ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ನ ಐತಿಹಾಸಿಕ ದುರಾಭ್ಯಾಸ ಬಹಿರಂಗ ಪಡಿಸಿದ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಮಾರ್ಚ್ 26: ಬಸವಕಲ್ಯಾಣ ಅಸೆಂಬ್ಲಿ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿದ ವಿಚಾರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಲವಾದ ತಿರುಗೇಟು ನೀಡಿದ್ದಾರೆ.

ಏಪ್ರಿಲ್ ಹದಿನೇಳರಂದು ಚುನಾವಣೆ ನಡೆಯಲಿದ್ದು, ಜೆಡಿಎಸ್ ತನ್ನ ಅಭ್ಯರ್ಥಿಯಾಗಿ ಯಸ್ರಬ್ ಆಲಿ ಖಾದ್ರಿಯವರನ್ನು ಕಣಕ್ಕಿಳಿಸಿದೆ. ಗುರುವಾರ (ಮಾ 25) ನಾಮಪತ್ರವನ್ನು ಇವರು ಸಲ್ಲಿಸಿದ್ದರು.

ಬಸವಕಲ್ಯಾಣ ಉಪ ಚುನಾವಣೆ; ಒಳ ಒಪ್ಪಂದ ರಹಸ್ಯ ಬಯಲು!ಬಸವಕಲ್ಯಾಣ ಉಪ ಚುನಾವಣೆ; ಒಳ ಒಪ್ಪಂದ ರಹಸ್ಯ ಬಯಲು!

ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದ ಬಗ್ಗೆ ಸಿದ್ದರಾಮಯ್ಯ ಲೇವಡಿ ಮಾಡುತ್ತಾ, "ಬಸವಕಲ್ಯಾಣ ಕ್ಷೇತ್ರದಲ್ಲಿರುವ ಮುಸ್ಲಿಂ ಮತಬ್ಯಾಂಕ್ ಅನ್ನು ಒಡೆಯಲು, ಜೆಡಿಎಸ್ ಪಕ್ಷ, ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿದೆ"ಎಂದು ಆರೋಪಿಸಿದ್ದರು.

ಇದಕ್ಕೆ ಸಾಲುಸಾಲು ಟ್ವೀಟ್ ಮೂಲಕ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. "ಮಂಗಳೂರಿನಲ್ಲಿ ಸಿಎಎ ಪ್ರತಿಭಟನೆ ವೇಳೆ ಹೆಣಗಳು ಬಿದ್ದು, ಅಲ್ಪಸಂಖ್ಯಾತರು ಆತಂಕದಲ್ಲಿದ್ದಾಗ ಕಾಂಗ್ರೆಸ್‌ ನಾಯಕರು ಬಿಲ ಸೇರಿದ್ದರು. ಅಂದು ಮುಸ್ಲಿಮರ ಬೆಂಬಲಕ್ಕೆ ನಿಂತಿದ್ದು ಜೆಡಿಎಸ್‌. ಇಂದು ಬಸವಕಲ್ಯಾಣದಲ್ಲಿ ನಾವು ಮುಸ್ಲಿಂ ಅಭ್ಯರ್ಥಿಯನ್ನು ಹಾಕುತ್ತಲೇ ಕಾಂಗ್ರೆಸ್‌ ತಾನು ಮುಸ್ಲಿಮರ ರಕ್ಷಕ ಎಂದು ಎದೆತಟ್ಟಿಕೊಂಡು ಮುಂದೆ ಬಂದಿದೆ"ಎಂದು ಎಚ್ಡಿಕೆ ತಿರುಗೇಟು ನೀಡಿದ್ದಾರೆ.

ಸಚಿವ ಸುಧಾಕರ್ ಹೇಳಿದ 'ಅನೈತಿಕ ಸಂಬಂಧ': ಕುಮಾರಸ್ವಾಮಿ ಕೊಟ್ಟ ಮುತ್ತಿನಂತಹ ಪ್ರತಿಕ್ರಿಯೆಸಚಿವ ಸುಧಾಕರ್ ಹೇಳಿದ 'ಅನೈತಿಕ ಸಂಬಂಧ': ಕುಮಾರಸ್ವಾಮಿ ಕೊಟ್ಟ ಮುತ್ತಿನಂತಹ ಪ್ರತಿಕ್ರಿಯೆ

 ಸಿದ್ದರಾಮಯ್ಯ ವಿರುದ್ದ ಎಚ್ಡಿಕೆ ವಾಗ್ದಾಳಿ

ಸಿದ್ದರಾಮಯ್ಯ ವಿರುದ್ದ ಎಚ್ಡಿಕೆ ವಾಗ್ದಾಳಿ

ನಮ್ಮ ರಾಜ್ಯ, ನಮ್ಮ ನೆಲ, ನಮ್ಮ ಪಕ್ಷ, ನಮ್ಮ ಅಭ್ಯರ್ಥಿ. ಇದರಲ್ಲಿ ಜೆಡಿಎಸ್‌ ಯಾರ ಅಪ್ಪಣೆಗೆ ಕಾಯಬೇಕು? ಯಾವ ದೊಣ್ಣೆ ನಾಯಕನ ಆಜ್ಞೆ ಆಗಬೇಕು ನಮಗೆ. ಜನರಿಗೆ ಬೇಕಾದ ಅಭ್ಯರ್ಥಿಗಳನ್ನು ನಾವು ಹಾಕುತ್ತೇವೆ. ಅದರಲ್ಲಿ ನಮಗೆ ಧರ್ಮ ನಗಣ್ಯ. ಪ್ರತಿಯೊಂದರಲ್ಲೂ ಹಿಂದೂ-ಮುಸ್ಲಿಂ ಎಂದು ಹುಡುಕುವವರಿಗೆ ಜನ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಬೇಕು.

ಕಾಂಗ್ರೆಸ್‌ನ ಐತಿಹಾಸಿಕ ದುರಭ್ಯಾಸ

"ಮುಸ್ಲಿಮರನ್ನು ಮತಗಳಾಗಿ ನೋಡುವುದು ಕಾಂಗ್ರೆಸ್‌ನ ಐತಿಹಾಸಿಕ ದುರಭ್ಯಾಸ. ಅದಕ್ಕಾಗಿಯೇ ಮುಸ್ಲಿಮರನ್ನು ಕಾಂಗ್ರೆಸ್‌ ನಮ್ಮ ಮತ ಎನ್ನುತ್ತದೆ. ನಮ್ಮವರು ಅನ್ನುವುದಿಲ್ಲ. ಕಾಂಗ್ರೆಸ್‌ನ ಇಂಥ ತಪ್ಪುಗಳಿಂದಲೇ ಬಿಜೆಪಿ ಈ ಹಂತಕ್ಕೆ ಬೆಳೆದಿದೆ. ದೇಶದಲ್ಲಿ ಕೋಮು ಭಾವನೆಗಳು ಈ ಮಟ್ಟಕ್ಕೆ ಕೆರಳಿರುವುದರ ಹಿಂದೆ ಕಾಂಗ್ರೆಸ್‌ನ ಪ್ರಮಾದಗಳಿವೆ" ಕುಮಾರಸ್ವಾಮಿ ಟ್ವೀಟ್.

 ಬಸವಕಲ್ಯಾಣದಲ್ಲಿ ಜೆಡಿಎಸ್‌ ಬಿಜೆಪಿಯೊಂದಿಗೆ ಒಳ ಒಪ್ಪಂದ

ಬಸವಕಲ್ಯಾಣದಲ್ಲಿ ಜೆಡಿಎಸ್‌ ಬಿಜೆಪಿಯೊಂದಿಗೆ ಒಳ ಒಪ್ಪಂದ

"ಬಸವಕಲ್ಯಾಣದಲ್ಲಿ ಜೆಡಿಎಸ್‌ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು 'ಮಹಾನ್‌ ನಾಯಕ'ರು ಹೇಳಿದ್ದಾರೆ. ಪ್ರತಿಯೊಂದಕ್ಕೂ ಒಳ ಒಪ್ಪಂದ, ಒಳಸಂಚು ಮಾಡಿದವರಿಗಷ್ಟೇ ಒಳ ಒಪ್ಪಂದದ ಕನವರಿಕೆ. ಆಪರೇಷನ್‌ ಕಮಲದಲ್ಲಿ, ಮೈತ್ರಿ ಸರ್ಕಾರ ಉರುಳಿದ್ದರಲ್ಲಿ ಅಂಥ ಒಳಒಪ್ಪಂದಗಳು ಈಗಾಗಲೇ ಬಯಲಾಗಿವೆ. ಜೆಡಿಎಸ್‌ಗೆ ಇಂಥ ದುರ್ಬುದ್ಧಿ ಇಲ್ಲ" - ಎಚ್ಡಿಕೆ ಟ್ವೀಟ್.

Recommended Video

ಇಬ್ಬರ ರಾಜಕೀಯ ಭವಿಷ್ಯಕ್ಕೆ ಖಳನಾಯಕಿ ಆಗ್ತಾರ ಸಿಡಿ ಗರ್ಲ್ | Oneindia Kannada
 ಕಾಂಗ್ರೆಸ್‌ನ ಮಹಾನ್‌ ನಾಯಕರು ನಿಲ್ಲಿಸಿದರೆ ಉತ್ತಮ

ಕಾಂಗ್ರೆಸ್‌ನ ಮಹಾನ್‌ ನಾಯಕರು ನಿಲ್ಲಿಸಿದರೆ ಉತ್ತಮ

"ನಮ್ಮ ಆಯ್ಕೆ, ನಿರ್ಧಾರಗಳ ಬಗ್ಗೆ ಮಾತನಾಡುವುದನ್ನು ಕಾಂಗ್ರೆಸ್‌ನ ಮಹಾನ್‌ ನಾಯಕರು ನಿಲ್ಲಿಸಿದರೆ ಉತ್ತಮ. ಇಲ್ಲವಾದಲ್ಲಿ ಜಾತ್ಯತೀತವಾದಿ ಮುಖವಾಡ ಧರಿಸಿರುವ ಅವರ ಕೋಮುವಾದಿ ಮುಖವನ್ನು ಬಯಲು ಮಾಡಬೇಕಾಗುತ್ತದೆ. ಶತಮಾನಗಳಿಂದ ವೀರನಾಗಿ ಮಲಗಿದ್ದ ಟಿಪ್ಪು ಸುಲ್ತಾನನ್ನು ದೇಶದ್ರೋಹಿಯನ್ನಾಗಿ ಮಾಡಿದ ಮಹಾನ್‌ ನಾಯಕರು ತೆಪ್ಪಗಿದ್ದರೆ ಸರಿ" ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.

English summary
Basavakalyan By Election JDS Candidate: H D Kumaraswamy Reply To Siddaramaiah Statement
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X