Get Updates
Get notified of breaking news, exclusive insights, and must-see stories!

ಬಸವ ಜಯಂತಿ; ಸಮಾಜ ಸುಧಾರಣೆಯ ಆಶಯ ಪಾಲಿಸೋಣ

ಬೆಂಗಳೂರು, ಏಪ್ರಿಲ್ 26 : ಭಾನುವಾರ ಬಸವ ಜಯಂತಿ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೇರಿದಂತೆ ನಾಡಿನ ವಿವಿಧ ಗಣ್ಯರು ರಾಜ್ಯದ ಜನರಿಗೆ ಬಸವ ಜಯಂತಿಯ ಶುಭಾಶಯಗಳನ್ನು ಕೋರಿದ್ದಾರೆ.

ಬಸವ ಜಯಂತಿಯನ್ನು ಸರ್ಕಾರಿ ಕಚೇರಿಗಳಲ್ಲಿ ಈ ಬಾರಿ ಸರಳವಾಗಿ ಆಚರಿಸಲಾಗುತ್ತಿದೆ. ಕೊರೊನಾ ಸೋಂಕು ಹರಡದಂತೆ ತಡೆಯಲು ಲಾಕ್‍ ಡೌನ್ ಜಾರಿಯಲ್ಲಿದೆ. ಆದ್ದರಿಂದ, ಹೆಚ್ಚು ಜನರು ಸೇರದೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.

ಕರ್ನಾಟಕದ ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಸವಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸಾಂಕೇತಿಕವಾಗಿ ಬಸವ ಜಯಂತಿ ಆಚರಿಸಲಾಗುತ್ತದೆ. ಜನರು ಮನೆಯಲ್ಲಿಯೇ ಇರಬೇಕು ಎಂದು ಮನವಿ ಮಾಡಲಾಗಿದೆ.

Basava Jayanthi

12ನೇ ಶತಮಾನದ ತತ್ವಜ್ಞಾನಿ, ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದ ಬಸವಣ್ಣ ದೇಶ ಕಂಡ ಸಾಮಾಜಿಕ ಸುಧಾಕರ. ವಚನ ಸಾಹಿತ್ಯದ ಮೂಲಕ ಜನರನ್ನು ತಲುಪಿದ ಸಾಹಿತಿ. ಸಮಾನತೆಯ ಪಾಠವನ್ನು ವಿಶ್ವಕ್ಕೆ ಸಾರಿದ ಮಹಾನ್ ಜ್ಞಾನಿ.

ಆಡು ಭಾಷೆಯಲ್ಲಿ ಸರಳವಾಗಿ ಜನರಿಗೆ ಅರ್ಥವಾಗುವಂತೆ ವಚನಗಳನ್ನು ರಚನೆ ಮಾಡಿದ ಬಸವಣ್ಣನವರು, ಸಮಾಜದಲ್ಲಿ ಹಲವಾರು ಬದಲಾವಣೆಗಳನ್ನು ತಂದರು. ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ಹೋಗಲಾಡಿಸಿದರು.

ಇಷ್ಟಲಿಂಗ ಪೂಜೆಯನ್ನು ಪರಿಚಯಿಸಿದರು. ಶಿವ ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಎಲ್ಲರು ಇಷ್ಟಲಿಂಗವನ್ನು ಧರಿಸಿ ಪೂಜಿಸಬಹುದು ಎಂದು ಸಮಾಜಕ್ಕೆ ಕರೆ ನೀಡಿದರು. ಮಹಿಳೆಯರು ಮತ್ತು ಪುರುಷರಿಗೆ ಸಮಾನವಾದ ಹಕ್ಕು ಸಿಗಬೇಕು ಎಂದು ಪ್ರತಿಪಾದಿಸಿದರು.

ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದ ಬಸವಣ್ಣನವರು ಇಡೀ ವಿಶ್ವಕ್ಕೆ ಪ್ರಜಾಪ್ರಭುತ್ವದಕ್ಕೆ 12ನೇ ಶತಮಾಡನದಲ್ಲಿ ಅಡಿಪಾಯ ಹಾಕಿಕೊಟ್ಟರು. ಅವರ ಅನುಭವ ಮಂಟಪದ ಆಲೋಚನೆ ಇಂದಿಗೂ ಪ್ರಸ್ತುತವಾಗಿದೆ.

ಬಸವಣ್ಣನವರ ಆದರ್ಶಗಳನ್ನು ಪಾಲನೆ ಮಾಡಿದರೆ ಸಮಾಜದಲ್ಲಿ ಅಮೂಲಾಗ್ರವಾದ ಬದಲಾವಣೆ ಕಂಡುಕೊಳ್ಳಲು ಸಾಧ್ಯವಿದೆ. ವರ್ಣ, ವರ್ಗ, ಲಿಂಗ ಬೇಧವನ್ನು ವಚನಗಳಲ್ಲಿ ಧಿಕ್ಕರಿಸಿದವರು ಬಸವಣ್ಣ.

ಕಾಯಕದಲ್ಲಿ ನಂಬಿಕೆ ಇಟ್ಟುಕೊಳ್ಳಬೇಕು ಎಂಬ ಸಂದೇಶವನ್ನು ಜಗತ್ತಿಗೆ ಸಾರಿದವರು ಬಸವಣ್ಣ. ಅಂದು ಅವರು ನುಡಿದಂತೆ ನಡೆದು ಮಾದರಿಯಾದರು.

ಜಗತ್ತಿಗೆ ವೈಚಾರಿಕತೆಯ ಬೆಳಕು ನೀಡಿದ ಬಸವಣ್ಣ ಹುಟ್ಟಿದ ಸ್ಥಳ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ. ಇಂದಿನ ದಿನಗಳಲ್ಲಿಯೂ ಬಸವಣ್ಣನವರ ತತ್ವಗಳು ಅನುಕರಣೀಯ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+