ಸುದೀಪ್-ದರ್ಶನ್ ಫ್ಯಾನ್ಸ್ ವಾರ್: ಕಿಚ್ಚನ ಪರ ಬ್ಯಾಟಿಂಗ್ ಬೀಸಿದ ಮಾಜಿ ಸಿಎಂ
ಕಲಬುರಗಿ: ಸ್ಯಾಂಡಲ್ವುಡ್ನಲ್ಲಿ ಮತ್ತೆ ಯುದ್ಧಕಾಂಡ ಶುರುವಾಗಿದೆ. ಕಿಚ್ಚ ಸುದೀಪ್ ಮತ್ತು ದಾಸ ದರ್ಶನ್ ಅಭಿಮಾನಿಗಳು ನಡುವೆ ಫ್ಯಾನ್ಸ್ ವಾರ್ ಶುರುವಾಗಿದೆ. ಅಷ್ಟಕ್ಕೂ ಈ ಫ್ಯಾನ್ಸ್ ವಾರ್ಗೆ ಕಾರಣ ಆಗಿದ್ದು ಬೇರ್ರಾರೂ ಅಲ್ಲ ಖುದ್ದು ಕಿಚ್ಚ ಸುದೀಪ್ ಮತ್ತು ದರ್ಶನ್ ಪತ್ನಿ ವಿಜಯಲಕ್ಷ್ಮೀ ಆಡಿದ ಈ ಮಾತುಗಳು. ಇನ್ನೂ ಸುದೀಪ್- ದರ್ಶನ್ ನಡುವಿನ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕಿಚ್ಚ ಸುದೀಪ್ ಅವರ ಪರ ಬ್ಯಾಟಿಂಗ್ ಬೀಸಿದ್ದಾರೆ.
ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುದೀಪ್- ದರ್ಶನ್ ನಡುವಿನ ವಿಚಾರ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಸುದೀಪ್ ಸಿನಿಮಾ ಪೈರಸಿ ಬಗ್ಗೆ ಮಾತನಾಡಿದ್ದರೆ, ಪೈರಸಿ ಬಗ್ಗೆ ಆಂಟಿ ಪೈರಸಿ ಕಾನೂನು ಇದೆ. ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಸಿನಿಮಾ ಅಷ್ಟೆ ಅಲ್ಲಾ, ಎಲ್ಲಾ ರಂಗದಲ್ಲೂ ಕೂಡ ಪೈರಸಿ ಇದೆ. ಹಾಗಾಗಿ ಇದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಅಮೃತಾಂಜನ್, ವಿಕ್ಸ್ ಹಿಡಿದು ಎಲ್ಲವೂ ಡೂಪ್ಲಿಕೆಟ್ ಆಗುತ್ತಿವೆ. ಹಾಗೇ ಸಿನೇಮಾ ಕೂಡ ಪೈರೆಸಿ ತಡೆಗಟ್ಟಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಕಲಬುರಗಿ: ರಾಜ್ಯ ಕಾಂಗ್ರೆಸ್ ನಾಯಕರ ಕುರ್ಚಿ ಕಚ್ಚಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಇದು ನಾವು ಮಾತ್ರವಲ್ಲ ಆಡಳಿತ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಇದರಿಂದ ಆಡಳಿತದ ಮೇಲೆ ದುಷ್ಪರಿಣಾಮ ಆಗುತ್ತಿದೆ ಅಂತ ಕೆಪಿಸಿಸಿ ಉಪಾಧ್ಯಕ್ಷರೇ ಸ್ವತಃ ಪತ್ರ ಬರೆದಿದ್ದಾರೆ. ಯಾವ ಸರಕಾರ ಸ್ಥಿರ ಇರಲ್ಲವೋ ಸಹಜವಾಗಿಯೇ ಅಭಿವೃದ್ದಿ ಕುಂಠಿತವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಾಂಗ್ರೆಸ್ ನಲ್ಲಿ ಹೈ ಇದೆ. ಕಮಾಂಡ್ ಇಲ್ಲವೇ ಇಲ್ಲ ಕಾಂಗ್ರೆಸ್ ನಲ್ಲಿ ಗೊಂದಲ ಇದೆ. ಇದರಲ್ಲಿ ಎರಡು ಮಾತಿಲ್ಲ ಕಾಂಗ್ರೆಸ್ ಹೈಕಮಾಂಡೇ ಎರಡು ಭಾಗ ಆಗಿ ಹೋಗಿದೆ. ರಾಜ್ಯದಲ್ಲಿ ಉಂಟಾಗಿರುವ ಗೊಂದಲದಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಪಾತ್ರ ಬಹಳ ದೊಡ್ಡದು ಇದೆ. ಕರ್ನಾಟಕ ಕಾಂಗ್ರೆಸ್ ನಾಯಕರು ಪರಿಣಿತರಿದ್ದಾರೆ. ಆದರೆ ಎಲ್ಲವೂ ಇಲ್ಲಿಂದಲೇ ಹೋಗುವಾಗ ಹೈಕಮಾಂಡ್ ಮಾತು ಯಾಕೆ ಇವರು ಕೇಳುತ್ತಾರೆ ಎಂದು ಪ್ರಶ್ನಿಸಿದರು.
ದ್ವೇಷ ಭಾಷಣ ವಿರುದ್ಧದ ವಿಧೆಯಕದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಧ್ವೇಷ ಭಾಷಣ ಕಾಯ್ದೆ ಇದೊಂದು ದಮನಕಾರಿ ಕಾನೂನು. ದ್ವೇಷ ಭಾಷಣ ಅಂದರೆ ಏನು ಎನ್ನುವ ವ್ಯಾಖ್ಯಾನ ದೊಡ್ಡ ಪ್ರಮಾಣದಲ್ಲಿ ಮಾಡಿದ್ದಾರೆ. ಯಾರನ್ನು ಯಾವಾಗ ಬೇಕಾದರೂ ಒಳಗೆ ಹಾಕುವ ರೀತಿ ಮಾಡಿದ್ದಾರೆ. ರಾಜ್ಯ ಸರಕಾರ ಎಲ್ಲಾ ರಂಗದಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಅಭಿವೃದ್ದಿ ಶೂನ್ಯವಾಗಿದೆ. ಸರಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಯಾರೂ ಇದನ್ನು ಪ್ರಶ್ನೆ ಮಾಡಬಾರದು ಅಂತ ಈ ಕಾಯ್ದೆ ಜಾರಿಗೆ ತರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಪ್ರಚೋದನಕಾರಿಯಾಗಿ ಮಾತನಾಡಿದರೆ ಕ್ರಮಕ್ಕೆ ಈಗಾಗಲೇ ಬಿಎನ್ ಎಸ್ ಕಾಯಿದೆಯಲ್ಲಿ ಇದೆ. ಮತ್ತೆ ವಿಶೇಷ ಕಾನೂನು ತರುವ ಅಗತ್ಯ ಏನಿದೆ ? ವಿರೋಧ ಪಕ್ಷಗಳು ಸಣ್ಣ ಪುಟ್ಟ ಮಾತನಾಡಿದರೂ ಒಳಗೆ ಹಾಕಬಹುದು ಅಂತ ಈ ಕಾನೂನು ತರುತ್ತಿದ್ದಾರೆ. ತುರ್ತು ಪರಿಸ್ಥಿತಿಯ ಅವಧಿಯಲ್ಲೂ ಹೀಗೆ ಇರಲಿಲ್ಲ. ಇದು ಅಘೋಷಿತ ಅಲ್ಲ ಘೋಷಿತ ಎಮರ್ಜನ್ಸಿ, ನಾನೂ ರಾಜ್ಯಪಾಲರನ್ನು ಭೇಟಿ ಮಾಡುವೆ. ಅಗತ್ಯ ಬಿದ್ದರೆ ಕಾನೂನು ಹೋರಾಟ ಸಹ ಮಾಡುತ್ತೇವೆ. ಕಾನೂನು ಯಾರ ಕೈಯಲ್ಲಿ ಇದೆ ಎನ್ನುವುದು ಮುಖ್ಯ. ಧ್ವೇಷ ರಾಜಕಾರಣ ಮಾಡುತ್ತಿರುವವರ ಕೈಯಲ್ಲಿ ಸದ್ಯ ಅಧಿಕಾರ ಇದೆ. ಹಾಗಾಗಿ ಹೊಸ ಕಾನೂನು ಆತಂಕಕಾರಿ ಎನ್ನುತ್ತಿದ್ದೇವೆ ಎಂದು ಹೇಳಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications