Breaking; 4 ಗಂಟೆಗೆ ಮಹತ್ವದ ಪತ್ರಿಕಾಗೋಷ್ಠಿ ಕರೆದ ಸಿಎಂ

ಬೆಂಗಳೂರು, ಮೇ 07; ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಪತ್ರಿಕಾಗೋಷ್ಠಿ ಕರೆದಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಈ ಪತ್ರಿಕಾಗೋಷ್ಠಿ ನಡೆಯಲಿದೆ.

ಶನಿವಾರ ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನ ರಸ್ತೆಯಲ್ಲಿರುವ ಹೋಟೆಲ್ ಪರಾಗ್‌ನಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ಮುಂತಾದವರು ಭಾಗವಹಿಸಲಿದ್ದಾರೆ.

ಬಸವರಾಜ ಬೊಮ್ಮಾಯಿ ಸಂಪುಟದ ಸಚಿವರು ಸಹ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಕೋಲಾರ, ಮಂಡ್ಯ ಭಾಗದ ಹಲವಾರು ನಾಯಕರು ಸಹ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

Basavaraj Bommai Press Conference At 4 Pm Today

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನವದೆಹಲಿಗೆ ತೆರಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಜೊತೆ ಮುಖ್ಯಮಂತ್ರಿಗಳು ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ.

ಸಂಪುಟ ವಿಸ್ತರಣೆ ಚರ್ಚೆಯ ಹಿನ್ನಲೆಯಲ್ಲಿ ಪ್ರಹ್ಲಾದ್ ಜೋಶಿ ಭೇಟಿ ಸಹ ಕುತೂಹಲಕ್ಕೆ ಕಾರಣವಾಗಿದೆ. ವಿಮಾನ ನಿಲ್ದಾಣದಿಂದ ಪರಾಗ್ ಹೋಟೆಲ್‌ಗೆ ಮುಖ್ಯಂಮಂತ್ರಿಗಳು ಆಗಮಿಸಲಿದ್ದಾರೆ.

ಬಸವರಾಜ ಬೊಮ್ಮಾಯಿ ಮೇ 10ರಂದು ನವದೆಹಲಿಗೆ ತೆರಳಲಿದ್ದಾರೆ. ಮೇ 11ರಂದು ವಾಪಸ್ ಆಗಲಿದ್ದಾರೆ. ಮೇ 11ರಂದು ಬೆಳಗ್ಗೆ ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಸಹ ಮಧ್ಯಾಹ್ನಕ್ಕೆ ಮುಂದೂಡಲಾಗಿದೆ.

ಪಿಎಸ್‌ಐ ನೇಮಕಾತಿ ಹಗರಣ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಕರೆದಿರುವ ಪತ್ರಿಕಾಗೋಷ್ಠಿ ಮಹತ್ವ ಪಡೆದುಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+