ಮಾತೆ ಮಹಾದೇವಿ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು, ಮಾರ್ಚ್ 14: ಕೂಡಲಸಂಗಮದ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಒಂದು ವಾರದಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರು ತೀವ್ರ ಉಸಿರಾಟದ ಸಮಸ್ಯೆ ಮತ್ತು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆ. ಒಂದು ವರ್ಷದಿಂದ ಅವರು ಮೂತ್ರಪಿಂಡ ವೈಫಲ್ಯಕ್ಕೆ ಒಳಗಾಗಿದ್ದು, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು.

ಮಾತೆ ಮಹಾದೇವಿ ಅವರಿಗೆ ಹೆಚ್ಚಿನ ಚಿಕಿತ್ಸೆ ಸೌಲಭ್ಯ ನೀಡುವ ಸಲುವಾಗಿ ರಾಜಾಜಿನಗರದಲ್ಲಿರುವ ಬಸವ ಮಂಟಪದಲ್ಲಿ ಸಭೆ ನಡೆಸಲಾಗಿದೆ. ಗೃಹ ಸಚಿವ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಮಹಾದೇವಿ ಅವರಿಗೆ ಎಲ್ಲಿ ಚಿಕಿತ್ಸೆ ಮುಂದುವರಿಸಬೇಕು ಎಂಬುದರ ಬಗ್ಗೆ ಚರ್ಚಿಸಲಾಗಿದೆ.

basava dharma peetha Mate mahadevi health condition critical treatment Manipal hospital

ಎಂಬಿ ಪಾಟೀಲ್ ಅವರು ಬುಧವಾರ ಮಣಿಪಾಲ್ ಆಸ್ಪತ್ರೆಗೆ ತೆರಳಿ ಮಾತೆ ಮಹಾದೇವಿ ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದರು.

ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆಯ ಹೋರಾಟದಲ್ಲಿ ಮಾತೆ ಮಹಾದೇವಿ ಮುಂಚೂಣಿಯಲ್ಲಿದ್ದರು. ದೆಹಲಿಗೂ ತೆರಳಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+