ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಬಸವರಾಜ ಬೊಮ್ಮಾಯಿ ಬದಲಾವಣೆ ಸುಳಿವು ಕೊಟ್ಟ ಕಾಂಗ್ರೆಸ್

|
Google Oneindia Kannada News

ಬೆಂಗಳೂರು, ಆಗಸ್ಟ್ 09: ರಾಜ್ಯದಲ್ಲಿ ಮಳೆ ಅಬ್ಬರದ ನಡುವೆ ಜನ ಪರದಾಡುತ್ತಿರುವಾಗ ಬಿಜೆಪಿ ಮೂರನೇ ಮುಖ್ಯಮಂತ್ರಿಯನ್ನು ಕೂರಿಸಲು ಕಸರತ್ತು ನಡೆಸುತ್ತಿದೆ ಎಂದು ಕರ್ನಾಟಕ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ರಾಜ್ಯ ಬಿಜೆಪಿಯಲ್ಲಿ ಕುರ್ಚಿಗಾಗಿ ಕಸರತ್ತು ನಡೆಯುತ್ತಿದೆ ಎಂದು ವ್ಯಂಗ್ಯವಾಡಿದೆ. ಬಿಜೆಪಿ ಸರಕಾರ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್ ನಡುವೆ ಸಿಎಂ ಕುರ್ಚಿಗಾಗಿ ಪೈಪೋಟಿಯಿದೆ ಎಂದು ಪ್ರತಿದಿನ ಟೀಕಿಸಿಸುತ್ತದೆ. ಇದಕ್ಕೆ ಕರ್ನಾಟಕ ಕಾಂಗ್ರೆಸ್ ತಿರುಗೇಟು ನೀಡಿದೆ.

ಬಿಜೆಪಿಗೆ ಮತ್ತೊಂದು ಠಕ್ಕರ್ ಕೊಡಲು ಕಾಂಗ್ರೆಸ್ ಭರ್ಜರಿ ಸಿದ್ದತೆಬಿಜೆಪಿಗೆ ಮತ್ತೊಂದು ಠಕ್ಕರ್ ಕೊಡಲು ಕಾಂಗ್ರೆಸ್ ಭರ್ಜರಿ ಸಿದ್ದತೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೈಗೊಂಬೆ ಎಂದು ಕರೆದು, ಕುರ್ಚಿಯಿಂದ ಕೆಳಗಿಳಿಯಲು ಗಂಟೆಗಳನ್ನು ಎಣಿಸುತ್ತಿದ್ದಿರಿ ಎಂದಿದೆ.

"ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ. ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು ಕರ್ನಾಟಕ ಬಿಜೆಪಿ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ. ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ' ಎಂದಿದೆ.

ಸಿಎಂ ಕುರ್ಚಿಯಿಂದ ಇಳಿಯಲು ದಿನಗಳಲ್ಲ, ಗಂಟೆಗಳಿವೆ!

ಸಿಎಂ ಕುರ್ಚಿಯಿಂದ ಇಳಿಯಲು ದಿನಗಳಲ್ಲ, ಗಂಟೆಗಳಿವೆ!

"ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ 'ಕತ್ತಿ ವರಸೆ' ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ!. ಬಸವರಾಜ ಬೊಮ್ಮಾಯಿಯವರೇ ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ BJPvsBJP ಕಾದಾಟವೇ? ಅಥವಾ ಯಡಿಯೂರಪ್ಪನವರ ಕೋಪವೇ?" ಎಂದು ಪ್ರಶ್ನಿಸಿರುವ ಕಾಂಗ್ರೆಸ್, ಉಮೇಶ್ ಕತ್ತಿ, ಸಿಎಂ ಸ್ಥಾನಕ್ಕೆ ನಾನು ಆಕಾಂಕ್ಷಿ ಎಂದಿರುವ ಸುದ್ದಿಯ ಫೊಟೋವನ್ನು ಹಂಚಿಕೊಂಡಿದೆ.

ಗೊಂಬೆಯಂತಿದ್ದ ಸಿಎಂ ಬಸವರಾಜ ಬೊಮ್ಮಾಯಿ!

ಗೊಂಬೆಯಂತಿದ್ದ ಸಿಎಂ ಬಸವರಾಜ ಬೊಮ್ಮಾಯಿ!

'ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರನ್ನ ಕೇಶವ ಕೃಪಾದವರು 'ಸಂಘಪರಿವಾರಿ'ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ! ಆಡಿಸಿ ನೋಡು ಎಂದು ಗೊಂಬೆಯಂತಿದ್ದ ಗೊಂಬೆ ಸಿಎಂ ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್! ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ ಕರ್ನಾಟಕ ಕಾಂಗ್ರೆಸ್..?' ಎಂದು ಪ್ರಶ್ನಿಸಿದೆ.

3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ!

3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ!

"ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ. 40% ಸರ್ಕಾರದಲ್ಲಿ '3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ! ಬಸವರಾಜ ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ" ಎಂದು ಬಿಜೆಪಿಯ ಮೌನವನ್ನು ಕೆಣಕಿದೆ.

ಮುಂದುವರೆದು, "ಸಿಎಂ ಬಸವರಾಜ ಬೊಮ್ಮಾಯಿ ಅವರೇ, ಬಿಜೆಪಿಯ ನಕಲಿ ನೋಟ್ ದಂಧೆಕೋರರೊಂದಿಗೆ ನಿಮ್ಮದೇನು ಸಂಬಂಧ? ಸಮಾಜಘಾತುಕರು, ಬಿಟ್ ಕಾಯಿನ್ ದಂಧೆಕೋರರು, 40% ಕಮಿಷನ್ ಗಿರಾಕಿಗಳು, ನೇಮಕಾತಿ ಅಕ್ರಮ ನಡೆಸುವವರು, ನಕಲಿ ನೋಟ್ ದಂಧೆಕೊರರು ಆಡಿಸಿದಂತೆ ಆಡುವ ಗೊಂಬೆ ಸಿಎಂ ಮಾತ್ರವೇ? ಕುರ್ಚಿ ಉಳಿಸಿಕೊಳ್ಳಲು ಈ ಎಲ್ಲಾ ಬಗೆಯ ಭ್ರಷ್ಟರಿಗೆ ಬೆಂಬಲವಾಗಿ ನಿಂತಿದ್ದೀರಾ?" ಎಂದು ಆಕ್ರೋಶ ವ್ಯಕ್ತ ಪಡಿಸಿದೆ.

ಬಿಜೆಪಿ ಕಾರ್ಯಕರ್ತರದ್ದು ಡ್ರಗ್ ಪೆಡ್ಲಿಂಗ್, ನಕಲಿ ನೋಟಿನ ದಂಧೆ!

ಬಿಜೆಪಿ ಕಾರ್ಯಕರ್ತರದ್ದು ಡ್ರಗ್ ಪೆಡ್ಲಿಂಗ್, ನಕಲಿ ನೋಟಿನ ದಂಧೆ!

"ಬಿಜೆಪಿ ಸರ್ಕಾರದ್ದು 40% ಕಮಿಷನ್ ದಂಧೆಯಾದರೆ, ಬಿಜೆಪಿ ಕಾರ್ಯಕರ್ತರದ್ದು ಡ್ರಗ್ ಪೆಡ್ಲಿಂಗ್, ನಕಲಿ ನೋಟಿನ ದಂಧೆ! ಬಿಜೆಪಿ ಐಟಿ ಸೆಲ್ಲಿನ 2 ರೂಪಾಯಿಯ ಭಕ್ತರ ನಕಲಿ ನೋಟ್ ಪ್ರಿಂಟ್ ದಂಧೆಯಲ್ಲಿ ಬಿಜೆಪಿಗೂ 40% ಪಾಲು ಇದೆಯೇ? ಇಂತಹ 'ದೋ ನಂಬರ್ ದಂಧಾ'ದಿಂದಲೇ ಬಿಜೆಪಿ ಬ್ರಹ್ಮೋತ್ಸವ ನಡೆಸಲು ಹಣ ಕ್ರೋಡೀಕರಣವೇ ಕರ್ನಾಟಕ ಬಿಜೆಪಿ? ಎಂದು ಕರ್ನಾಟಕ ಕಾಂಗ್ರೆಸ್ ಚಾಟಿ ಬೀಸಿದೆ.

Recommended Video

ಕೋಲಾರದಿಂದ ಸ್ಪರ್ಧಿಸ್ತಾರಾ ಸಿದ್ಧರಾಮಯ್ಯ..? | *Politics | OneIndia Kannada

English summary
Karnataka chief minister Basavaraj Bommai is Puppet CM said Karnataka Congress. In a tweet Congress verbal attack on BJP govt. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X