ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಸಿಎಂ ಆಗಿ ಆಯ್ಕೆಯಾದ ಬಳಿಕ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ

|
Google Oneindia Kannada News

ಬೆಂಗಳೂರು, ಜುಲೈ 27: ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಬಸವರಾಜ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ರೈತ, ಬಡವರು, ಹಿಂದುಳಿದವರು, ದೀನ ದಲಿತರ ರಕ್ಷಣೆ ಸರ್ಕಾರದ ಮೇಲಿದೆ. ಕೋವಿಡ್ 19 ಬಗ್ಗೆ ಮೊದಲಿಗೆ ಗಮನ ಹರಿಸಬೇಕಿದೆ.

ಸಂಸದೀಯ ಮಂಡಳಿಯ ಸಭೆಯಲ್ಲಿ ತೀರ್ಮಾನ ಕೈಗೊಂಡಂತೆ ಶಾಸಕಾಂಗ ಸಭೆ ಕರೆದು ಸಿಎಂ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ನನ್ನ ಹೆಸರನ್ನು ಸೂಚಿಸುವ ಮೂಲಕ ಯಡಿಯೂರಪ್ಪ ಅವರು ನನಗೆ ಆಶೀರ್ವಾದ ಮಾಡಿದ್ದಾರೆ.

ರಾಜ್ಯದ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಗೆ ಕಾರಣಗಳೇನು?ರಾಜ್ಯದ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಗೆ ಕಾರಣಗಳೇನು?

ಕರ್ನಾಟಕ ಸರ್ಕಾರವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಹಗಲಿರುಳು ಶ್ರಮಿಸುವೆ. ನನ್ನನ್ನು ಆಯ್ಕೆ ಮಾಡಿದ ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ನಾನು ಆಭಾರಿಯಾಗಿದ್ದೇನೆ. ಶಾಸಕರು ನನ್ನ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿದ್ದಾರೆ. ನಾನು ನಂಬಿಕೆ ಹುಸಿಗೊಳಿಸಲ್ಲ ಎಂದಿದ್ದಾರೆ.

Basavaraj Bommai First Reaction After Elected As New CM Of Karnataka

ಪಕ್ಷದ ನಾಯಕರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ, ನನ್ನನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದಕ್ಕೆ ಪಕ್ಷದ ಎಲ್ಲಾ ಶಾಸಕರಿಗೆ ಹೃದಯಪೂರ್ವ ಧನ್ಯವಾದಗಳು. ನನ್ನ ಹೆಸರು ಸೂಚಿಸಿ ಯಡಿಯೂರಪ್ಪ ಅವರು ಆಶೀರ್ವಾದ ಮಾಡಿದ್ದಾರೆ ಎಂದಿರುವ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾಗೆ ಧನ್ಯವಾದ ಸಲ್ಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಆರ್.ಬೊಮ್ಮಾಯಿಯವರ ಪುತ್ರನಾಗಿರುವ ಅವರು, ಜನತಾದಳದಿಂದ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಜವಾಬ್ಧಾರಿ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಜತೆಗೆ 2008ರಿಂದ ಸತತ ಮೂರು ಬಾರಿ ಶಿಗ್ಗಾಂವ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದು, ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಮತ್ತು ಜಗದೀಶ ಶೆಟ್ಟರ ಸಿಎಂ ಆಗಿದ್ದ ವೇಳೆ ಐದು ವರ್ಷ ಜಲಸಂಪನ್ಮೂಲ ಖಾತೆ ನಿರ್ವಹಣೆ ಮಾಡಿದ ಅನುಭವ ಹೊಂದಿದ್ದಾರೆ.

Recommended Video

ಬಸವರಾಜ್ ಬೊಮ್ಮಾಯಿ ರಾಜಕೀಯ ಜೀವನ | Oneindia Kannada

ಅಷ್ಟೇ ಅಲ್ಲದೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರ, ಶಾಸನ ರಚನಾ ಸಚಿವ ಹಾಗೂ ಹಾವೇರಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ನಿರ್ವಹಿಸಿದ ಅನುಭವಗಳನ್ನು ಬಸವರಾಜ ಬೊಮ್ಮಾಯಿ ಹೊಂದಿದ್ದಾರೆ.

English summary
Basavaraj Bommai First Reaction After Elected As New Chief Minister Of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X