ರಾಜ್ಯದಲ್ಲಿ ಶುರುವಾಯ್ತು ಬೈ ಎಲೆಕ್ಷನ್‌ ಭರಾಟೆ: ಯಡಿಯೂರಪ್ಪ ಜೊತೆ ಚರ್ಚೆಯಾಗಿದ್ದೇನು?

ಬೆಂಗಳೂರು, ಅಕ್ಟೋಬರ್‌ 17: ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು(ಗುರುವಾರ) ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಧವಳಗಿರಿ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿದರು.

ಬಿ.ಎಸ್. ಯಡಿಯೂರಪ್ಪ ಅವರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ನಮ್ಮ ಹಿರಿಯ ನಾಯಕರು, ಸಹಜವಾಗಿ ಭೇಟಿ ಮಾಡುತ್ತೇವೆ. ಚುನಾವಣೆಯ ಬಗ್ಗೆ ಬಂದು ಮಾತನಾಡು ಅಂದರು, ಅವರೊಂದಿಗೆ ಮಾತಾಡಿದ್ದೇನೆ. ಶಿಗ್ಗಾವಿ ಕ್ಷೇತ್ರದ ಬಗ್ಗೆಯೂ ಚರ್ಚೆ ನಡೆಯಿತು.

Basavaraj Bommai Discusses By-Election Preparations With BS Yediyurappa

ಚುನಾವಣೆಗೆ ಏನೇನು ತಯಾರಿ ಮಾಡಿದ್ದೇವೆ ಅಂತ ಕೇಳಿದರು, ಎಲ್ಲ ಸಿದ್ದತೆ ಮಾಡಿಕೊಂಡಿರುವ ಬಗ್ಗೆ ಹೇಳಿದ್ದೇನೆ. ಅಭ್ಯರ್ಥಿ ಆಯ್ಕೆ ಬಗ್ಗೆಯೂ ಚರ್ಚೆ ಆಗಿದೆ. ಅಂತಿಮವಾಗಿ ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲಿಸಬೇಕು ಅಂತ ಆಗಿದೆ. ದೆಹಲಿಗೆ ಅಕ್ಟೋಬರ್ 19ರ ನಂತರ ಹೋಗುತ್ತೇನೆ. ಎಲ್ಲ ಮೂರು ಕ್ಷೇತ್ರಗಳಲ್ಲೂ ಗೆಲ್ಲುದಕ್ಕೆ‌ ಪ್ರಯತ್ನ ಮಾಡೋಣ ಅಂದಿದ್ದಾರೆ ಎಂದು ಹೇಳಿದ ಅವರು, ಚನ್ನಪಟ್ಟಣ ಟಿಕಟ್ ಕುರಿತು ಕೇಳಿದ ಪ್ರಶ್ನೆಗೆ ಚನ್ನಪಟ್ಟಣದ ಬಗ್ಗೆ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹಾಗೂ ನಮ್ಮ ಪಕ್ಷದ ಹೈಕಮಾಂಡ್ ಸೇರಿ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಬೆಳೆ ಹಾನಿಗೆ ರೈತರಿಗೆ ಸೂಕ್ತ ಪರಿಹಾರಕ್ಕೆ ಆಗ್ರಹ

ಹಾವೇರಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ. ಮನೆಗಳಿಗೆ ನೀರು ನುಗ್ಗಿದೆ. ಒಂದು ಮಗು ನೀರಿನಲ್ಲಿ ಕೊಚ್ಚಿ ಹೋಗಿ ಸಾವಿಗೀಡಾಗಿದೆ. ಎಲ್ಲ ತಾಲೂಕುಗಳಲ್ಲಿ ಬೆಳೆ ನಾಶವಾಗಿದೆ. ರಾಜ್ಯ ಸರ್ಕಾರ ಕೂಡಲೇ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಎಕ್ಸ್ ಮಾಡಿರುವ ಅವರು, ನಿರಂತರ ಮಳೆಯಿಂದಾಗಿ ಮನೆಗಳು ಬಿದ್ದಿದ್ದು, ಮನೆ ಕಳೆದುಕೊಂಡವರಿಗೆ ಕೂಡಲೆ ಪರಿಹಾರದ ಹಣ ಬಿಡುಗಡೆ ಮಾಡಬೇಕು. ಹಾಗೂ ಮನೆ ಕಳೆದುಕೊಂಡವರಿಗೆ ಸಾಂತ್ವನ ಕೇಂದ್ರ ತೆರೆದು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಹಲವು ಗ್ರಾಮಗಳ ಸಂಪರ್ಕ ರಸ್ತೆ ಕಳೆದು ಹೋಗಿದೆ ಕೂಡಲೆ ಸಂಪರ್ಕ ಕಲ್ಪಿಸುವ ಕೆಲಸವನ್ನು ಆರ್ ಡಿಪಿಆರ್ ಮತ್ತು ಪಿಡಬ್ಲ್ಯುಡಿ ಇಲಾಖೆಗೆ ಸೂಚನೆ ನೀಡಬೆಕು. ನಾನು ಈಗಾಗಲೇ ಹಾವೇರಿ ಜಿಲ್ಲಾಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಅವರು ಕೂಡಲೇ ಕ್ರಮ ಕೈಗೊಳ್ಳುವ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ.

ಬರಗಾಲ ಸಂದರ್ಭದಲ್ಲಿ ರಾಜ್ಯ ಸರ್ಕಾರ ರೈತರಿಗೆ ಯಾವುದೇ ಪರಿಹಾರ ನೀಡಿಲ್ಲ. ಈಗಲೂ ಅದೇ ರೀತಿ ಮಾಡದೇ ಕೂಡಲೇ ರೈತರಿಗೆ ಬೆಳೆ ನಷ್ಟ ಪರಿಹಾರ ಒದಗಿಸಬೇಕು. ರೈತರ ಹಿತ ಕಾಯಲು ರಾಜ್ಯ ಸರ್ಕಾರ ಕೇಂದ್ರದತ್ತ ನೋಡದೇ ಮೊದಲು ಪರಿಹಾರ ನೀಡಬೇಕು. ನಂತರ ಕೇಂದ್ರ ಸರ್ಕಾರದಿಂದ ಪರಿಹಾರ ಪಡೆಯಲು ಅವಕಾಶ ಇದೆ ಎಂದು ಹೇಳಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳು ಕೂಡಲೇ ಹಾವೇರಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಬಗ್ಗೆ ಗಮನ ಹರಿಸಿ ಜಿಲ್ಲಾಧಿಕಾರಿ ಬಳಿ ಇರುವ ರಾಷ್ಟ್ರೀಯ ವಿಪತ್ತು ನಿರ್ವಹಣ ನಿಧಿಯಿಂದ ಕೂಡಲೇ ಹಣ ಬಿಡುಗಡೆಗೆ ಆದೇಶ ಮಾಡಬೇಕು. ಮತ್ತು ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ಬಾಲಕ ನಿವೇದನ್ ಸಾವಿಗೆ ಕೂಡಲೆ ಅವರ ಕುಟುಂಬ ವರ್ಗಕ್ಕೆ ಪರಿಹಾರ ನೀಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಬೇಕು. ಈಗಾಲೇ ಮುಂಗಾರು ಕಳೆದುಕೊಂಡ ರೈತರಿಗೆ ಸಮಯ ವ್ಯರ್ಥ ಮಾಡದೇ ಪರಿಹಾರ ಕೈಗೊಳ್ಳಲು ಆಗ್ರಹ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+