ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

KS Eshwarappa; ಸಿಎಂಗೆ ಸಂಜೆ ಕರೆ ಮಾಡಿದ್ದ ಕೆ. ಎಸ್. ಈಶ್ವರಪ್ಪ!

|
Google Oneindia Kannada News

ಬೆಂಗಳೂರು, ಏಪ್ರಿಲ್ 14; ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಕೆ. ಎಸ್. ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಮೂರು ದಿನ ಮೌನವಾಗಿರುತ್ತೇನೆ ಎಂದು ಹೇಳಿದ್ದ ಈಶ್ವರಪ್ಪ ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸಂಜೆ ತುರ್ತು ಸುದ್ದಿಗೋಷ್ಠಿ ನಡೆಸಿರು. "ಶುಕ್ರವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ" ಎಂದು ಹೇಳಿದ್ದಾರೆ.

 ಸಚಿವ ಸ್ಥಾನಕ್ಕೆ ರಾಜೀನಾಮೆ; ಪತ್ರಿಕಾಗೋಷ್ಠಿಯಲ್ಲಿ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು? ಸಚಿವ ಸ್ಥಾನಕ್ಕೆ ರಾಜೀನಾಮೆ; ಪತ್ರಿಕಾಗೋಷ್ಠಿಯಲ್ಲಿ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

"ನನ್ನನ್ನು ಬೆಳೆಸಿದ ಹಿರಿಯರು, ನಾಯಕರಿಗೆ ಇರುಸು ಮುರಿಸು ಆಗಬಾರದು ಎಂದು ರಾಜೀನಾಮೆ ನೀಡಿದ್ದೇನೆ. ಈ ಎಪಿಸೋಡ್‌ನಿಂದ ನಾನು ಮುಕ್ತವಾಗಿ ಹೊರಗೆ ಬರುತ್ತೀನಿ ಎಂಬ ಪೂರ್ಣ ವಿಶ್ವಾಸವಿದೆ. ನಂದು ಒಂದೇ ಒಂದು ಪರ್ಸೆಂಟ್ ತಪ್ಪಿದ್ದರೆ ಭಗವಂತ ಶಿಕ್ಷೆ ಕೊಡಲಿ" ಎಂದರು.

 Breaking news; ಸಚಿವ ಸ್ಥಾನಕ್ಕೆ ಕೆ. ಎಸ್. ಈಶ್ವರಪ್ಪ ರಾಜೀನಾಮೆ Breaking news; ಸಚಿವ ಸ್ಥಾನಕ್ಕೆ ಕೆ. ಎಸ್. ಈಶ್ವರಪ್ಪ ರಾಜೀನಾಮೆ

Basavaraj Bommai First Reaction On Minister KS Eshwarappa Resignation

ಮುಖ್ಯಮಂತ್ರಿಗಳ ಪ್ರತಿಕ್ರಿಯೆ; ಸಚಿವ ಕೆ. ಎಸ್. ಈಶ್ವರಪ್ಪ ರಾಜೀನಾಮೆ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಇಂದು ಸಂಜೆ ಈಶ್ವರಪ್ಪ ಕರೆ ಮಾಡಿದ್ದರು. ನನ್ನದು ಎಳ್ಳು ಕಾಳಷ್ಟೂ ಪಾತ್ರ ಇಲ್ಲ. ರಾಜೀನಾಮೆ ನೀಡುತ್ತೇನೆ, ಮುಂದುವರಿದರೆ ಮುಜುಗರ ಆಗುತ್ತದೆ. ಆದಷ್ಟು ಬೇಗ ತನಿಖೆ ಮುಗಿಸಿ ಸತ್ಯ ಹೊರ ಬರಲಿ ಎಂದು ಹೇಳಿದರು" ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಿಜೆಪಿ ಸರ್ಕಾರದಲ್ಲಿ ಅಧಿಕಾರ ಕಳೆದುಕೊಂಡ ಎರಡನೇ ವಿಕೆಟ್ ಕೆ.ಎಸ್. ಈಶ್ವರಪ್ಪಬಿಜೆಪಿ ಸರ್ಕಾರದಲ್ಲಿ ಅಧಿಕಾರ ಕಳೆದುಕೊಂಡ ಎರಡನೇ ವಿಕೆಟ್ ಕೆ.ಎಸ್. ಈಶ್ವರಪ್ಪ

"ಈ ಆರೋಪಗಳಿಂದ ಮುಕ್ತವಾಗಿ ಹೊರ ಬರುತ್ತೇನೆ ಎಂದು ಹೇಳಿದ್ದಾರೆ. ನಾಳೆ ಸಾಯಂಕಾಲ ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ. ಈಶ್ವರಪ್ಪ ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ. ಇದಕ್ಕೆ ಕಾಂಗ್ರೆಸ್ ಕಾರಣ ಅಲ್ಲ. ಹೈಕಮಾಂಡ್ ಮಧ್ಯಪ್ರವೇಶ ಇಲ್ಲ" ಎಂದು ಸ್ಪಷ್ಟಪಡಿಸಿದರು.

ಹೈಕಮಾಂಡ್ ಸೂಚನೆ; ಸಚಿವ ಕೆ. ಎಸ್. ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್ ನಾಯಕರ ಸೂಚನೆಯೇ ಕಾರಣ ಎಂಬ ಸುದ್ದಿಗಳು ಹಬ್ಬಿದೆ.

ಬುಧವಾರ ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಕೆ. ಎಸ್. ಈಶ್ವರಪ್ಪ, "ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಅಮೂಲಾಗ್ರ ತನಿಖೆ ನಡೆಸಬೇಕು. ಆದರೆ ಸಚಿವ ಸ್ಥಾನಕ್ಕೆ ತಾವು ರಾಜೀನಾಮೆ ನೀಡುವುದಿಲ್ಲ" ಎಂದು ಹೇಳಿದ್ದರು.

"ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಡೆತ್ ನೋಟ್ ಹಿಡಿದುಕೊಂಡು ಬಿಜೆಪಿಯವರು ಪ್ರತಿಭಟನೆ ನಡೆಸಿದ್ದರು. ಗೃಹ ಸಚಿವರಾಗಿದ್ದ ಕೆ. ಜೆ. ಜಾರ್ಜ್ ಅವರ ರಾಜೀನಾಮೆ ಪಡೆದರು ಎಂದು ಕಾಂಗ್ರೆಸ್ ಪಕ್ಷ ಆರೋಪಿಸುತ್ತಿದೆ. ಡಿವೈಎಸ್‌ಪಿ ಗಣಪತಿ ಅವರು ಡೆತ್‌ನೋಟ್ ಬರೆದಿಟ್ಟು ಸಹಿ ಹಾಕಿದ್ದರು. ಆದರೆ ಸಂತೋಷ್ ಪಾಟೀಲ್ ಪ್ರಕರಣ ಹಾಗಲ್ಲ" ಎಂದು ತಿಳಿಸಿದ್ದರು.

ಆದರೆ ಗುರುವಾರ ಹೈಕಮಾಂಡ್ ನಾಯಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕರೆ ಮಾಡಿ ರಾಜೀನಾಮೆ ಪಡೆಯುವಂತೆ ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ಗುರುವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಈಶ್ವರಪ್ಪ ರಾಜೀನಾಮೆ ತೀರ್ಮಾನ ಪ್ರಕಟಿಸಿದ್ದಾರೆ.

English summary
Karnataka chief minister Basavaraj Bommai first reaction after rural development and panchayat raj minister K. S. Eshwarappa resignation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X