ನಾನು ಸೋಲಲು ಚಿಕ್ಕಬಳ್ಳಾಪುರದ ಕೆ.ಸುಧಾಕರ್ ಮಾತ್ರವಲ್ಲ, ಬೊಮ್ಮಾಯಿಯೂ ಕಾರಣ: ಎಂಟಿಬಿ ನಾಗರಾಜ್‌

ಬೆಂಗಳೂರು, ಜೂನ್‌ 11: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋಲಲು ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್ ಮಾತ್ರವಲ್ಲ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯೂ ಸಹ ಕಾರಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್‌ ಆರೋಪಿಸಿದ್ದಾರೆ.

ಈ ಕುರಿತು ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ನನಗೆ ಮೋಸ ಮಾಡಿದ್ದಾರೆ. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋಲಬೇಕಾಯಿತು' ಎಂದು ಹೊಸಕೋಟೆ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಎಂ.ಟಿ.ಬಿ ನಾಗರಾಜ್‌ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.
ಇನ್ನೂ 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸುತ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ನಾನು ಆಕಾಂಕ್ಷಿ ಅಲ್ಲ, ಚುನಾವಣೆಗೆ ಸ್ಪರ್ಧಿಸುವ ಆಸಕ್ತಿಯೂ ನನಗೆ ಇಲ್ಲ ಎಂದು ಮಾಧ್ಯಮಗಳ ಮೂಲಕ ಸ್ಪಷ್ಟಪಡಿಸಿದ್ದಾರೆ.

Basavaraj Bommai Also Cheated On Me Says MTB Nagaraj

ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್ ಅವರಿಗೆ ನೀಡಿದರು. ಆ ಮೂಲಕ ಆ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ಸುವರ್ಣ ಅವಕಾಶ ತಪ್ಪಿಸಿ ಮೋಸ ಮಾಡಿದರು. ಹೀಗಾಗಿ ನಾನು ಚುನಾವಣೆಯಲ್ಲಿ ಸೋಲಬೇಕಾಯಿತು ಎಂದು ಹರಿಹಾಯ್ದರು.

ಇನ್ನೂ ಪಕ್ಷ ಅಧಿಕಾರದಲ್ಲಿದ್ದಾಗ ಹೋಸಕೋಟೆ ತಾಲ್ಲೂಕಿನ ಪಕ್ಷದ ಮುಖಂಡರಿಗೆ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ಸೇರಿದಂತೆ ಸರ್ಕಾರದಲ್ಲಿ ಸ್ಥಾನಮಾನ ನೀಡಲಿಲ್ಲ. ಸ್ಥಳೀಯ ಕೆಲವರಿಗಾದರೂ ಅವಕಾಶ ನೀಡಿದಿದ್ದರೆ ನನ್ನ ಕೈ ಮತ್ತಷ್ಟು ಬಲಗೊಳ್ಳುತ್ತಿತ್ತು. ಆದರೆ ಹಾಗಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ ನಡೆಸಿದರು.

Basavaraj Bommai Also Cheated On Me Says MTB Nagaraj

ಹೊಸಕೋಟೆ ಕ್ಷೇತ್ರ ಮುಸ್ಲಿಂ ಸಮುದಾಯದ ವಿರುದ್ದವೂ ತರಾಟೆಗೆ ತೆಗೆದುಕೊಂಡ ಅವರು, ನಾನು ಅಪಾರವಾಗಿ ನಂಬಿದ್ದ ಕ್ಷೇತ್ರದ ಅಲ್ಪಸಂಖ್ಯಾತರು ಕೂಡ ಚುನಾವಣೆಯಲ್ಲಿ ನನಗೆ ಮೋಸ ಮಾಡಿದರು. ನನ್ನ ಕ್ಷೇತ್ರದ ಅಲ್ಪಸಂಖ್ಯಾತರಿಗೆ ನಾನು ನನ್ನ ಶಕ್ತಿ ಮೀರಿ ಸಹಾಯ ಮಾಡಿದ್ದೇನೆ. ಆದರೂ, ಅವರು ನನಗೆ ಮೋಸ ಮಾಡಿದರು. ನನಗೇ ಮತ ನೀಡುವುದಾಗಿ ಕುರಾನ್ ಮತ್ತು ಅಲಾ ವಿನ ಮೇಲೆಯೂ ಆಣೆ, ಪ್ರಮಾಣ ಮಾಡಿದ್ದ ಅವರು ನನಗೆ ಮತ ನೀಡದೆ ಮೋಸ ಮಾಡಿದರು. ಮುಸ್ಲಿಮರು ಬಿಜೆಪಿಗೆ ಮತ ಹಾಕಲಿಲ್ಲ. ಬಿಜೆಪಿ ನೀಡಿದ ನೋಟು ಪಡೆದು ಅವರು ಕಾಂಗ್ರೆಸ್‌ಗೆ ವೋಟು ಹಾಕಿದರುಇನ್ನೆಂದಿಗೂ ನಾನು ಅವರನ್ನು ನಂಬುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+