ಭಾರೀ ಮಳೆಗೆ ಬೆಳೆ ಹಾನಿ; ರೈತರಿಗೆ ಕೂಡಲೇ ಬೆಳೆ ನಷ್ಟ ಪರಿಹಾರಕ್ಕೆ ಮಾಜಿ ಸಿಎಂ ಆಗ್ರಹ
ಹಾವೇರಿ, ನವೆಂಬರ್ 12: ಹಾವೇರಿ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದಾರೆ. ಸತತವಾಗಿ ಮಳೆ ಬಿದ್ದಿದ್ದರಿಂದ ಅವರು ಬೆಳೆದಿರುವ ಮೆಕ್ಕೆಜೋಳ ಹೆಸರು ಸೋಯಾಬಿನ್ ಎಲ್ಲವೂ ಕೂಡ ನಾಶವಾಗಿದೆ. ರಾಜ್ಯ ಸರ್ಕಾರ ಕೂಡಲೇ ಬೆಳೆ ನಷ್ಟ ಪರಿಹಾರ ನೀಡಬೇಕು, ಮೆಕ್ಕೆಜೋಳ ಖರೀದಿ ಆರಂಭಿಸಬೇಕು. ಮತ್ತು ಪ್ರತಿ ಟನ್ ಕಬ್ಬಿಗೆ ಸರ್ಕಾರ ನಿಗದಿ ಮಾಡಿರುವ 3300 ರೂ ದರವನ್ನು ಜಿಲ್ಲೆಯ ರೈತರಿಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಹಾವೇರಿ ಜಿಲ್ಲೆಯಲ್ಲಿ ರೈತರು ಈಗ ಕಬ್ಬಿಗೆ ನ್ಯಾಯ ಸಮ್ಮತವಾದ ದರ ಸಿಕ್ಕಿಲ್ಲ ಹಾಗೂ ಮೆಕ್ಕೆಜೋಳ ಎಂಎಸ್ ಪಿ ಗಿಂತ ಹೆಚ್ಚು ದರದಲ್ಲಿ ಖರೀದಿ ಮಾಡಬೇಕೆಂದು ಧರಣಿ ಮಾಡುತ್ತಿದ್ದಾರೆ. ಹಾಗೂ ಬೆಳೆ ನಷ್ಟ ಸರ್ವೆಯಲ್ಲಿ ಅನ್ಯಾಯವಾಗಿದೆ ಇದುವರೆಗೂ ಬೆಳೆ ನಷ್ಟ ಪರಿಹಾರ ಬಂದಿಲ್ಲ. ಆದ್ದರಿಂದ ಕೂಡಲೆ ಜಿಲ್ಲಾಡಳಿತ ರಾಜ್ಯ ಸರ್ಕಾರ ನಿಗದಿ ಮಾಡಿರುವ ಪ್ರತಿ ಟನ್ ಕಬ್ಬಿಗೆ 3300 ರೂ. ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಅನುಷ್ಠಾನ ಮಾಡಬೇಕು.

ಇಡೀ ರಾಜ್ಯದಲ್ಲಿ ಅತಿ ಹೆಚ್ಚು ಬೆಳೆ ಬೆಳೆದಿರುವುದು ಮೆಕ್ಕೆ ಜೋಳ ಸುಮಾರು 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 54 ಲಕ್ಷ ಮೆಟ್ರಿಕ್ ಟನ್ ಇಳುವರಿ ಬರುವ ಅಂದಾಜಿದೆ. ಹೀಗಾಗಿ ದೊಡ್ಡ ಸಂಖ್ಯೆಯ ಮೆಕ್ಕೆಜೋಳ ಬೆಳೆದ ರೈತರ ರಕ್ಷಣೆಗೆ ಬರಬೇಕಿರುವುದು ರಾಜ್ಯ ಸರ್ಕಾರದ ಕರ್ತವ್ಯ ರಾಜ್ಯ ಸರ್ಕಾರ ಕೂಡಲೆ ಕೆಎಂಎಫ್ ಗೆ ಆದೇಶ ಕೊಟ್ಟು ಅವರಿಗೆ ಅವಶ್ಯವಿರುವ ಮೆಕ್ಕೆಜೋಳ ನೇರವಾಗಿ ರೈತರಿಂದ ಖರಿದಿಸಲು ಆದೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಮತ್ತು ಕೂಡಲೇ ಮೆಕ್ಕೆಜೋಳ ಖರೀದಿ ಆರಂಭಿಸಬೇಕು ಎಲ್ಲೆಲ್ಲಿ ಸರ್ವೆ ಕಾರ್ಯ ಸರಿ ನಡೆದಿಲ್ಲ ಎಂಬ ದೂರು ಬಂದಿವೆ ಅಲ್ಲಿ ರಾಜ್ಯ ಸರ್ಕಾರದಿಂದ ಅನುಮತಿ ಪಡೆದು ಮರು ಸರ್ವೆ ಮಾಡಿ ಕೂಡಲೇ ಬೆಳೆ ನಷ್ಟ ಪರಿಹಾರವನ್ನು ರಾಜ್ಯ ಸರಕಾರ ಘೋಷಣೆ ಮಾಡಲು ಆಗ್ರಹಿಸುತ್ತೇನೆ. ಈಗಾಗಲೇ ನಾನು ಕಬ್ಬಿನ ದರದ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಕೂಡಲೇ ಸಕ್ಕರೆ ಸಚಿವರೂ ಕೂಡ ಮಧ್ಯ ಪ್ರವೇಶ ಮಾಡಿ ಈ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಕೂಡಲೇ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಆರಂಭಿಸಿ ರೈತರ ಬೇಡಿಕೆಯಂತೆ ಎಂಎಸ್ ಪಿಗಿಂತ ಹೆಚ್ಚಿನ ಬೆಲೆಗೆ ಖರೀದಿ ಮಾಡಬೇಕು, ಇಲ್ಲದಿದ್ದರೆ ರೈತರು ಕಬ್ಬಿನ ದರಕ್ಕಾಗಿ ಮಾಡಿದ ರೀತಿ ಹೋರಾಟ ಅನಿವಾರ್ಯ ವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಇಡೀ ರಾಜ್ಯದಲ್ಲಿ ಮೆಕ್ಕೆಜೋಳವನ್ನು ರೈತರು ಬೆಳೆಯುತ್ತಾರೆ. ಸುಮಾರು 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯುತ್ತಾರೆ.
ಪ್ರತಿ ವರ್ಷ ಮೆಕ್ಕೆಜೋಳ ಬೆಳೆಯುವ ಪ್ರದೇಶ ಹೆಚ್ಚಾಗುತ್ತಿದೆ. ಕಳೆದ ವರ್ಷ 54 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗಿತ್ತು. ಈ ವರ್ಷವೂ 54 ಲಕ್ಷ ಟನ್ ಉತ್ಪಾದನೆಯಾಗಿದೆ. ಎರಡು ಲಕ್ಷ ಹೆಕ್ಟೇರ್ ಪ್ರದೇಶ ಹೆಚ್ಚಿಗೆ ಬಿತ್ತನೆಯಾದರೂ ಇಳುವರಿ ಅಷ್ಟೇ ಬಂದಿದೆ. ಸುಮಾರು 2 ಲಕ್ಷಕ್ಕಿಂತ ಹೆಚ್ಚು ಪ್ರದೇಶದಲ್ಲಿ ಗೋವಿನ ಜೋಳ ನಷ್ಟವಾಗಿದೆ. ಗೋವಿನ ಜೋಳ ನಷ್ಟ ಪರಿಹಾರ ನೀಡುವಲ್ಲಿ ಬಹಳಷ್ಟು ತಾರತಮ್ಯ ನಡೆಯುತ್ತಿದೆ. ಫೀಲ್ಡ್ ಕಟ್ಟಿಂಗ್ ಪ್ರದೇಶ ಸರಿಯಾಗಿ ಸಮೀಕ್ಷೆಯಾಗಿಲ್ಲ.
ಹೀಗಾಗಿ ಬಹಳಷ್ಟು ಪ್ರದೇಶಗಳು ರೈತರು ಬೆಳೆದಿದ್ದು ಬಿಟ್ಟುಹೋಗಿದೆ. ಕೆಲವು ತಾಲೂಕುಗಳಲ್ಲಿ ಬೆಳೆದಿರುವ ಒಟ್ಟು ಪ್ರದೇಶದಲ್ಲಿ ಕೇವಲ ಶೇ 10% ಮಾತ್ರ ನಷ್ಟ ಆಗಿದೆ ಅಂತ ಇದೆ. ಅತ್ಯಂತ ಅವೈಜ್ಞಾನಿಕ ಮತ್ತು ಸುಳ್ಳಿನಿಂದ ಕೂಡಿರುವ ಸರ್ವೆ ಮಾಡಲಾಗಿದೆ. ಉದಾಹರಣೆಗೆ ಗದಗ ಜಿಲ್ಲೆಯಲ್ಲಿ ಮುಂಡರಗಿ ತಾಲೂಕಿನಲ್ಲಿ ಸರ್ವೆ ಆದರೂ ಕೂಡ ಒಂದು ಎಕರೆಯೂ ನಷ್ಟವಾಗಿಲ್ಲ ಎಂದು ವರದಿ ಕೊಟ್ಟಿದ್ದಾರೆ. ಈ ಥರ ಆದರೆ ರೈತರಿಗೆ ಬಹಳಷ್ಟು ಅನ್ಯಾಯವಾಗುತ್ತದೆ. 2400 ಎಂಎಸ್ ಪಿ ಆಗಿದೆ ಅದು ಸಾಲುವುದಿಲ್ಲ ಎಂದು ರೈತರು ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಖರೀದಿ ಕೇಂದ್ರವನ್ನು ತೆರೆದು ಖರೀದಿ ಪ್ರಾರಂಭ ಮಾಡಬೇಕು ಎಂದು ಆಗ್ರಹಿಸಿದರು.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications