• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೋವಿಡ್ ನಿರ್ಬಂಧ ಸಡಿಲಿಕೆ; ಸುಳಿವು ಕೊಟ್ಟ ಬಸವರಾಜ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಜನವರಿ 19; ಕರ್ನಾಟಕದಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಿಕೆ ಮಾಡಬೇಕು ಎಂಬ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ರಾತ್ರಿ, ವೀಕೆಂಡ್ ಕರ್ಫ್ಯೂ ರದ್ದುಗೊಳಿಸಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಈ ಕುರಿತು ಮಾತನಾಡಿದರು. ಕೋವಿಡ್ ಸೋಂಕು ತಗುಲಿದ್ದ ಅವರು ಇಂದು ಕ್ವಾರಂಟೈನ್‌ ಪೂರ್ಣಗೊಳಿಸಿ ಕಚೇರಿಗೆ ಮರಳಿದರು. "ಸುಮಾರು 11,12 ದಿನ ಮನೆಯಲ್ಲಿದ್ದೆ. ಕ್ವಾರಂಟೈನ್ ಮುಗಿದಿದೆ. ಇಂದಿನಿಂದ ಕಚೇರಿಯಲ್ಲಿ ಕೆಲಸ ಮಾಡುತ್ತೇನೆ" ಎಂದರು.

ಬೆಂಗಳೂರು; ವಲಯವಾರು ಕೋವಿಡ್ ಕೇರ್ ಸೆಂಟರ್ ವಿವರ ಬೆಂಗಳೂರು; ವಲಯವಾರು ಕೋವಿಡ್ ಕೇರ್ ಸೆಂಟರ್ ವಿವರ

"ಮಂಗಳವಾರ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಲಸಿಕೆ ಬಗ್ಗೆ ವಿಶೇಷ ಗಮನ ಕೊಡಲು ಸೂಚಿಸಿದ್ದೇನೆ. ಕೋವಿಡ್ ವಾರಿಯರ್ಸ್ ಬಗ್ಗೆ ತೀವ್ರ ಗಮನ ಕೊಡಲು ಸೂಚನೆ ಕೊಟ್ಟಿದ್ದೇನೆ. ಹೋಂ ಐಸೋಲೇಷನ್‌ನಲ್ಲಿ ಶೇ 94ರಷ್ಟು ಸೋಂಕಿತರು ಇದ್ದಾರೆ. ಇವರ ಮೇಲೆ ಹೆಚ್ಚಿನ ಗಮನ ಕೊಡಲು ಸೂಚಿಸಲಾಗಿದೆ" ಎಂದು ಹೇಳಿದರು.

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜು ಮುಚ್ಚಿ; ಎಚ್‌ಡಿಕೆ ಸಲಹೆಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜು ಮುಚ್ಚಿ; ಎಚ್‌ಡಿಕೆ ಸಲಹೆ

"ಫೆಬ್ರವರಿ ಮಧ್ಯಭಾಗದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಪೀಕ್‌ಗೆ ಹೋಗುತ್ತದೆ ಎಂದು ಬೇರೆ-ಬೇರೆ ದೇಶಗಳ ಟ್ರೆಂಡ್ ನೋಡಿ ತಜ್ಞರು ಅಂದಾಜು ಮಾಡಿದ್ದಾರೆ. ಎಲ್ಲರೂ ಸಹ ಈಗ ಕೋವಿಡ್ ಫ್ಲೂ ಥರ ಬಂದು ಹೋಗುತ್ತದೆ ಎಂದು ಚರ್ಚೆ ಮಾಡುತ್ತಿದ್ದಾರೆ" ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕೋವಿಡ್ 3ನೇ ಅಲೆ ಎದುರಿಸಲು ನೈಋತ್ಯ ರೈಲ್ವೆ ಸಿದ್ಧತೆಗಳು ಕೋವಿಡ್ 3ನೇ ಅಲೆ ಎದುರಿಸಲು ನೈಋತ್ಯ ರೈಲ್ವೆ ಸಿದ್ಧತೆಗಳು

"ಆಸ್ಪತ್ರೆಗಳಿಗೆ ಹೆಚ್ಚು ದಾಖಲಾತಿ ಆಗುತ್ತಿಲ್ಲ. ಹೀಗಾಗಿ ನಾವು ದೈನಂದಿನ ಕೆಲಸಗಳನ್ನು ಮಾಡಿಕೊಳ್ಳಬಹುದು ಎನ್ನುವ ಭಾವನೆ ಇದೆ. ಈ ಹಿನ್ನೆಲೆಯಲ್ಲಿ ನಿಯಮಗಳ‌ ಸಡಿಲಿಕೆ ಬಗ್ಗೆ ತಜ್ಞರು ಪರಾಮರ್ಶೆ ಮಾಡುತ್ತಿದ್ದಾರೆ. ಶುಕ್ರವಾರದ ಸಭೆಯಲ್ಲಿ ತಜ್ಞರ ಜತೆ ಚರ್ಚಿಸುತ್ತೇವೆ. ತಜ್ಞರ ಸಲಹೆಯಂತೆ ಸಡಿಲಿಕೆ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಸಿಎಂ ಸ್ಪಷ್ಟಪಡಿಸಿದರು.

ನಿಯಮ ಮೀರಿದರೆ ಕ್ರಮ; "ಕೋವಿಡ್ ನಿಯಮಗಳನ್ನು ಯಾರೂ ಉಲ್ಲಂಘನೆ ಮಾಡಿದರೂ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಪಕ್ಷದವರು, ಬೇರೆ ಪಕ್ಷದವರು ಎಂದು ನೋಡದೇ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.

"ಕೋವಿಡ ಮಾರ್ಗಸೂಚಿ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿ ರವಿ ಕುಮಾರ್‌ಗೆ ಸೂಚನೆ ನೀಡಿದ್ದೇನೆ. ಕಾಂಗ್ರೆಸ್‌ನವರು ದೂರು ಕೊಡುವ ಅಗತ್ಯ ಇಲ್ಲ. ಯಾರೇ ನಿಯಮ ಉಲ್ಲಂಘಿಸಿದರೂ ಕ್ರಮ ಖಂಡಿತ" ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಸಂಕ್ರಾಂತಿ ನಂತರ ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಆಗಲಿದೆ ಎಂಬ ಸುದ್ದಿ ಹಬ್ಬಿತ್ತು. ಈ ಕುರಿತು ಕೇಳಿದ ಪ್ರಶ್ನೆಗೆ, "ಸಚಿವ ಸಂಪುಟ ಪುನಾರಚನೆ ವಿಚಾರದ ಬಗ್ಗೆ ನಾನು ಸಾರ್ವಜನಿಕವಾಗಿ ಮಾತಾಡಲ್ಲ" ಎಂದು ಸಿಎಂ ಸ್ಪಷ್ಟಪಡಿಸಿದರು.

ನಿರ್ಬಂಧಗಳು ಸಡಿಲ; ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಆದರೆ ಆಸ್ಪತ್ರೆ ದಾಖಲಾಗುವವರ ಸಂಖ್ಯೆ, ಸಾವಿನ ಪ್ರಮಾಣ ಕಡಿಮೆ ಇದೆ. ಈ ಹಿನ್ನಲೆಯಲ್ಲಿ ರಾತ್ರಿ, ವೀಕೆಂಡ್ ಕರ್ಫ್ಯೂ ಸೇರಿದಂತೆ ಕೋವಿಡ್ ನಿರ್ಬಂಧಗಳನ್ನು ತೆರವುಗೊಳಿಸುವ ಕುರಿತು ಚರ್ಚೆ ನಡೆಯುತ್ತಿದೆ.

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಬಿಜೆಪಿ ಶಾಸಕ ಸಿ. ಟಿ. ರವಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸುವ ಕುರಿತು ಮಾತನಾಡಿದ್ದಾರೆ. ಬೆಂಗಳೂರಿನ ಹೋಟೆಲ್ ಮಾಲೀಕರ ಸಂಘ ಸಹ ವೀಕೆಂಡ್ ಕರ್ಫ್ಯೂ ರದ್ದು ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಶುಕ್ರವಾರ ಮುಖ್ಯಮಂತ್ರಿಗಳು ಕೋವಿಡ್ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲು ತಜ್ಞರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕೋವಿಡ್ ನಿರ್ಬಂಧ ತೆರವುಗೊಳಿಸುವ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ.

   ಮೋದಿ ಭಾಷಣ ಸಿಕ್ಕಾಪಟ್ಟೆ ಟ್ರೋಲ್:ತಡಬಡಾಯಿಸಿದ ಮೋದಿ ಮಾಡಿದ್ದೇನು? | Oneindia Kannada

   ಮಂಗಳವಾರದ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ 41,457 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 2,50,381 ಆಗಿದೆ.

   ಬಸವರಾಜ ಬೊಮ್ಮಾಯಿ
   Know all about
   ಬಸವರಾಜ ಬೊಮ್ಮಾಯಿ
   English summary
   Karnataka chief minister Basavaraj Bommai hint the withdraw of the some Covid restrictions imposed in the state like night curfew, weekend curfew.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X