ಕಾಂಗ್ರೆಸ್ ವಿರುದ್ಧ ಬಿಜೆಪಿ-ಜೆಡಿಎಸ್ 'ಮೈತ್ರಿ ಹೋರಾಟ' ಜನರ ಬಯಕೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ, ಸೆಪ್ಟಂಬರ್ 11: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತ ಹೆಚ್ಚಾಗಿದೆ. ಅದರ ವಿರುದ್ಧ ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕು ಎನ್ನುವುದು ರಾಜ್ಯದ ಜನರ ಅಪೇಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.

ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜಕಾರಣ ಎಂಬುದು ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ಮತ್ತೊಂದು ಕಡೆ ಸಚಿವರುಗಳು ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರ ಮತ್ತು ನಾಯಕರ ವಿರುದ್ಧ ಅವರು ವಾಗ್ದಾಳಿ ನಡೆಸಿದರು.

basavaraj-bommai-reaction

ರಾಜ್ಯದಲ್ಲಿ ರಸ್ತೆಗೆ ಒಂದು ಹಿಡಿ ಮಣ್ಣನ್ನು ಹಾಕಲಾರದ ಸ್ಥಿತಿ ನಿರ್ಮಾಣ.ಈ ರೀತಿ ಆದರೆ ಇಡೀ ರಾಜ್ಯ ಅಧೋಗತಿ ಹೋಗುತ್ತದೆ. ಇದನ್ನು ನಿಲ್ಲಿಸುವ ಉದ್ದೇಶದಿಂದ ನಾವಂತೂ ಹೋರಾಟ ಮಾಡುತ್ತಿದ್ದೇವೆ. ಆಡಳಿತ ಪಕ್ಷದ ವಿರುದ್ಧ ಹೋರಾಟ ಮಾಡುವುದು ವಿರೋಧ ಪಕ್ಷದ ಜವಾಬ್ದಾರಿ ಇದೆ. ಈ ಹಿನ್ನಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಿರ್ಧಾರ ಪ್ರಕಟವಾಗಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕುರಿತು ಮಾತುಕತೆ ನಡೆದಿದೆ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹಿಂದೆ ಕಾಂಗ್ರೆಸ್ ನವರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರಲ್ಲವೇ ಆಗ ಇಬ್ಬರೂ ಅಸಹಾಯಕರಿದ್ದರೆ ? ಜೆಡಿಎಸ್ ಗೆ ಎಷ್ಟು ಸ್ಥಾನ ಕೊಡಬೇಕು ಅನ್ನುವುದನ್ನು ವಸ್ತು ಸ್ಥಿತಿ ಆಧಾರದ ಮೇಲೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ವಿವರಿಸಿದರು.

ಬರ ಘೋಷಣೆಗೆ ಸರ್ಕಾರ ಕುಂಟು ನೆಪ ಹೇಳುತ್ತಿದೆ

ರಾಜ್ಯದಲ್ಲಿ ಬರ ಘೋಷಣೆಗೆ ಕೇಂದ್ರ ಸರ್ಕಾರದ ಮಾನದಂಡಗಳು ಅಡ್ಡಿಯಾಗುತ್ತಿವೆ ಎಂದು ರಾಜ್ಯ ಸರ್ಕಾರ ಕುಂಟು ನೆಪ ಹೇಳುತ್ತಿದೆ. ಈ ಹಿಂದೆಯೂ ಇದೇ ನಿಯಮಗಳಿದ್ದವು. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬರ ಘೋಷಣೆ ಮಾಡಲಿಲ್ಲವೇ.? ನಾವು ಸಹ ಕೇಂದ್ರ ಸರ್ಕಾರ ಕೊಡುವುದಕ್ಕಿಂತ ಹೆಚ್ಚಿನ ಹಣ ಕೊಟ್ಟಿದ್ದೇವು. ನಿಯಮ ಬದಲಾವಣೆಗಾಗಿ ನಾವು ಕಾದುಕೊಂಡು ಕುಳಿತಿದ್ದೇವಾ? ಎಂದು ಅವರು ಪ್ರಶ್ನಿಸಿದರು.

basavaraj-bommai-reaction

ನಾವು ಬರ ಪರಿಹಾರದ ಎರಡು ಪಟ್ಟು ಮೊತ್ತ ಕೊಟ್ಟಿದ್ದೇವು. ರಾಜ್ಯ ಸರ್ಕಾರಕ್ಕೆ ಜನರಿಗೆ ಸಹಾಯ ಮಾಡಬೇಕೆಂಬ ಮನಸಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣೆಯ ಮೊದಲನೇ ಕಂತು ಈಗಾಗಲೇ ಬಂದಿದೆ. ಇವರಿಗೆ ರೈತರ ಸಂಕಷ್ಟ ಪರಿಹಾರ ಮಾಡೋ ಮನಸ್ಸಿಲ್ಲ. ರಾಜ್ಯ ಸರ್ಕಾರ ತನ್ನ ಅಧಿಕಾರ ಬಳಸಿ ಕೂಡಲೇ ಬರ ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಖಾಸಗಿ ಬಸ್ ಮಾಲೀಕರ ಬೇಡಿಕೆ ಈಡೇರಿಸಿ

ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದಿರುವುದರಿಂದ ಖಾಸಗಿ ವಾಹನಗಳ ಮಾಲೀಕರು ಸಮಸ್ಯೆಗೆ ಸಿಲುಕಿದ್ದಾರೆ. ಸರ್ಕಾರ ಖಾಸಗಿ ಬಸ್ ಮಾಲೀಕರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳುತ್ತಲೇ ಬಂದಿದ್ದಾರೆ. ಸುಮ್ಮನೆ ಸಭೆ ಮಾಡಿದರು, ಈಗ ಖಾಸಗಿ ಬಸ್ ಮಾಲೀಕರ ವಿಶ್ವಾಸ ಕಳೆದುಕೊಂಡಿದ್ದಾರೆ. ಈಗಲಾದರೂ ಸರ್ಕಾರ ಎಚ್ಚೆತ್ತು ಖಾಸಗಿ ಬಸ್ ಮಾಲೀಕರ ಬೇಡಿಕೆ ಈಡೇರಿಸಬೇಕು ಎಂದು ಹೇಳಿದರು.

ಇನ್ನು ಹಾವೇರಿಯ ಹೊಸರಿತ್ತಿ ಲಾಕಪ್ ಡೆತ್ ಪ್ರಕರಣ ಕುರಿತು ಮಾಹಿತಿ ತೆಗೆದುಕೊಳ್ಳುತ್ತೇನೆ. ಈ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರೆ ಖಂಡಿತ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+