ಕೊನೆಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆಯ್ಕೆ ಸನ್ನಿಹ
ನವದೆಹಲಿ, ಆಗಸ್ಟ್ 9: ಮಾಜಿ ಮುಖ್ಯಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ ಅವರು ಬುಧವಾರ ಸಂಸತ್ತಿನಲ್ಲಿ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ, ಕರ್ನಾಟಕದಲ್ಲಿ ಬಿಜೆಪಿಗೆ ರಾಜ್ಯಾಧ್ಯಕ್ಷ ಮತ್ತು ರಾಜ್ಯದ ವಿರೋಧ ಪಕ್ಷದ ನಾಯಕರನ್ನು ಕೂಡಲೇ ನೇಮಿಸುವಂತೆ ಮನವಿ ಮಾಡಿದರು.
ಮೂಲಗಳ ಪ್ರಕಾರ, ಸಂಸತ್ ಅಧಿವೇಶನದ ನಂತರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನಡ್ಡಾ ಬೊಮ್ಮಾಯಿ ಅವರಿಗೆ ಭರವಸೆ ನೀಡಿದರು ಎನ್ನಲಾಗಿದೆ. ಅಲ್ಲದೆ, 2024ರ ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ಎದುರಿಸಲು ಬಿಜೆಪಿಯ ಕಾರ್ಯತಂತ್ರ ಏನು ಎಂದು ನಡ್ಡಾ ಮತ್ತು ಬೊಮ್ಮಾಯಿ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಖಾತರಿಗಳನ್ನು ಅನುಷ್ಠಾನಗೊಳಿಸುತ್ತಿದೆ, ಯೋಜನೆಗಳಿಗೆ ಜನರು ಹೇಗೆ ಸ್ಪಂದಿಸುತ್ತಿದ್ದಾರೆ ಮತ್ತು 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅದನ್ನು ಎದುರಿಸಲು ಬಿಜೆಪಿಯ ತಂತ್ರವೇನು ಮತ್ತು ಪ್ರಸ್ತುತ ಕರ್ನಾಟಕ ಕಾಂಗ್ರೆಸ್ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದರ ಕುರಿತು ಇಬ್ಬರೂ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.
ಮೊನ್ನೆ ಮಂಗಳವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬೊಮ್ಮಾಯಿ ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದರು. ನಾನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದ್ದೇನೆ ಮತ್ತು ರಾಜ್ಯದ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇನೆ ಎಂದು ಬೊಮ್ಮಾಯಿ ಮಂಗಳವಾರ ಟ್ವೀಟ್ ಮಾಡಿದ್ದರು.
ಮೂಲಗಳ ಪ್ರಕಾರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರು ಮತ್ತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನು ಶೀಘ್ರವಾಗಿ ನೇಮಕ ಮಾಡುವಂತೆ ಮಾಜಿ ಮುಖ್ಯಮಂತ್ರಿ ಶಾ ಅವರಿಗೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದರು. ಬಳಿಕ ಲೋಕಸಭಾ ಚುನಾವಣೆ 2024ಕ್ಕೆ ಕೆಲವೇ ತಿಂಗಳುಗಳ ಬಾಕಿ ಇದೆ. ಈ ಸಂಬಂಧ ಪ್ರಮುಖ ರಾಜಕೀಯ ಪಕ್ಷಗಳು ಅಗತ್ಯ ಸಿದ್ಧತೆ ಆರಂಭಿಸಿವೆ. ಈ ಮಧ್ಯೆ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿರುವ ಬಿಜೆಪಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಈ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 22 ಸ್ಥಾನ ಗೆಲ್ಲುವುದು ಕನಸಿನ ಮಾತು ಎಂದು ತಿಳಿಸಿದ್ದರು.
ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ 1996 ರಿಂದ ಲೋಕಸಭೆ ದೊಡ್ಡ ಪ್ರಮಾಣದಲ್ಲಿ ಗೆದ್ದಿಲ್ಲ. 2018 ರಲ್ಲಿ ನಾವು ರಾಜ್ಯದಲ್ಲಿ ಅಧಿಕಾರದಲ್ಲಿ ಇರಲಿಲ್ಲ ಆದರೆ, ನಾವು ಹೆಚ್ಚು ಸ್ಥಾನಗಳನ್ನು ಗೆದ್ದಿದ್ದೆವು. ಲೋಕಸಭೆ ಚುನಾವಣೆಯ ವಿಚಾರಗಳು ಬೇರೆ ಇರುತ್ತವೆ ಎಂದ ಅವರು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದ ಒಟ್ಟು ಸ್ಥಾನಗಳ ಪೈಕಿ 25 ಸೀಟು ಉಳಿಸಿಕೊಳ್ಳಲು ತಯಾರಿ ನಡೆಸಿದ್ದೇವೆ ಎಂದು ಅವರು ಹೇಳಿದ್ದರು.
ನಾನು ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ದೆಹಲಿಗೆ ಆಗಮಿಸುವಂತೆ ಸಂಸದರು ಮನವಿ ಮಾಡಿದ್ದರು. ಈ ಹಿನ್ನಲೆ ದೆಹಲಿಗೆ ಆಗಮಿಸಿದ್ದೇನೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಪ್ರಯತ್ನ ಮಾಡಿದೆ. ಅಮಿತ್ ಶಾ ಭೇಟಿಗೂ ಪ್ರಯತ್ನ ಮಾಡಿದ್ದೇನೆ. ಅವರು ಸಂಸತ್ ಕಲಾಪ ಹಿನ್ನಲೆ ಸಮಯ ಸಿಗದ ಕಾರಣ ಅವರನ್ನು ಬೇಟಿ ಮಾಡಲ ಆಗಲ್ಲಿಲ್ಲ. ಸಮಯ ಸಿಕ್ಕ ಬಳಿಕ ನಾನು ಬೇಟಿ ಮಾಡಲಿದ್ದೇನೆ ಎಂದು ಹೇಳಿದ್ದರು.












Click it and Unblock the Notifications