100 Day of Congress Govt: ಸರ್ಕಾರದ ನೂರು ದಿನದ ವೈಫಲ್ಯ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ
ಬೆಂಗಳೂರು, 28: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನ ಪೂರೈಸಿದೆ. ಈ ಸಂಬಂಧ ಸಂಭ್ರಮಾಚರಣೆಯಲ್ಲಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಾಗ್ದಾಳಿ ನಡೆಸಿದ್ದು, ಸರ್ಕಾರ ಎಡೆವಿದ್ದೆಲ್ಲಿ ಎಂಬ ಕೆಲವು ಅಂಶಗಳನ್ನು ವಿವರಿಸಿದ್ದಾರೆ.
ಸಂಪೂರ್ಣ ಬಹುಮತದೊಂದಿಗೆ ಬಂದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು. ಗ್ಯಾರೆಂಟಿ ನೆಪದಲ್ಲಿ ಒಂದು ವರ್ಷದ ಅಭಿವೃದ್ಧಿಯ ಎಲ್ಲ ಕಾಮಗಾರಿಗಳು ಸಂಪೂರ್ಣ ನಿಂತು ಹೋಗಿದೆ ಎಂದು ಸಾಮಾಜಿಕ ಜಾಲತಾಣ X ನಲ್ಲಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ವಿರುದ್ಧ ಅವರು ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಸರ್ಕಾರ ವರ್ಗಾವಣೆಯನ್ನು ಒಂದು ಕಮಿಷನ್ ದಂಧೆಯಾಗಿ ಮಾಡಿ, ವಿಧಾನಸೌಧದ ಮೂಲೆ ಮೂಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗುತ್ತಿಗೆದಾರರ ಬಿಲ್ ಬಾಕಿ ಇಟ್ಟುಕೊಂಡು ಕಮಿಷನ್ ದಂಧೆಗೆ ಮುಂದಾಗಿದೆ ಎಂದು ಅವರು ಆರೋಪಿಸಿದರು.
ಬರಗಾಲದ ಜನರತ್ತ ತಿರುಗಿ ನೋಡದ ಸರ್ಕಾರ
ರೈತರು ಬರಗಾಲದ ಬವಣೆಯಲ್ಲಿ ಸಿಕ್ಕರೂ ಕೂಡ ಸರ್ಕಾರ ಅವರತ್ತ ತಿರುಗಿಯೂ ನೋಡಿಲ್ಲ. ರೈತರ ಆತ್ಮಹತ್ಯೆ ಮತ್ತೆ ಪ್ರಾರಂಭವಾಗಿದೆ. ಕೃಷಿ ಉತ್ಪಾದನೆಗೆ ಪೆಟ್ಟು ಬೀಳುವ ಎಲ್ಲ ಲಕ್ಷಣ ಕಾಣುತ್ತಿದೆ. ಪೂರ್ಣ ಪ್ರಮಾಣದ ಗ್ಯಾರೆಂಟಿ ಅನುಷ್ಠಾನ ಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.
ಒಂದು ಕಡೆ ವಿದ್ಯುತ್ ದರ ಹೆಚ್ಚಿಸಿ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಸಾರಿಗೆ ಸಿಬ್ಬಂದಿಗೆ ಸಮರ್ಪಕವಾದ ಸಂಬಳ ನೀಡಿಲ್ಲ. 10 ಕೆಜಿ ಅಕ್ಕಿ ಗ್ಯಾರೆಂಟಿಯನ್ನು ಈಡೇರಿಸಲಾಗಿಲ್ಲ. ಕೇಂದ್ರದ ಐದು ಕೆಜಿ ಅಕ್ಕಿಯೇ ಜನರ ಸಹಾಯಕ್ಕೆ ಬಂದಿದೆ. ರಾಜ್ಯದಲ್ಲಿ ಗೃಹಲಕ್ಷ್ಮೀಯರ ಹುಡುಕಾಟ ಪೂರ್ಣಗೊಂಡಿಲ್ಲ ಎಂದರು.
ರೈತರು ಬರಗಾಲದ ಬವಣೆಯಲ್ಲಿ ಸಿಕ್ಕರೂ ಕೂಡ ಸರ್ಕಾರ ಆ ಕಡೆ ತಿರುಗಿ ನೋಡಿಲ್ಲ. ರೈತರ ಆತ್ಮಹತ್ಯೆ ಮತ್ತೆ ಪ್ರಾರಂಭವಾಗಿದೆ. ಕೃಷಿ ಉತ್ಪಾದನೆಗೆ ಪೆಟ್ಟು ಬೀಳುವ ಎಲ್ಲ ಲಕ್ಷಣ ಕಾಣುತ್ತಿದೆ. ಪೂರ್ಣ ಪ್ರಮಾಣದ ಗ್ಯಾರೆಂಟಿ ಅನುಷ್ಠಾನ ಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದೆ.
— Basavaraj S Bommai (@BSBommai) August 28, 2023
ಒಂದು ಕಡೆ ವಿದ್ಯುತ್ ದರ ಹೆಚ್ಚಿಸಿ ಗ್ರಾಹಕರಿಗೆ ಶಾಕ್ ಕೊಟ್ಟಿದೆ.…
ಎಸ್ಸಿ, ಎಸ್‌ಟಿ, ಒಬಿಸಿ ಜನರಿಗೆ ಸರ್ಕಾರಮೋಸ
ಈ ಮಧ್ಯ ಗ್ಯಾರೆಂಟಿಗಾಗಿ ಎಸ್ಸಿ ಎಸ್ಟಿ ಅಭಿವೃದ್ಧಿ ಹಣ 11 ಸಾವಿರ ಕೋಟಿ ರೂಪಾಯಿ ಬಳಕೆ ಮಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮತ್ತು ಹಿಂದುಳಿದ ವರ್ಗದ ಜನರಿಗೆ ಸರ್ಕಾರ ಮೋಸ ಮಾಡಿದೆ.

ಕಾವೇರಿ ಜಲಾನಯನ ಪ್ರದೇಶದ ರೈತರ ಮತ್ತು ಸಾರ್ವಜನಿಕರ ಹಿತ ಕಾಯಲು ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ನಮ್ಮ ಡ್ಯಾಮ್‌ಗಳ ಕೀಲಿಕೈಯನ್ನು ತಮಿಳುನಾಡಿಗೆ ಒಪ್ಪಿಸಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಪೈಪೋಟಿ ಆಡಳಿತದ ವ್ಯವಸ್ಥೆ ಮೇಲೆ ದುಷ್ಪರಿಣಾಮ ಬೀರಿದೆ. ಇದರಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣ ವಾಗಿ ಹದಗೆಟ್ಟಿದೆ ಕೊಲೆ ಸುಲಿಗೆ ಸಾಮಾನ್ಯವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಶಾಸಕರ ವಿಶ್ವಾಸ ಕಳೆದುಕೊಂಡ ಸರ್ಕಾರ
ಕಾಂಗ್ರೆಸ್ ಸರ್ಕಾರ ನೂರು ದಿನಗಳಲ್ಲಿ ಜನರ ವಿಶ್ವಾಸ ಗಳಿಸುವುದು ದೂರದ ಮಾತು ಅವರ ಶಾಸಕರ ವಿಶ್ವಾಸವನ್ನೇ ಕಳೆದುಕೊಂಡಿದೆ. ಎಲ್ಲ ರಂಗದಲ್ಲಿ ವೈಫಲ್ಯವೇ ಇವರ ಸಾಧನೆ. ಸರ್ಕಾರದ ವಿರುದ್ದ ಜನ ಸಾಮಾನ್ಯರು, ಮಾಧ್ಯಮದವರು, ಸಂಘ ಸಂಸ್ಥೆಗಳು ಧ್ವನಿ ಎತ್ತುವುದನ್ನು ಪೊಲೀಸ್ ಇಲಾಖೆ ಮೂಲಕ ಹತ್ತಿಕ್ಕುವ ಪ್ರಯತ್ನನಡೆಯುತ್ತಿದೆ.
ಸರ್ಕಾರದ ಈ ನಡೆಗಳು ಪ್ರಜಾಪ್ರಭುತ್ವ ವಿರೊಧಿ ನೀತಿ ಆಗಿದೆ. ಇದು ಸಂವಿಧಾನ ವಿರೋಧಿ ಹಾಗೂ ಸರ್ವಾಧಿಕಾರಿ ಆಡಳಿತ ಎಂಬುದನ್ನು ಈ ನೂರು ದಿನಗಳಲ್ಲಿ ತೋರಿಸಿಕೊಟ್ಟಿದೆ ಎಂದು ಅವರು ಕಿಡಿ ಕಾರಿದರು.












Click it and Unblock the Notifications