ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು, ಜೂನ್‌ 15: ಹಾವೇರಿ-ಗದಗ ಲೋಕಸಭೆ ಕ್ಷೇತ್ರಕ್ಕೆ ಆಯ್ಕೆಯಾದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಈ ಕುರಿತು ನೂತನ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಆಯ್ಕೆಯಾದ ಹಿನ್ನೆಲೆ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಶಿಗ್ಗಾವಿ ಕ್ಷೇತ್ರದ ಜನತೆಗೆ ಕೃತಜ್ಞತೆ ಹೇಳುತ್ತೇನೆ. ನಿರಂತರ ವಾಗಿ ನಾಲ್ಕು ಬಾರಿ ಆಯ್ಕೆ ಮಾಡಿ ಅಭಿವೃದ್ಧಿ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

Basavaraj Bommai resigned from Shiggavi Constituency MLA

ಶಿಗ್ಗಾಂವಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಇನ್ನಷ್ಟು ಅಭಿವೃದ್ಧಿಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದೇನೆ. ಸಿಎಂ ಬೆಂಗಳೂರಿಗೆ ಬಂದ ತಕ್ಷಣ ಅವರ ಬಳಿ ಚರ್ಚಿಸಿ ಅಭಿವೃದ್ಧಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಚರ್ಚಿಸುತ್ತೇನೆ‌. ಹಾವೇರಿ ಜಿಲ್ಲೆಯಲ್ಲಿ ಶಿಗ್ಗಾವಿ ಬರುವುದರಿಂದ ಅದರ ಅಭಿವೃದ್ಧಿಗೆ ನನ್ನ ಶ್ರಮ ಮುಂದುವರೆಯಲಿದೆ ಎಂದು ಹೇಳಿದರು.

ಸಂಸತ್ತಿನಲ್ಲಿ ಕರ್ನಾಟಕದ ನೀರಾವರಿ ಯೋಜನೆಗಳಾದ ಕೃಷ್ಣಾ, ಕಾವೇರಿ ಅಂತರಾಜ್ಯ ಜಲ ವಿವಾದಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇನೆ. ಸಂಸತ್ತಿನಲ್ಲಿ ಪ್ರಮಾಣಿಕವಾಗಿ ಕನ್ನಡಿಗರ ಪರವಾಗಿ ಧ್ವನಿ ಎತ್ತುವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ನಾನು ಸಂಸದನಾಗಿ ಆಯ್ಕೆಯಾಗಿ ದೆಹಲಿಗೆ ಹೋದರೂ, ಕರ್ನಾಟಕದ ರಾಜಕಾರಣದಲ್ಲಿ ನಾನು ಸಕ್ರಿಯನಾಗಿರುತ್ತೇನೆ. ನಮ್ಮ ವರಿಷ್ಠರು ಅದೇ ಕಾರಣಕ್ಕೆ ಕೆಲವು ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಪಡೆಯುವ ಬಗ್ಗೆ‌ ರಾಜ್ಯ ಸರ್ಕಾರ ನಿಯಮಾನುಸಾರ ಮನವಿ ಸಲ್ಲಿಸಬೇಕು. ಹಿಂದೆ ನಾವು ಎಐಬಿಪಿಯಲ್ಲಿ ಸುಮಾರು ಆರು ತಿಂಗಳು ದೆಹಲಿಯಲ್ಲಿ ನಮ್ಮ ಅಧಿಕಾರಿಗಳನ್ನು ಇಟ್ಟು ಸುಮಾರು 3800 ಕೊಟಿ ರೂ. ತಂದಿದ್ದೆ. ಕೇಂದ್ರದ ಬಜೆಟ್‌ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಮೀಸಲಿಟ್ಟಿರುವ 5000 ಕೋಟಿ ರೂ ತರಲು ರಾಜ್ಯದ ಸಚಿವರು ಹಾಗೂ ಕೇಂದ್ರ ಸರ್ಕಾರದ ಸಚಿವರ ಜೊತೆ ಮಾತನಾಡಿ ಹಣ ತರಲು ಪ್ರಯತ್ನಿಸುತ್ತೇನೆ.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ನಾವು ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದ್ದೇವು. ಇದುವರೆಗೂ ಕೇಂದ್ರ ಸರ್ಕಾರ ಯಾವುದೇ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಿಲ್ಲ. ಆದರೆ, ನಮ್ಮ ಒತ್ತಾಸೆಯ ಕಾರಣಕ್ಕೆ ಈ ಯೋಜನೆಗೆ ವಿಶೇಷವಾಗಿ 5000 ಕೋಟಿ ರೂ. ನೀಡುವ ಭರವಸೆ ನೀಡಿದ್ದರು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+