ಜೆಡಿಎಸ್ ತೊರೆದ ಮಲ್ಲಿಕಾರ್ಜುನ ಖೂಬಾ, ಬಿಜೆಪಿಗೆ ಸೇರ್ಪಡೆ
ಬೀದರ್, ಏಪ್ರಿಲ್ 01 : ಬಸವ ಕಲ್ಯಾಣ ಕ್ಷೇತ್ರದ ಶಾಸಕ ಮಲ್ಲಿಕಾರ್ಜುನ ಖೂಬಾ ಜೆಡಿಎಸ್ ತೊರೆದಿದ್ದಾರೆ. ಮುಂದಿನವಾರ ಅವರು ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ.
ಶನಿವಾರ ಮಲ್ಲಿಕಾರ್ಜುನ ಖೂಬಾ ಅವರು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 'ಶೀಘ್ರದಲ್ಲಿಯೇ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದೇನೆ' ಎಂದು ಖೂಬಾ ಹೇಳಿದ್ದಾರೆ.
'ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನಲ್ಲಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದೇನೆ. ಟಿಕೆಟ್ ಕೊಡುವಂತೆ ಷರತ್ತು ವಿಧಿಸಿಲ್ಲ. ಆದರೂ ಆಕಾಂಕ್ಷಿಯಾಗಿದ್ದೇನೆ' ಎಂದು ಮಲ್ಲಿಕಾರ್ಜುನ ಖೂಬಾ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಸೇರಲಿದ್ದೇನೆ ಎಂದು ಮಲ್ಲಿಕಾರ್ಜುನ ಖೂಬಾ ಅವರು ಕೆಲವು ದಿನಗಳ ಹಿಂದೆಯೇ ಘೋಷಣೆ ಮಾಡಿದ್ದರು. ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಕ್ಕೆ ಸ್ಥಳೀಯ ಟಿಕೆಟ್ ಆಕಾಂಕ್ಷಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಮಲ್ಲಿಕಾರ್ಜುನ ಖೂಬಾ ಅವರು ಬಸವಕಲ್ಯಾಣ ಕ್ಷೇತ್ರದಿಂದ 2013ರ ಚುನಾವಣೆಯಲ್ಲಿ 37,494 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್‌ನ ಬಿ.ನಾರಾಯಣ ರಾವ್ 21,601, ಬಿಜೆಪಿಯ ಸಂಜಯ್ ಡಿ.ಪಟವಾರಿ 17,431 ಮತಗಳನ್ನು ಪಡೆದಿದ್ದರು.












Click it and Unblock the Notifications