ಮೀಸಲಾತಿ ಅನುಷ್ಠಾನ ಮಾಡುವಂತೆ ಸರ್ಕಾರಕ್ಕೆ ಬಡಿಗೆ ಹಿಡಿದು ಕೇಳುವೆ: ಬೊಮ್ಮಾಯಿ
ಬೆಂಗಳೂರು, ಜನವರಿ 19: ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್‌ಟಿ ಸಮುದಾಯದ ಮೀಸಲಾತಿಯನ್ನು ಶೇಕಡಾ 3 ರಿಂದ 7 ಕ್ಕೆ ಹೆಚ್ಚಳ ಮಾಡಿರುವುದನ್ನು ಅನುಷ್ಠಾನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಬಡಿಗೆ ಹಿಡಿದು ಕೇಳುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಿಜೆಪಿ ಪರಿಶಿಷ್ಟ ಜಾತಿ (ಎಸ್‌ಟಿ) ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾಷಣದಿಂದ ಯಾವುದೇ ಸಮಾಜ ಉದ್ದಾರ ಆಗಿಲ್ಲ. ಸಮಾಜಿಕ ನ್ಯಾಯ ಕೆಲವೇ ಕೆಲವು ಜನರಿಗೆ ಮೀಸಲಾಗಿದೆ. ಈ ಸಮಾಜದ ಕಡು ಬಡವರಿಗೆ, ಗ್ರಾಮೀಣ ಜನರಿಗೆ ಇದರ ಪ್ರಯೋಜನ ಸಿಕ್ಕಿಲ್ಲ. ಅವರ ಅಪ್ಪನಿಗೆ, ಮಗನಿಗೆ ಸೊಸೆಗೆ ಸಿಕ್ಕಿದೆ.

ಸ್ವಾತಂತ್ರ್ಯ ಬಂದು ಎಪ್ಪತೈದು ವರ್ಷ ಆಗಿದ್ದರು ಸಮಾಜದ ಕಟ್ಟ ಕಡೆಯ ಜನರಿಗೆ ತಲುಪದಿದ್ದರೆ ಯಾವ ರೀತಿಯ ಆಡಳಿತ ನಡೆದಿದೆ ಅಂತ ಯೋಚನೆ ಮಾಡಿ, ಎಸ್‌ಸಿ ಎಸ್‌ಟಿ ಕೇವಲ ಜಾತಿ ಸೇರಿಸಿದರೆ ಹೊರತು ಮೀಸಲಾತಿ ಹೆಚ್ಚಳ ಮಾಡಲಿಲ್ಲ ಎಂದರು.
ಡೋಂಗಿ ಸಾಮಾಜಿಕ ನ್ಯಾಯದ ನಾಯಕರಿಂದ ಅನ್ಯಾಯ
ಎಸ್‌ಟಿ ಸಮುದಾಯಕ್ಕೆ ಶೇಕಡಾ 7ರಷ್ಟು ಮೀಸಲಾತಿಯನ್ನು ಮೋದಿ ಸರ್ಕಾರ ಮಾಡಿದ ಮೆಲೆ ರಾಜ್ಯದಲ್ಲಿ ಶೇಕಡಾ 7ರಷ್ಟು ಮೀಸಲಾತಿ ಬೇಕು ಎಂದು ಆಗ್ರಹ ಶುರುವಾಯಿತು. ಹಿಂದುಳಿದ ವರ್ಗದ ಆಯೊಗಕ್ಕೆ ಸಂವಿಧಾನ ಬದ್ದ ಅಧಿಕಾರ ಕೊಟ್ಟಿದ್ದು ನರೇಂದ್ರಮೋದಿ ಸರ್ಕಾರ. ಡೋಂಗಿ ಸಾಮಾಜಿಕ ನ್ಯಾಯದ ನಾಯಕರು ಈ ಸಮುದಾಯಗಳಿಗೆ ಅನ್ಯಾಯ ಮಾಡಿದ್ದಾರೆ. ಯಾರು ನಮಗೆ ನ್ಯಾಯ ಕೊಡುತ್ತಾರೆ. ಯಾರು ನಮಗೆ ಅವಕಾಶ ಕೊಡುತ್ತಾರೆ ಅವರ ಶಕ್ತಿಗೆ ನಿಮ್ಮ ಶಕ್ತಿ ಜೋಡಿಸಬೇಕು ಎಂದು ಹೇಳಿದರು.

ಮೀಸಲಾತಿ ಹೆಚ್ಚಳಕ್ಕೆ ಸ್ವಾಮೀಜಿಗಳು ಸಮಾಜದ ಮುಖಂಡರು ಹೋರಾಟ ಮಾಡಿದ್ದೀರಿ ಆದರೆ, ಕಾಂಗ್ರೆಸ್ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ನಮ್ಮ ಸರ್ಕಾರ ಬಂದಾಗ ಮಹರ್ಷಿ ವಾಲ್ಮೀಕಿ ಉತ್ಸವವನ್ನು ಸರ್ಕಾರದಿಂದ ಆಚರಿಸುವಂತೆ ಕಲಬುರ್ಗಿ ಕ್ಯಾಬಿನೆಟ್‌ನಲ್ಲಿ ಸಚಿವರು ಪ್ರಸ್ತಾಪ ಮಾಡಿದರು.
ಬಿಜೆಪಿಯಿಂದ ಮೀಸಲಾತಿ ಹೆಚ್ಚಳ ತೀರ್ಮಾನ
ಸಂಪುಟದಲ್ಲಿ ತೀರ್ಮಾನ ಮಾಡಿದ್ದರ ಪರಿಣಾಮ ಸಮುದಾಯ ಸಂಘಟಿತವಾಗಿ ಮೀಸಲಾತಿ ಹೆಚ್ಚಳಕ್ಕೆ ಹೋರಾಟ ಮಾಡಲು ಸಾಧ್ಯವಾಯಿತು. ನಮ್ಮ ಅವಧಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಲು ತೀರ್ಮಾನ ಮಾಡಿದಾಗ ಜೇನುಗೂಡಿಗೆ ಕೈಹಾಕಬೇಡಿ ಅಂತ ಹೇಳಿದರು. ನನಗೆ ಜೇನು ಕಡಿದರೂ ಅವರಿಗೆ ಜೇನು ಕೊಡುತ್ತೇನೆ ಎಂದು ಮೀಸಲಾತಿ ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ. ಅದರ ಪರಿಣಾಮ ಮೆಡಿಕಲ್ ಎಂಜನೀಯರಿಂಗ್ ಕಾಲೇಜುಗಳಲ್ಲಿ ಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ಸೀಟು ಸಿಗುತ್ತಿವೆ ಎಂದು ತಿಳಿಸಿದರು.
ಮಿಸಲಾತಿ ಹೆಚ್ಚಳದ ನಿರ್ಣಯ ನಾವು ಮಾಡಿದ್ದೇವೆ ಅದನ್ನು ಸರಿಯಾಗಿ ಅನುಷ್ಠಾನ ಮಾಡುವಂತೆ ಸರ್ಕಾರಕ್ಕೆ ಬಡಿಗೆ ಹಿಡಿದು ನಿಲ್ಲುತ್ತೇವೆ. ಎಸ್‌ಟಿ ಸಮುದಾಯದವರು ಬಿಟ್ಟರು ನಾನು ಈ ಸಮದಾಯಕ್ಕೆ ನ್ಯಾಯ ಕೊಡಿಸುವವರೆಗೂ ಬಿಡುವುದಿಲ್ಲ. ಎಸ್‌ಟಿ ಸಮುದಾಯಕ್ಕೆ ನ್ಯಾಯ ಕೊಡಿಸಿರುವ ಬಿಜೆಪಿಗೆ ಲೋಕಸಭೆ ಚುನಾವಣೆಯಲ್ಲಿ ಮತ ಹಾಕಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಬೋಗಸ್ ಒಳ ಮೀಸಲಾತಿ
ಕಾಂಗ್ರೆಸ್ ನವರು ಈಗ ಸದಾಶಿವ ಆಯೋಗದ ವರದಿ ಜಾರಿ ಮಾಡುವುದಾಗಿ ಹೇಳುತ್ತಾರೆ. ಮತ್ತೊಂದೆಡೆ ಕೇಂದ್ರಕ್ಕೆ ಶಿಪಾರಸ್ಸು ಮಾಡುವುದಾಗಿ ಹೇಳುತ್ತಾರೆ. ಈಗ ಚುನಾವಣೆ ಬರುತ್ತಿದೆ ಅಂತ ಎಸ್ಸಿ ಸಮುದಾಯದ ಜನರು ತಮ್ಮನ್ನು ಕೇಳುತ್ತಾರೆ ಎಂದು ಈಗ ವರದಿ ಜಾರಿ ಮಾಡುವುದಾಗಿ ಹೇಳುತ್ತಾರೆ. ಈಗ ಮಾಡುತ್ತಿರುವುದು ಎಲ್ಲವೂ ಬೋಗಸ್ ಒಳ ಮೀಸಲಾತಿ ವಿಚಾರ ಸುಪ್ರೀಂ ಕೋರ್ಟ್ ನಲ್ಲಿ ಇದೆ. ಅದನ್ನು ಈಗ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಇವರು ಹೇಳುತ್ತಿದ್ದಾರೆ.
ನಿಮ್ಮ ಸಮುದಾಯದಲ್ಲಿ ನಾಯಕರನ್ನು ಹುಟ್ಟು ಹಾಕಿ, ಅನೇಕ ನಾಯಕರಿದ್ದಾರೆ. ಬೇರೆಯವರ ಭಾಷಣಕ್ಕೆ ಉಧೊ ಉಧೊ ಅನ್ನುವ ಬದಲು ನಿಮ್ಮಲ್ಲೆ ನಾಯಕರನ್ನು ಹುಟ್ಟು ಹಾಕಿ. ವಿಜಯನಗರ ಸಾಮ್ರಾಜ್ಯ ಉಳಿಸಿರುವ ಸಮುದಾಯ ಇದು. ಮದಕರಿ ನಾಯಕರನಿಂದ ಹಿಡಿದು ಸುರಪುರದ ನಾಯಕರವರೆಗೂ ವಿಜಯನಗರ ಸಾಮ್ರಾಜ್ಯ ಉಳಿಸಿದ್ದಾರೆ ಎಂದು ಬೊಮ್ಮಾಯಿ ಕಿಡಿ ಕಾರಿದರು.
ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಗೋವಿಂದ ಕಾರಜೋಳ ಸಿ.ಟಿ.ರವಿ, ರಾಜು ಗೌಡ, ಶಿವನಗೌಡ ನಾಯಕ್ ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು.
-
ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: 1 ಲಕ್ಷ ಬಾಂಡ್ಗೆ ಆಗ್ರಹಿಸಿದ ಪೊಲೀಸರ ವಿರುದ್ಧ ಯತ್ನಾಳ್ ಗರಂ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್











Click it and Unblock the Notifications