Breaking; ಪಿಣರಾಯಿ ವಿಜಯನ್ ಭೇಟಿಯಾದ ಬಸವರಾಜ ಬೊಮ್ಮಾಯಿ
ಬೆಂಗಳೂರು, ಸೆಪ್ಟೆಂಬರ್ 18: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಬಸವರಾಜ ಬೊಮ್ಮಾಯಿ ಭೇಟಿಯಾದರು. ಬೆಂಗಳೂರಿನಲ್ಲಿ ಉಭಯ ನಾಯಕರು ಭೇಟಿಯಾಗಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು.
ಭಾನುವಾರ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಪಿಣರಾಯಿ ವಿಜಯನ್ ಭೇಟಿ ಮಾಡಿದರು. ಮೈಸೂರು ಪೇಟ ತೊಡಿಸಿ, ಹೂ ಗುಚ್ಛ ನೀಡಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.

ಉಭಯ ರಾಜ್ಯದ ಮುಖ್ಯಮಂತ್ರಿಗಳ ಭೇಟಿ ಸಮಯದಲ್ಲಿ ವಸತಿ ಸಚಿವ ವಿ. ಸೋಮಣ್ಣ, ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಕೆಲವು ದಿನಗಳ ಹಿಂದೆ ತಿರುವನಂತಪುರದಲ್ಲಿ ದಕ್ಷಿಣ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆದಿತ್ತು. ಈ ಸಭೆಯ ಮುಂದುವರೆದ ಭಾಗವಾಗಿ ಬೆಂಗಳೂರಿನಲ್ಲಿ ಇಬ್ಬರು ಮುಖ್ಯಮಂತ್ರಿಗಳು ಇಂದು ಭೇಟಿ ಮಾಡಿದರು.
ಕೇರಳ ಸರ್ಕಾರದ ಪ್ರಸ್ತಾವಿತ ತಿರುವನಂತಪುರ-ಕಾಸರಗೋಡು ಸೆಮಿ ಹೈಸ್ಪೀಡ್ ರೈಲು ಯೋಜನೆಯನ್ನು ಮಂಗಳೂರಿನ ತನಕ ವಿಸ್ತರಣೆ ಮಾಡಲಾಗುತ್ತದೆ ಎಂಬ ಸುದ್ದಿಗಳಿವೆ. ಈ ಕುರಿತು ಉಭಯ ಮುಖ್ಯಮಂತ್ರಿಗಳು ಚರ್ಚೆ ನಡೆಸಲಿದ್ದಾರೆ.
ಮೂರು ಪ್ರಸ್ತಾವನೆಗಳು ತಿರಸ್ಕಾರ; ಕೇರಳ ಮುಖ್ಯಮಂತ್ರಿಗಳ ಭೇಟಿ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಕೇರಳ ಪ್ರಸ್ತಾಪಿಸಿದ ಮೂರು ಯೋಜನೆಗಳನ್ನು ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಬರುವ ಕಾರಣ ತಿರಸ್ಕರಿಸಲಾಗಿದೆ" ಎಂದರು.
"ಎರಡು ಮೂರು ಯೋಜನೆಗಳನ್ನು ಮುಂದಿಟ್ಟುಕೊಂಡು ಅವರು ಚರ್ಚೆ ನಡೆಸಿದರು. ಕನ್ಯೂಯೂರು ರೈಲ್ವೆ ಮಾರ್ಗದಲ್ಲಿ 45 ಕಿ. ಮೀ. ನಷ್ಟು ಸುಳ್ಯ ವ್ಯಾಪ್ತಿಗೆ ಬರುತ್ತದೆ. ಪರಿಸರ ಸೂಕ್ಷ್ಮ ವಲಯದಲ್ಲಿ ಬರುವ ಕಾರಣ ಕೇಂದ್ರ ಸರ್ಕಾರ ಈ ಯೋಜನೆ ತಿರಸ್ಕಾರ ಮಾಡಿದೆ" ಎಂದು ಮುಖ್ಯಮಂತ್ರಿಗಳು ಹೇಳಿದರು.
"ಮೈಸೂರು ರೈಲ್ವೆ ಮಾರ್ಗ, ಸುರಂಗದ ಮೂಲಕ ರೈಲು ಮಾರ್ಗಗಳ ಪ್ರಸ್ತಾವನೆಯನ್ನು ಮುಂದಿಟ್ಟರು. ಆದರೆ ಬಂಡೀಪುರ ಸೂಕ್ಷ್ಮ ವಲಯ ಪರಿಸರ ನಾಶವಾಗಲಿದೆ. ಆದ್ದರಿಂದ ಯೋಜನೆ ತಿರಸ್ಕಾರ ಮಾಡಲಾಗಿದೆ" ಎಂದು ಸ್ಪಷ್ಟಪಡಿಸಿದರು.












Click it and Unblock the Notifications