Basavanna: ದೇವರು - ದೇವಸ್ಥಾನಗಳ ಬಗ್ಗೆ ಬಸವಣ್ಣನವರಿಗೆ ನಂಬಿಕೆ ಇರಲಿಲ್ಲ: ಸಿದ್ದರಾಮಯ್ಯ
Basavanna: ದೇವರು - ದೇವಸ್ಥಾನಗಳ ಬಗ್ಗೆ ಬಸವಣ್ಣನವರಿಗೆ ನಂಬಿಕೆ ಇರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕರ್ನಾಟಕದ ಬಹುಮುಖ ಪರಂಪರೆಯನ್ನು ಪ್ರತಿನಿಧಿಸುವ "ಕನ್ನಡ ಸಾಮರಸ್ಯ ನೆಲೆಗಳು" ಕೃತಿಗಳನ್ನು ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಕನ್ನಡ ಸಾಮರಸ್ಯ ನೆಲೆ ಯೋಜನೆಯಡಿ ನೂರು ಪುಸ್ತಕಗಳನ್ನು ಹೊರತರಲು ಉದ್ದೇಶಿಸಿದ್ದು, ಉಳಿದ 59 ಪುಸ್ತಕಗಳು ಸಹ ಶೀಘ್ರ ಬಿಡುಗಡೆಯಾಗಲಿದೆ. ಇಂದು ಬಿಡುಗಡೆಯಾಗಿರುವ ಎಲ್ಲವೂ ಯೋಗ್ಯವಾದ ಪುಸ್ತಕಗಳಾಗಿವೆ. ನಮ್ಮ ದೇಶದಲ್ಲಿ ಅನೇಕ ಭಾಷೆ, ಧರ್ಮ, ಸಂಸ್ಕೃತಿಗಳ ಜನ ಇದ್ದು, ರಾಜ್ಯದಲ್ಲಿಯೂ ವೈವಿಧ್ಯತೆ ಇದೆ. ಇದರಲ್ಲಿಯೇ ಏಕತೆಯನ್ನು ನಾವು ಸಾಧಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಮಾರಂಭದಲ್ಲಿ ಹೇಳಿದರು.
ಬಸವ, ಬಾಬಾ ಸಾಹೇಬ್ ಅಂಬೇಡ್ಕರ್, ಬುದ್ಧನಿಂದ ಹಿಡಿದು ಅನೇಕರು ಸಮಾಜ ಸುಧಾರಣೆ ಮಾಡಲು ಪ್ರಯತ್ನಿಸಿದ್ದಾರೆ. ಸಂವಿಧಾನ ಜಾರಿಯಾದ ನಂತರ ಸಮಾಜದ ಸುಧಾರಣೆಯಲ್ಲಿ ವೇಗ ಹೆಚ್ಚಿದೆಯಾದರೂ ಸಾಮಾಜಿಕ ವ್ಯವಸ್ಥೆ ನೂರಕ್ಕೆ ನೂರು ಬದಲಾವಣೆಯಾಗಿಲ್ಲ. ಜಡತ್ವದಿಂದ ಕೂಡಿರುವ ಜಾತಿ ವ್ಯವಸ್ಥೆಯಲ್ಲಿ ಬದಲಾವಣೆಯಾಗಲು ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಬರಬೇಕು. ಬಸವಣ್ಣ ಹೇಳಿದ ಇವ ನಮ್ಮವ ಎನ್ನುವ ಭಾವನೆ ಎಲ್ಲರಲ್ಲಿ ಬರಬೇಕು. ವೈಚಾರಿಕತೆ, ವೈಜ್ಞಾನಿಕತೆ ಹಾಗೂ ಮಾನವೀಯತೆ ನಮ್ಮಲ್ಲಿ ಬರಬೇಕು. ಈ ಗುಣಗಳು ಇಲ್ಲದಿದ್ದರೆ ಅದು ಜೀವನದ ಶಿಕ್ಷಣವಲ್ಲ. ಬದುಕುವ ದಾರಿ ಮಾತ್ರ.
Basavanna: ದೇವರು - ದೇವಸ್ಥಾನಗಳ ಬಗ್ಗೆ ಬಸವಣ್ಣನವರಿಗೆ ನಂಬಿಕೆ ಇರಲಿಲ್ಲ: ಸಿದ್ದರಾಮಯ್ಯ
ಇನ್ನು ದೇವರು - ದೇವಸ್ಥಾನಗಳ ಬಗ್ಗೆ ಬಸವಣ್ಣನವರಿಗೆ ನಂಬಿಕೆ ಇರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.
ಯುವಕರಲ್ಲಿ ಮಾನವೀಯತೆ ಹೆಚ್ಚಾಗಬೇಕೆನ್ನುವ ನಿಟ್ಟಿನಲ್ಲಿ ಇಂದು ಬಿಡುಗಡೆಯಾಗಿರುವ ಪುಸ್ತಕಗಳು ಪ್ರಯೋಜನಕಾರಿಯಾಗಲಿವೆ. ಇವು ಯುವಜನರನ್ನು ತಲುಪದೇ ಹೋದರೆ, ಅದರಿಂದ ಬದಲಾವಣೆಯಾಗದೆ ಹೋದರೆ ಅದರ ಉದ್ದೇಶ ಸಫಲವಾಗುವುದಿಲ್ಲ. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ.
ಇಂದಿನ ಪೀಳಿಗೆ ಪಂಪ, ಕನಕದಾಸರು, ಬಸವಣ್ಣ, ಕುವೆಂಪು ಮುಂತಾದವರ ಬಗ್ಗೆ ತಿಳಿದುಕೊಳ್ಳಬೇಕು. ಈ ಪುಸ್ತಕಗಳನ್ನು ಹೊರತಂದಿರುವುದು ಉತ್ತಮ ಕೆಲಸವಾಗಿದೆ.
ದೇವರು - ದೇವಸ್ಥಾನಗಳ ಬಗ್ಗೆ ಬಸವಣ್ಣನವರಿಗೆ ನಂಬಿಕೆ ಇರಲಿಲ್ಲ. ಕುವೆಂಪುರವರು ಗುಡಿ, ಚರ್ಚ್, ಮಸೀದಿಗಳನ್ನು ಬಿಟ್ಟು ಹೊರಬರಲು ಕರೆ ನೀಡಿದರು. ಮನುಷ್ಯತ್ವವಿಲ್ಲದೆ ಪೂಜೆ ಮಾಡಿದರೆ ಫಲ ದೊರಕುವುದಿಲ್ಲ ಎಂದು ಹೇಳಿದ್ದಾರೆ.
-
Electric Vehicle Tax: ಎಲೆಕ್ಟ್ರಿಕ್ ಕಾರುಗಳ ಮೇಲೆ ಟ್ಯಾಕ್ಸ್ ಬೇಡ ಎಂದ ಸಂಸದ ತೇಜಸ್ವಿ ಸೂರ್ಯ, ಸಿಎಂಗೆ ಪತ್ರ -
Pawan Kalyan: ಪವನ್ ಕಲ್ಯಾಣ್ ವಿರುದ್ಧ ಕಾಮಿಡಿ ವಿಡಿಯೋ: ಸ್ಟ್ಯಾಂಡ್ಅಪ್ ಕಾಮಿಡಿಯನ್ ಅನುದೀಪ್ ಕಟಿಕಲಾ ಬಂಧನ -
Pizza 4P's ಬೆಂಗಳೂರಲ್ಲಿ ಶಾಂತಿಗಾಗಿ ಪಿಜ್ಜಾ ಎಂದಾಯ್ತು: ಜಪಾನ್ ಪಿಜ್ಜಾ ಸಂಸ್ಥೆ ಹೇಳಿದ್ದೇನು - ಕನ್ನಡಿಗರು ಏನಂದ್ರು -
Bengaluru Migration: ಬೆಂಗಳೂರಿಗೆ ನಾರ್ಥಿಗಳ ವಲಸೆಗೆ ಇದೇ ಕಾರಣ, ವೈರಲ್ ಪೋಸ್ಟ್ - ಚರ್ಚೆ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
Viral: ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪಾದಚಾರಿಗಳೇ ಕಾರಣವೆಂದ ಸಂಸ್ಥಾಪಕ: ಕಿಡಿಕಾರಿದ ನೆಟ್ಟಿಗರು -
Amruthadhare Serial: ಜೈದೇವ್ ಅಟ್ಟಹಾಸಕ್ಕೆ ಬ್ರೇಕ್ ಬೇಕು: ಗೌತಮ್ ದಿವಾನ್ಗೆ ಆಕ್ಷನ್ ಕೊಡಿ ಎಂದ ವೀಕ್ಷಕರು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು












Click it and Unblock the Notifications