ಕೊರೊನಾ ಕರ್ಫ್ಯೂ; ಪೊಲೀಸರಿಗೆ ಗೃಹಸಚಿವರ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು, ಏಪ್ರಿಲ್ 21: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬುಧವಾರ ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ನಡೆಸಿದ ಮಹತ್ವದ ಸಭೆಯಲ್ಲಿ ಅವರು ಈ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸೋಂಕು ಹರಡುವಿಕೆ ತಡೆಗಟ್ಟಲು ಪೊಲೀಸ್ ಇಲಾಖೆಯಿಂದ ತೆಗೆದುಕೊಳ್ಳುವ ಕ್ರಮಗಳ ಪರಾಮರ್ಶೆಗೆ ಮತ್ತು ಮಾರ್ಗಸೂಚಿಗಳನ್ನು ಪಾಲನೆ ಮಾಡುವ ನಿಟ್ಟಿನಲ್ಲಿ ಎಡಿಜಿಪಿ ಮಟ್ಟದ ಅಧಿಕಾರಿಗಳನ್ನು ವಲಯವಾರು ನಿಯೋಜಿಸಲಾಗಿದೆ. ಸರ್ಕಾರ ಜಾರಿಗೊಳಿಸಿರುವ ಕಠಿಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳು ನಿಗಾ ವಹಿಸಲಿದ್ದಾರೆ. ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಕೋವಿಡ್ ನಿಯಂತ್ರಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

Basavaraj Bommai Instructed State Police To Strictly Enforce Coronavirus Guidelines

ಕೋವಿಡ್ ನಿಯಂತ್ರಣದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಬೇಕು. ಎಸ್ ಡಿ ಆರ್ ಎಫ್ ಅಡಿ ಹತ್ತು ಕೋಟಿ ರೂಪಾಯಿ ನೆರವು ಕೋರಲಾಗಿದೆ ಎಂದು ಬೊಮ್ಮಾಯಿ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+