• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜೆಡಿಎಸ್‌ ತೊರೆದ ಮಲ್ಲಿಕಾರ್ಜುನ ಖೂಬಾ, ಬಿಜೆಪಿಗೆ ಸೇರ್ಪಡೆ

|
Google Oneindia Kannada News

ಬೀದರ್, ಏಪ್ರಿಲ್ 01 : ಬಸವ ಕಲ್ಯಾಣ ಕ್ಷೇತ್ರದ ಶಾಸಕ ಮಲ್ಲಿಕಾರ್ಜುನ ಖೂಬಾ ಜೆಡಿಎಸ್ ತೊರೆದಿದ್ದಾರೆ. ಮುಂದಿನವಾರ ಅವರು ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ.

ಶನಿವಾರ ಮಲ್ಲಿಕಾರ್ಜುನ ಖೂಬಾ ಅವರು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 'ಶೀಘ್ರದಲ್ಲಿಯೇ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದೇನೆ' ಎಂದು ಖೂಬಾ ಹೇಳಿದ್ದಾರೆ.

ಕ್ಷೇತ್ರ ಪರಿಚಯ : ಬಸವ ಕಲ್ಯಾಣದಲ್ಲಿ ಗೆಲ್ಲುವವರು ಯಾರು?ಕ್ಷೇತ್ರ ಪರಿಚಯ : ಬಸವ ಕಲ್ಯಾಣದಲ್ಲಿ ಗೆಲ್ಲುವವರು ಯಾರು?

'ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನಲ್ಲಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದೇನೆ. ಟಿಕೆಟ್ ಕೊಡುವಂತೆ ಷರತ್ತು ವಿಧಿಸಿಲ್ಲ. ಆದರೂ ಆಕಾಂಕ್ಷಿಯಾಗಿದ್ದೇನೆ' ಎಂದು ಮಲ್ಲಿಕಾರ್ಜುನ ಖೂಬಾ ಸ್ಪಷ್ಟಪಡಿಸಿದ್ದಾರೆ.

ಬೀದರ್ ರಾಜಕೀಯ : 3 ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಣೆ!ಬೀದರ್ ರಾಜಕೀಯ : 3 ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಣೆ!

ಬಿಜೆಪಿ ಸೇರಲಿದ್ದೇನೆ ಎಂದು ಮಲ್ಲಿಕಾರ್ಜುನ ಖೂಬಾ ಅವರು ಕೆಲವು ದಿನಗಳ ಹಿಂದೆಯೇ ಘೋಷಣೆ ಮಾಡಿದ್ದರು. ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಕ್ಕೆ ಸ್ಥಳೀಯ ಟಿಕೆಟ್ ಆಕಾಂಕ್ಷಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸೇರುವುದಾಗಿ ಘೋಷಿಸಿದ ಜೆಡಿಎಸ್ ಶಾಸಕಬಿಜೆಪಿ ಸೇರುವುದಾಗಿ ಘೋಷಿಸಿದ ಜೆಡಿಎಸ್ ಶಾಸಕ

ಮಲ್ಲಿಕಾರ್ಜುನ ಖೂಬಾ ಅವರು ಬಸವಕಲ್ಯಾಣ ಕ್ಷೇತ್ರದಿಂದ 2013ರ ಚುನಾವಣೆಯಲ್ಲಿ 37,494 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್‌ನ ಬಿ.ನಾರಾಯಣ ರಾವ್ 21,601, ಬಿಜೆಪಿಯ ಸಂಜಯ್ ಡಿ.ಪಟವಾರಿ 17,431 ಮತಗಳನ್ನು ಪಡೆದಿದ್ದರು.

English summary
Another set back for JD (S) in the North Karnataka. Basavakalyan MLA Mallikarjuna Kuba resigned party primary membership. He will join BJP soon. He may contest for Karnataka assembly elections 2018 as BJP candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X