Opposition Meeting: ಕಾಶ್ಮೀರ-ಕನ್ಯಾಕುಮಾರಿವರೆಗಿನ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ: ಯತ್ನಾಳ್

ಬೆಂಗಳೂರು, ಜುಲೈ 17: ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗಿದ್ದು, ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಜಂಟಿ ಸಭೆಗೆ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ಈ ಕುರಿತು ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಶ್ಮೀರ-ಕನ್ಯಾಕುಮಾರಿವರೆಗಿನ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರನ್ನು ಸೋಲಿಸಲು ಒಗ್ಗೂಡುತ್ತಿದ್ದಾರೆ. ರಾಜ್ಯದಲ್ಲಿ ಜಾಮೀನು ಮೇಲೆ ಇರುವ ಎಲ್ಲಾ ಕುಟುಂಬಗಳು ಒಟ್ಟಿಗೆ ಸೇರಿವೆ. ಮತ್ತೆ ನರೇಂದ್ರ ಮೋದಿ ಬಂದ್ರೆ ಜೈಲೇ ಗತಿ ಎಂಬುವುದು ಗೊತ್ತಾಗಿದೆ. ಹಾಗಾಗಿ ಎಲ್ಲಾ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

BJP Leader Basangouda Patil Yatnal

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ತಿಂಗಳಾಗಿದೆ. ಬರಗಾಲದ ಚಾಯೆ ಎದುರಾಗಿದೆ, ರೈತರ ಆತ್ಮಹತ್ಯೆ ಹೆಚ್ಚಿದೆ.ಆತಂಕದ ಛಾಯೆ ಹೆಚ್ಚಾಗಿದೆ, ಅಲ್ಲದೆ ಹಿಂದೂ ಕಾರ್ಯಕರ್ತರ, ಜೋಡಿ ಕೊಲೆಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರಕ್ಕೆ ರೈತರ‌ ಜೀವಕ್ಕಿಂತ ರಾಜಕೀಯವೇ ಮುಖ್ಯವಾಗಿದೆ : ಬೊಮ್ಮಾಯಿ

ಮುಂಗಾರು ಮಳೆ ವೈಫಲ್ಯವಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟ ವಿರೋಧ ಪಕ್ಷಗಳ ಸಭೆ ನಡೆಸುವುದರಲ್ಲಿ ಎಲ್ಲ ಸಮಯ ತೊಡಗಿಸಿದ್ದಾರೆ. ಅವರಿಗೆ ರೈತರ ಜೀವಕ್ಕಿಂತ ರಾಜಕೀಯವೇ ಮುಖ್ಯವಾಗಿದೆ. ಇದೊಂದು ರೈತ ವಿರೋಧಿ ಸರ್ಕಾರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಮುಂಗಾರು ವಿಫಲವಾಗಿ ರೈತರು ಬಿತ್ತಿರುವ ಬೆಳೆ ಮೊಳಕೆಯೊಡೆಯದೇ ವಿಫಲವಾಗಿದೆ. ಹಲವಾರು ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ವರದಿಗಳು ಬರುತ್ತಿವೆ.

ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದೇ ಹಾಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ‌ ಈ ಹಿಂದೆ 2013-18 ರಲ್ಲಿ ಅತಿ ಹೆಚ್ಚು ರೈತರ ಆತ್ಮಹತ್ಯೆಯಾಗಿರುವುದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಅದು ಮರುಕಳಿಸುವಂತೆ ಕಾಣಿಸುತ್ತಿದೆ. ನಾನು ಇದನ್ನು ಖಂಡಸುಸತ್ತೇನೆ ಸರ್ಕಾರ ಕೂಡಲೇ ಎಲ್ಲ ಕ್ರಮ ಕೈಗೊಳ್ಳಲು ನಾನು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು RSS ಗೆ ನೀಡಿದ್ದ ಜಮೀನು ಮಂಜೂರು ಮಾಡಿರುವುದನ್ನು ಹಿಂಪಡೆದು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಅದರಲ್ಲಿ ಬಡವರ ಮಕ್ಕಳಿಗೆ,ಅನಾಥರಿಗೆ ದೊಡ್ಡ ಸಹಾಯ ಆಗುತ್ತಿದೆ. ಜನಸೇವಾ ಟ್ರಸ್ಟ್ ಶಿಕ್ಷಣದದಲ್ಲಿ ದೊಡ್ಡ ಕೆಲಸ ಮಾಡುತ್ತಿದೆ. ಕ್ಯಾಬಿನೆಟ್ ಗೆ ಅಧಿಕಾರ ಇದೆ ಹಾಗಾಗಿ ನಾವು ಜಮೀನು ಮಂಜೂರು ಮಾಡಿದ್ದೇವು. ಇದು ಸೇಡಿನ ರಾಜಕಾರಣ ಅದು ಬಹಳ ನಡೆಯೊದಿಲ್ಲ ಎಂದರು.

ಇನ್ನು ಮುಖ್ಯಮಂತ್ರಿ ಆಫೀಸ್ ನಿಂದ ಹಿಡಿದು ಎಲ್ಲಾ ಕಡೆಗೂ ಹೊರಗಿನವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಟ್ರಾನ್ಸಪರನಲ್ಲಿ ನಾನು ಯಾವುದಕ್ಕೂ ಹಣ ತಗೊಂಡಿಲ್ಲಾ ಅಂತ ಸಿಎಂ ಹೇಳ್ತಾರೆ. ಸಿಎಂ ಸ್ವಂತಕ್ಕೆ ಹಣ ತಗೊಂಡಿಲ್ಲಾ ಅಂತಾ ಜಾರಿಕೊಳ್ಳುತ್ತಿದ್ದಾರೆ. ಇಡೀ ಅವರ ಸರ್ಕಾರ ಮಂತ್ರಿಮಂಡಳದ ಸದಸ್ಯರು,ಭಂಟರು ಲಂಚ ತೆಗೆದುಕೊಳ್ಳುತ್ತಿರುವುದು ಸ್ಪಷ್ಟವಾಗಿದೆ.

ಅಧಿಕಾರಗಳ ವಲಯದಲ್ಲಿ ಬಹಳ ದೊಡ್ಡ ಚರ್ಚೆ ಆಗುತ್ತಿದೆ. ಅದನ್ನು ಮುಚ್ಚಿ ಹಾಕುವ ಸಲುವಾಗಿ ನಾನು ಲಂಚ ತೆಗೆದುಕೊಂಡಿಲ್ಲಾ. ಲಂಚ ತೆಗೆದುಕೊಂಡಿದ್ದಾರೆ‌ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಿತ್ತೆನೆ ಅಂತ ಹೇಳುತ್ತಿದ್ದಾರೆ. ಅಂದರೆ ಅದರ ಅರ್ಥ ಸರ್ಕಾರದಲ್ಲಿ ಬೇರೆಯವರು ತಗೊಂಡ್ರೆ ಮುಖ್ಯಮಂತ್ರಿಗಳ ಜವಾಬ್ದಾರಿ ಮುಗಿತಾ? ಎಲ್ಲಾ ಸ್ಪಷ್ಟವಾಗಿ ಕಾಣ್ತಾ ಇದೆ,ಸಿಎಂ ಜಾರಿಕೊಳ್ಳುವ ಪ್ರಯತ್ನ ಮಾಡ್ತಾ ಇದ್ದಾರೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+