ಸಾಮೂಹಿಕ ಅತ್ಯಾಚಾರ ಪ್ರಕರಣಗಳ ತನಿಖೆಗೆ ಎಸ್‍ಐಟಿ ರಚಿಸಲು ಮಾಜಿ ಸಿಎಂ ಆಗ್ರಹ

ಬೆಂಗಳೂರು, ಜನವರಿ 13: ಹಾವೇರಿ ಸೇರಿ ವಿವಿಧ ಜಿಲ್ಲೆಗಳ ಪೊಲೀಸರಿಂದ ಸ್ಥಳೀಯ ಅತ್ಯಾಚಾರ ಸಂತ್ರಸ್ತರಿಗೆ ನ್ಯಾಯ ಸಿಗಲು ಅಸಾಧ್ಯ. ಆದ್ದರಿಂದ, ವಿವಿಧ ಜಿಲ್ಲೆಗಳಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ (ಗ್ಯಾಂಗ್ ರೇಪ್) ತನಿಖೆಗೆ ಉನ್ನತ ಮಟ್ಟದ ವಿಶೇಷ ತನಿಖಾ ತಂಡ (ಎಸ್‍ಐಟಿ) ರಚಿಸಬೇಕು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆ ಮಾಡಿಸಿ; ನಿಗದಿತ ಕಾಲಾವಧಿಯಲ್ಲಿ ತನಿಖೆ ಮಾಡಿ ಚಾರ್ಜ್ ಶೀಟ್ ಹಾಕಿ ಉಗ್ರವಾದ ಶಿಕ್ಷೆ ಆಗುವಂತೆ ನೋಡಿಕೊಳ್ಳಿ ಎಂದು ಒತ್ತಾಯಿಸಿದರು. 3 ಜನರ ಬಂಧನವಷ್ಟೇ ಆಗಿದೆ. ಎಲ್ಲರನ್ನೂ ಬಂಧಿಸಿಲ್ಲವೇಕೆ ಎಂದು ಕೇಳಿದರು. ನಾಳೆ ನಮ್ಮ ಮಹಿಳಾ ನಿಯೋಗ ಹಾವೇರಿಗೆ ಭೇಟಿ ಕೊಡಲಿದೆ. ಸೂಕ್ತ ನಿರ್ದೇಶನ ಕೋರಿ ನ್ಯಾಯಾಂಗದ ಮೊರೆ ಹೋಗಲಿದ್ದೇವೆ ಎಂದು ಪ್ರಕಟಿಸಿದರು.

Basavaraj Bommai Demands for Formation Of SIT To Investigate Gang Rape Cases

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಾಮಾನ್ಯ ಜನರು ಅದರಲ್ಲೂ ಹೆಣ್ಮಕ್ಕಳು ನಿರ್ಭೀತಿಯಿಂದ ಓಡಾಡಲು ಸಾಧ್ಯವಾಗುತ್ತಿಲ್ಲ. ಎಲ್ಲ ಹೆಣ್ಮಕ್ಕಳು ಆತಂಕದಿಂದ ಓಡಾಡುವಂತಾಗಿದೆ. ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬೆಂಗಳೂರು ಒಂದರಲ್ಲೇ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಶೇ 30ರಷ್ಟು ಹೆಚ್ಚಾಗಿವೆ. ಅತ್ಯಾಚಾರ, ಕಿರುಕುಳ, ಹಿಂಸಾಚಾರ ಹೆಚ್ಚಾಗಿದೆ. ಗ್ರಾಮಾಂತರದಲ್ಲೂ ಮಹಿಳೆಯರು ಸುರಕ್ಷಿತವಾಗಿಲ್ಲ. ಇಂಥ ಹಲವಾರು ಪ್ರಕರಣಗಳನ್ನು ಮುಚ್ಚಿಹಾಕುತ್ತಿದ್ದಾರೆ. ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಕೆಲಸ ಮಾಡಿದರೆ ಅವರ ಮೇಲೆ ಸರಕಾರದ ವಕ್ರದೃಷ್ಟಿ ಕಾಡುತ್ತಿದೆ ಎಂದು ವಿವರಿಸಿದರು.

ಹಾವೇರಿಯಲ್ಲಿ ನಮ್ಮನ್ನು ಯಾರೂ ಮುಟ್ಟುವುದಿಲ್ಲ ಎಂಬ ಪರಿಸ್ಥಿತಿ ಕೆಲವು ವರ್ಗದ್ದು. ಹಲವೆಡೆ ನೈತಿಕ ಪೊಲೀಸ್‍ಗಿರಿ ನಡೆದಿದೆ. ಶಿರಸಿಯ ಒಬ್ಬ ಹೆಣ್ಮಗಳು ಮತ್ತು ಬೇಕಾದವರು ಹಾನಗಲ್‍ನಲ್ಲಿ ಹೋಟೆಲ್‍ನಲ್ಲಿ ಇದ್ದರೆ ಅಕ್ಕಿಆಲೂರಿನ ಯುವಕರು ಇಬ್ಬರನ್ನೂ ಥಳಿಸಿ ಅವಳ ಗ್ಯಾಂಗ್ ರೇಪ್ ಮಾಡಿದ್ದಾರೆ. ಪೊಲೀಸರು ಇದನ್ನು ಮುಚ್ಚಿ ಹಾಕಲು ಮುಂದಾಗಿದ್ದರು ಎಂದು ತಿಳಿಸಿದರು.

ಪೊಲೀಸರು ಮೊಂಡುವಾದವನ್ನೇ ಮಾಡುತ್ತಿದ್ದರು. ವೈದ್ಯಕೀಯ ಪರೀಕ್ಷೆಗಾಗಿ ನಾನು ಒತ್ತಾಯಿಸಿದೆ. ಇವರು ಯಾರನ್ನು ರಕ್ಷಿಸಲು ಹೊರಟಿದ್ದರು? ಬೇರೆ ಕೋಮಿಗೊಂದು ನೀತಿ ಇದೆಯೇ? ಇದರ ಹಿಂದೆ ಯಾರ ಚಿತಾವಣೆ ಇದೆ? ಒತ್ತಡ ಯಾರದ್ದು ಎಂದು ಕೇಳಿದರು. ಅಲ್ಪಸಂಖ್ಯಾತ ಹೆಣ್ಮಗಳ ಮೇಲೆ ಅತ್ಯಾಚಾರ ಆಗಿದ್ದರೂ ಗೃಹ ಸಚಿವರು ಸಮರ್ಪಕ ಕ್ರಮಕ್ಕೆ ಮುಂದಾಗಿಲ್ಲ. ಪ್ರಭಾವಿಗಳ ಬಗ್ಗೆ ಇವರ ಕಾಳಜಿ ಇದೆ. ಗ್ರಾಮೀಣ ಪೊಲೀಸ್ ಸ್ಟೇಷನ್‍ಗಳು ಕಲೆಕ್ಷನ್ ಅಡ್ಡಾ ಆಗಿ ಪರಿವರ್ತನೆಗೊಂಡಿವೆ. ಕೆಲವೆಡೆ ಪೊಲೀಸ್ ಇನ್‍ಸ್ಪೆಕ್ಟರ್‍ಗಳು ಇಸ್ಪೇಟ್, ಮದ್ಯದ ದಂಧೆಗೆ ಪೊಲೀಸರೇ ಪ್ರೋತ್ಸಾಹ ಕೊಡುತ್ತಿದ್ದಾರೆ. ಕರ್ನಾಟಕವು ಜಂಗಲ್ ರಾಜ್ಯ ಆಗಿದೆ ಎಂದ ಅವರು, ಕಾಂಗ್ರೆಸ್ ಸ್ಥಳೀಯ ನಾಯಕರ ಬೆಂಬಲದಿಂದ ಪುಡಿ ರೌಡಿಗಳು ಮತ್ತೆ ಇಸ್ಪೇಟ್ ಕ್ಲಬ್, ಜೂಜು ಆರಂಭಿಸಿದ್ದಾರೆ ಎಂದರು.

ಹುಬ್ಬಳ್ಳಿಯಲ್ಲಿ ಕರಸೇವಕರ ಮೇಲೆ ಕೇಸಿಲ್ಲದಿದ್ದರೂ ಬಂಧಿಸಲಾಗಿದೆ. ವಿಪಕ್ಷ ನಾಯಕರನ್ನೂ ಬಂಧಿಸಿ ಕೇಸು ಹಾಕಿದ್ದಾರೆ. ಕೋಲಾರದಲ್ಲೂ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ 5 ಜನರಿಂದ ಅತ್ಯಾಚಾರ ಮಾಡಿದ್ದಾರೆ. ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ವಿವರಿಸಿದರು. ಹಾವೇರಿಯಲ್ಲಿ ಇದೇ ಗ್ಯಾಂಗ್ ಅಲ್ಪಸಂಖ್ಯಾತ ಮಹಿಳೆ ಮೇಲೆ ಇನ್ನೊಂದು ಅತ್ಯಾಚಾರ ಮಾಡಿತ್ತು ಎಂದು ತಿಳಿಸಿದರು.

ಸಿದ್ದರಾಮಯ್ಯನವರು ಇಂಥ ವಿಚಾರದಲ್ಲಿ ಯಾಕೆ ಮಾತನಾಡುತ್ತಿಲ್ಲ. ಕಾಂಗ್ರೆಸ್ ಪಕ್ಷ ಕಾನೂನಿನ ಮೇಲೆ ನಂಬಿಕೆ ಇಟ್ಟಿಲ್ಲ. ಪೊಲೀಸ್ ಸ್ಟೇಷನ್‍ಗಳ ಮೇಲೆ ಬೆಂಕಿ ಹಾಕಿದ ಡಿಜೆ ಹಳ್ಳಿ ಕೆಜಿ ಹಳ್ಳಿ ಪ್ರಕರಣದ ಬಂಧಿತ ಹಲವು ಆರೋಪಿಗಳು ಅಮಾಯಕರೆಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ. ಇದು ವಿರೋಧಾಭಾಸವಲ್ಲವೇ? ಅಲ್ಪಸಂಖ್ಯಾತರ ತುಷ್ಟೀಕರಣ ಮೇರೆ ಮೀರಿದೆ ಎಂದು ಟೀಕಿಸಿದರು.

ರಾಜ್ಯದ ವಾಸ್ತವ ಸ್ಥಿತಿಯನ್ನು ಹಣಕಾಸು ಆಯೋಗದ ಮುಂದೆ ಹಿಂದಿನ ಸಿದ್ದರಾಮಯ್ಯರ ಸರಕಾರ ಇಟ್ಟಿರಲಿಲ್ಲ. ಈ ವಿಷಯದಲ್ಲಿ ಇವರ ವೈಫಲ್ಯವಿದೆ. 14ನೇ ಹಣಕಾಸಿಗಿಂತ ಇನ್ನೂ 1 ಲಕ್ಷ ಕೋಟಿ ಹೆಚ್ಚು ಹಣ ಬರಲಿದೆ. ನಿಗದಿತ ಕಾಲಾವಧಿ ಮುಗಿದಿಲ್ಲ. ಅಷ್ಟರೊಳಗೆ ಅನ್ಯಾಯ ಆಗಿದೆ ಎಂದರೆ ಹೇಗೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+