು ಇದೀಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ನೋವು ತಂದಿದೆ ಎಂದು ಅವರು ವಿವರಿಸಿದ್ದಾರೆ. ಅಡ್ಜಸ್ಟ್ಮೆಂಟ್ ರಾಜಕಾರಣದಿಂದ ಹೇಗೆಲ್ಲಾ ಪಕ್ಷಕ್ಕೆ ಡ್ಯಾಮೇಜ್‌ ಆಗಿದೆ ಎನ್ನುವುದನ್ನು ಅವರು ವಿಶ್ಲೇಷಿಸಲಿ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+