GST ಕಡಿತ ದಸರಾ ಹಬ್ಬದ ಕೊಡುಗೆ; "ಸಿದ್ದರಾಮಯ್ಯ ಸರ್ಕಾರ ಹಾಕಿರುವ ತೆರಿಗೆಯನ್ನು ಇಳಿಸುವರೇ?"
ಬೆಂಗಳೂರು, ಸೆಪ್ಟೆಂಬರ್ 22: ಜನ ಸಾಮಾನ್ಯರ ತೆರಿಗೆ ಭಾರವನ್ನು ಅತ್ಯಂತ ಕಡಿಮೆ ಮಾಡಿ ದಸರಾ ಹಬ್ಬದ ಕೊಡುಗೆ ನೀಡಿರುವ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರ ಜನರ ಮೇಲೆ ಹಾಕಿರುವ ತೆರಿಗೆ ಇಳಿಸುವುದೇ ಎಂದು ಜನಸಾಮಾನ್ಯರು ಕೇಳುತ್ತಿದ್ದಾರೆ ಎಂದು ಬಸವರಾಜ್ ಬೊಮ್ಮಾಯಿ ಅವರು ಪ್ರಶ್ನಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು 2017 ರಲ್ಲಿ ಪ್ರಾರಂಭವಾಗಿರುವ ಜಿಎಸ್ ಟಿ ದಿಟ್ಟ ನಿರ್ಧಾರ. ಕೊವಿಡ್ ಸಂದರ್ಭದಲ್ಲಿಯೂ ಯಾವ ರಾಜ್ಯಕ್ಕೂ ತೊಂದರೆ ಆದಗಂತೆ ನೋಡಿಕೊಂಡಿರುವ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಈಗ ಆರ್ಥಿಕ ಸುಭದ್ರತೆಯ ಹಿನ್ನೆಲೆಯಲ್ಲಿ ಬಹಳಷ್ಟು ವಸ್ತುಗಳಿಗೆ ತೆರಿಗೆ ವಿನಾಯತಿ ಮಾಡಿದ್ದಾರೆ. ಶೇ. 90 ರಷ್ಟು ವಸ್ತುಗಳ ಮೇಲಿನ ತೆರಿಗೆಯನ್ನು ಶೇ ೫% ಕ್ಕೆ ಇಳಿಸಿದ್ದಾರೆ. ಕೆಲವು ವಸ್ತುಗಳಿಗೆ ಶೇ 18% ರಷ್ಟು ತೆರಿಗೆ ಮಾಡಿ ಕೇವಲ ಎರಡೇ ಸ್ಲ್ಯಾಬ್ ಮಾಡಿ ತೆರಿಗೆ ಸರಳೀಕರಣ ಮಾಡಿರುವ ಶ್ರೇಯಸ್ಸು ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ. ಇದರಿಂದ ರೈತರು ಬಳಕೆ ಮಾಡುವ ಟ್ರ್ಯಾಕ್ಟರ್, ಟೈಲರ್ ಮತ್ತು ಇತರ ಕೃಷಿ ಸಲಕರಣೆಗಳು, ಗೊಬ್ಬರ ಮೇಲಿನ ತೆರಿಗೆ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

ಜನ ಸಾಮಾನ್ಯರು ಬಳಕೆ ಮಾಡುವ ಮೊಸರು, ಹಾಲು, ತುಪ್ಪ ಸೇರಿದಂತೆ ಬಹುತೇಕ ಎಲ್ಲ ವಸ್ತುಗಳ ಬೆಲೆ ಕಡಿಮೆಯಾಗುತ್ತದೆ. ಇದು ನಿಜವಾಗಲೂ ಬಡವರ ಪರ ಸರ್ಕಾರ ಎನ್ನುವುದನ್ನು ತೋರಿಸಿದ್ದಾರೆ. ಇದಲ್ಲದೇ ಆರ್ಥಿಕತೆಗೆ ಎಲ್ಲ ರೀತಿಯ ಪ್ರೋತ್ಸಾಹ ಸಿಗುತ್ತದೆ ಎನ್ನುವ ವಿಶ್ವಾಸದೊಂದಿಗೆ. ಭಾರತ ಅತ್ಯಂತ ವೇಗದಲ್ಲಿ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ ಆಗಲು ಇದು ಬಹಳ ದೊಡ್ಡ ಸಹಾಯ ಆಗಲಿದೆ. ಅಲ್ಲದೇ 2 ಲಕ್ಷ ಕೋಟಿ ರೂ. ಜನರ ಬಳಿ ತೆರಿಗೆ ಹಣ ಉಳಿಯಲಿದೆ. ತೆರಿಗೆ ಸರಳೀಕರಣ ಮಾಡಿ ಇನ್ವರ್ಟೆಡ್ ಡ್ಯೂಟಿ ಸ್ಟ್ರಕ್ಚರ್ ತೆಗೆದು ಹಾಕಿದ್ದಾರೆ. ನೇರವಾಗಿ ಎಲ್ಲ ಲಾಭವು ವಿಶೆಷವಾಗಿ ಸಣ್ಣ ಕೈಗಾರಿಕೆಗೆ ಸಿಗಲಿದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರ ಸ್ವಾಭಿಮಾನದ ಸ್ವಾವಲಂಬನೆಯ ಭಾರತ ನಿರ್ಮಾಣಕ್ಕೆ ಬಹಳ ದೊಡ್ಡ ಶಕ್ತಿಯಾಗಿದೆ. ಎಲ್ಲರೂ ಕೂಡ ಆ ಕರೆಗೆ ಸಂಪೂರ್ಣವಾಗಿ ಸಹಕರಿಸಬೇಕು ಎಂದು ಕೋರಿದ್ದಾರೆ.
ಸಿಎಂ ತೆರಿಗೆ ಇಳಿಸುವರೇ?
ಪ್ರಧಾನಿ ನರೇಂದ್ರ ಮೋದಿಯವರು ಜಿಎಸ್ ಟಿ ತೆರಿಗೆ ಇಳಿಸಿ ಜನ ಸಾಮಾನ್ಯರಿಗೆ ಬಹಳ ದೊಡ್ಡ ಹಬ್ಬದ ಕೊಡುಗೆ ಕೊಟ್ಟ ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಕಳೆದ ಎರಡು ವರ್ಷದಲ್ಲಿ ಒಂದು ಲಕ್ಷ. ಕೋಟಿ ಹೊಸ ತೆರಿಗೆಯನ್ನು ಜನರ ಮೇಲೆ ಹಾಕಿರುವ ಅಪಖ್ಯಾತಿ ಕರ್ನಾಟಕ ಕಾಂಗ್ರೆಸ್ ಸಿದ್ದರಾಮಯ್ಯ ಸರ್ಕಾರದ ಮೇಲಿದೆ. ಇವರು ಬಂದ ತಕ್ಷಣವೇ ಪೆಟ್ರೊಲ್, ಮೊಟರ್ ವೆಹಿಕಲ್ ತೆರಿಗೆ, ಸ್ಟ್ಯಾಂಪ್ ಡ್ಯೂಟಿ, ಅಬಕಾರಿಗೆ ಅತಿ ಹೆಚ್ಚು ತೆರಿಗೆ ಹಾಕಿದ್ದು, ಇದರಿಂದ ಹಾಲು, ನೀರು ಜನಸಾಮಾನ್ಯರು ಬಳಕೆ ಮಾಡುವ ವಸ್ತುಗಳು ದುಬಾರಿಯಾಗಿವೆ. ಇವರು ನೀರೀನ ಮೇಲೂ, ಗಾಳಿಯ ಮೇಲೂ ತೆರಿಗೆ ಹಾಕಿದ್ದಾರೆ.
ಅಷ್ಟೆಯಲ್ಲ ಬೆಂಗಳೂರಿನಲ್ಲಿ ಕಸದ ಮೇಲೂ ವಿಶೇಷ ತೆರಿಗೆ ಹಾಕಿದ್ದಾರೆ. ಇದೊಂದು ತೆರಿಗೆ ಭಾರ ಹಾಕಿರುವ ಜನ ವಿರೋಧಿ ಸರ್ಕಾರ ಎನ್ನುವುದು ಸ್ಪಷ್ಟವಾಗಿದೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಾವು ಹಾಕಿರುವ ತೆರಿಗೆಗಳನ್ನು ಕಡಿಮೆ ಮಾಡುತ್ತಾರೆಯೇ ಎಂಬ ಪ್ರಶ್ನೆಯನ್ನು ಜನ ಸಾಮಾನ್ಯರು ಕೇಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ











Click it and Unblock the Notifications