ಹೈಕಮಾಂಡ್‌ ನಾಯಕರ ಭೇಟಿ; ಪತ್ರಿಪಕ್ಷದ ನಾಯಕನ ಆಯ್ಕೆ ಯಾವಾಗ?: ಬಸವರಾಜ ಬೊಮ್ಮಾಯಿ ಹೇಳಿದಿಷ್ಟು?

ಬೆಂಗಳೂರು, ಆಗಸ್ಟ್‌ 11: ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿ ಮೂರು ತಿಂಗಳು ತಿಂಗಳಾದರೂ ವಿಪಕ್ಷ ನಾಯಕ ಆಯ್ಕೆ ಕಗ್ಗಂಟಾಗಿದೆ. ಈ ಕುರಿತು ಬಿಜೆಪಿ ಹೈಕಮಾಂಡ್‌ ಚರ್ಚೆ ನಡೆಸಿದ್ದು, ವಿರೋಧ ಪಕ್ಷದ ನಾಯಕನ ಆಯ್ಕೆ ತಡವಾಗುತ್ತಿರುವ ಹಿನ್ನಲೆ ರಾಜ್ಯ ಬಿಜೆಪಿ ಸಾಕಷ್ಟು ಮುಜುಗರವನ್ನ ಅನುಭವಿಸುತ್ತಿದ್ದು, ವಿಪಕ್ಷ ನಾಯಕ ಆಯ್ಕೆ ಇನ್ನೂ ತಡವಾಗಲಿದೆ.

ಹೌದು, ಈ ಕುರಿತು ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನ ಭೇಟಿ ಮಾಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದು, ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಹೇಳಿದರು.

Basavaraj Bommai: Leder Of Opposition To Be Decided After August 15

ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ, ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಾಗೂ ಪಕ್ಚದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದೇನೆ. ಅಲ್ಲದೇ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದ್ದೇನೆ ಎಂದು ಹೇಳಿದರು.

ಇನ್ನೂ ಮುಂದಿನ ಲೋಕಸಭೆ ಚುನಾವಣೆ ಸಿದ್ದತೆ, ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಬಗ್ಗೆ ಜನರ ಅಭಿಪ್ರಾಯ, ಸರ್ಕಾರದ ವಿರುದ್ದ ಮುಂದಿನ ಹೋರಾಟದ ಕುರಿತು ಚರ್ಚೆ ಮಾಡಿದ್ದೇವೆ. ಶೀಘ್ರವೇ ರಾಜ್ಯ ಸರ್ಕಾರದ ಎಲ್ಲ ವೈಫಲ್ಯಗಳ ವಿರುದ್ದ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಅಲ್ಲದೇ ಆಗಸ್ಟ್ 8 ರಂದು ಹೈಕಮಾಂಡ್‌ ನಾಯಕರ ಬುಲಾವ್‌ ಮೇರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದ ಬೊಮ್ಮಾಯಿ, ಪ್ರತಿಪಕ್ಷದ ನಾಯಕನ ಸ್ಥಾನ ನನಗೆ ಕೊಡಿ ಎಂದು ಕೇಳುವುದಕ್ಕಾಗಿ ಬಂದಿಲ್ಲ. ಆದರೆ, ಶೀಘ್ರದಲ್ಲೇ ಪ್ರತಿಪಕ್ಷ ನಾಯಕನನ್ನು ನೇಮಕ ಮಾಡದಿದ್ದರೆ ನಕಾರಾತ್ಮಕ ಅಭಿಪ್ರಾಯ ಮೂಡುತ್ತದೆ ಎಂದು ಹೇಳಿದ್ದರು ಎಂದು ತಿಳಿದು ಬಂದಿದೆ.

ಇನ್ನೂ ವಿರೋಧ ಪಕ್ಷದ ನಾಯಕ ಸ್ಥಾನಕ್ಕಾಗಿ ಬಿಜೆಪಿ ಪಾಳಯದಲ್ಲಿ ಹಲವು ಹಿರಿಯ ನಾಯಕರು ರೇಸ್‌ ನಲ್ಲಿದ್ದು, ಬಹಿರಂಗವಾಗಿ ವಿಪಕ್ಷ ಸ್ಥಾನದ ಆಯ್ಕೆ ಕುರಿತು ಹೇಳಿಕೆಯನ್ನ ನೀಡಿದ್ದಾರೆ. ಅಲ್ಲದೇ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ , ಆರ್. ಅಶೋಕ್, ಅಶ್ವತ್ಥ ನಾರಾಯಣ, ಸುನೀಲ್ ಕುಮಾರ್ ಹೆಸರು ಕೂಡ ಕೇಳಿ ಬಂದಿದ್ದು,ಬಸವನಗೌಡ ಪಾಟೀಲ್‌ ಯತ್ನಾಳ್‌ ಸಹ ವಿಪಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಸದ್ಯ ಯತ್ನಾಳ್‌ ಹಾಗೂ ಬಸವರಾಜ ಬೊಮ್ಮಾಯಿ ನಡುವೆ ವಿಪಕ್ಷ ಸ್ಥಾನಕ್ಕಾಗಿ ಮುಂಚೂಣಿಯಲ್ಲಿದ್ದಾರೆ.

ಒಟ್ನಲಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿರುವ ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕನ ಆಯ್ಕೆಯೇ ದೊಡ್ಡ ಸವಾಲಾಗಿದ್ದು, ಸುಮಾರು ಮೂರೂವರೆ ತಿಂಗಳಾದರೂ ಬಿಜೆಪಿಯು ಪ್ರತಿಪಕ್ಷ ನಾಯಕನ ನೇಮಕ ಮಾಡಿಲ್ಲ. ವಿಪಕ್ಷ ನಾಯಕನಿಲ್ಲದೇ ಬಜೆಟ್ ಅಧಿವೇಶನವೂ ನಡೆದಿದ್ದು, ಕಾಂಗ್ರೆಸ್‌ ನಾಯಕರ ಟೀಕೆಯಿಂದಾಗಿ ಬಿಜೆಪಿಯನ್ನು ಮುಜುಗರಕ್ಕೀಡುಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+