ಸ್ಯಾಂಟ್ರೊ ರವಿ ಜೊತೆಗೆ ಸಂಬಂಧ, ಟ್ವೀಟ್‌ನಲ್ಲಿ ಬಿಜೆಪಿ ಸ್ಪಷ್ಟನೆ
ಬೆಂಗಳೂರು, ಜನವರಿ 08; ಮಂಡ್ಯದ ಮಂಜುನಾಥ್ ಅಥವ ಸ್ಯಾಂಟ್ರೊ ರವಿ ಕರ್ನಾಟಕದ ರಾಜಕೀಯದಲ್ಲಿ ಸದ್ಯ ಭಾರೀ ಚರ್ಚೆಯಲ್ಲಿರುವ ಹೆಸರು. ಈತನ ವಿರುದ್ಧ ತನಿಖೆ ನಡೆಸಲು ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ನೀಡಿದ್ದಾರೆ.
ಮುಖ್ಯಮಂತ್ರಿಗಳಿಗೂ ಸ್ಯಾಂಟ್ರೊ ರವಿಗೂ ಸಂಬಂಧವಿದೆ ಎಂದು ಪ್ರತಿಪಕ್ಷಗಳು ಆರೋಪ ಮಾಡುತ್ತಿವೆ. ಈ ಕುರಿತು ಕರ್ನಾಟಕ ಕಾಂಗ್ರೆಸ್ ಸರಣಿ ಟ್ವೀಟ್‌ಗಳ ಮೂಲಕ ಟೀಕೆ ಮಾಡುತ್ತಿದೆ.
ಕರ್ನಾಟಕ ಬಿಜೆಪಿ ಈ ಕುರಿತು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದೆ, 'ಮುಖ್ಯಮಂತ್ರಿಗಳ ಮನೆಗೆ ಅನೇಕರು ಬಂದು ಹೋಗುತ್ತಾರೆ. ಅಲ್ಲಿ ಬಂದವರು ಸಿಎಂ ಹಾಗೂ ಅವರ ಕುಟುಂಬದ ಜೊತೆ ಫೋಟೋ ತೆಗೆಸಿಕೊಂಡು ಹೋಗುವುದು ಸಾಮಾನ್ಯ. ಸ್ಯಾಂಟ್ರೊ ರವಿ ಎಂಬಾತ ಕೂಡ ಅದೇ ರೀತಿ ಫೋಟೋ ತೆಗೆಸಿಕೊಂಡಿರಬಹುದು' ಎಂದು ಹೇಳಿದೆ.

'ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿಯವರಿಗಾಗಲಿ, ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗಾಗಲಿ ಸ್ಯಾಂಟ್ರೊ ರವಿ ಎಂಬಾತನ ಜೊತೆ ಯಾವುದೇ ಸಂಬಂಧವಿರುವುದಿಲ್ಲ. ವಿರೋಧ ಪಕ್ಷಗಳ ಸುಳ್ಳಿನ ಕಾರ್ಖಾನೆಗಳಲ್ಲಿ ತಯಾರಾದ ಪ್ರಾಡಕ್ಟ್‌ಗಳಿವು' ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
ಯಾರು ಸ್ಯಾಂಟ್ರೊ ರವಿ?; ಮಂಡ್ಯದ ಮಂಜುನಾಥ್ ವೇಶ್ಯಾವಾಟಿಕೆ ದಂಧೆ ಮೂಲಕ ಸ್ಯಾಂಟ್ರೊ ರವಿಯಾಗಿ ಬೆಳೆದಿದ್ದಾನೆ. ಹಲವು ರಾಜಕಾರಣಿಗಳ ಮೂಲಕ ವರ್ಗಾವಣೆ ದಂಧೆ ನಡೆಸುತ್ತಿದ್ದಾನೆ ಎಂಬುದು ಆರೋಪ. ಗೃಹ ಸಚಿವರೂ ಸೇರಿದಂತೆ ಅನೇಕ ರಾಜಕಾರಣಿಗಳ ಜೊತೆ ಸ್ಯಾಂಟ್ರೊ ರವಿ ಇರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಯಾಂಟ್ರೊ ರವಿ ವಿರುದ್ಧ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ. ತಲೆಮರೆಸಿಕೊಂಡಿರುವ ಸ್ಯಾಂಟ್ರೊ ರವಿಗಾಗಿ ಪೊಲೀಸರು ಹುಡುಹಾಟ ನಡೆಸಿದ್ದಾರೆ.

ಪ್ರತಿಪಕ್ಷಗಳ ಟ್ವೀಟ್; ಕರ್ನಾಟಕ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿ ಸ್ಯಾಂಟ್ರೊ ರವಿ ವಿಚಾರವನ್ನು ಪ್ರಸ್ತಾಪಿಸುತ್ತಿದೆ. #SayCM ಎಂಬ ಹ್ಯಾಷ್‌ಟ್ಯಾಗ್ ಬಳಕೆ ಮಾಡುತ್ತಿದೆ.
ಕಾಂಗ್ರೆಸ್ ತನ್ನ ಟ್ವೀಟ್‌ನಲ್ಲಿ, 'ಸಚಿವ ಸೋಮಶೇಖರ್ ವರ್ಗಾವಣೆಗೆ ಸಂಬಂಧಿಸಿದಂತೆ ಆತನೊಂದಿಗೆ ಮಾತಾಡಿದ್ದಾರೆ. ಎಲ್ಲಾ ಸಚಿವರೊಂದಿಗೆ ಆತ ನಿಕಟ ಸಂಪರ್ಕದಲ್ಲಿದ್ದಾನೆ' ಎಂದು ಹೇಳಿದೆ.
'@STSomashekarMLA ಅವರೇ,ನಿಮ್ಮ ರವಿಯ ಈ ಬಂಧ ಬಾಂಬೆಯ ಅನುಬಂಧವೇ?!. ಸ್ಯಾಂಟ್ರೋ ರವಿ @BJP4Karnataka ಸರ್ಕಾರದ ಚೀಫ್ ಬ್ರೋಕರ್ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ
@BSBommai ಅವರೇ?' ಎಂದು ಕಾಂಗ್ರೆಸ್ ಕೇಳಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಶಿವಮೊಗ್ಗದಲ್ಲಿ ಮಾತನಾಡಿದ್ದು, "ಸ್ಯಾಂಟ್ರೊ ರವಿ ವಿರುದ್ಧ ಮೈಸೂರು ಠಾಣೆಯಲ್ಲಿ ಒಂದಷ್ಟು ಪ್ರಕರಣ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಆತನ ಕೆಲಸ, ಚಟುವಟಿಕೆ ಬಗ್ಗೆ ತನಿಖೆಗೆ ಅಲ್ಲಿನ ಪೊಲೀಸ್ ಕಮೀಷನರ್‌ಗೆ ಸೂಚನೆ ನೀಡಿರುವೆ" ಎಂದು ಹೇಳಿದ್ದರು.
ಸರ್ಕಾರದ "ಚೀಫ್ ಬ್ರೋಕರ್" ಸ್ಯಾಂಟ್ರೋ ರವಿಯೊಂದಿಗೆ ಉನ್ನತ ಅಧಿಕಾರಿಗಳು, ಸಚಿವರು, ಮುಖ್ಯಮಂತ್ರಿ ಎಲ್ಲರೂ ನೇರಾನೇರ ಸಂಪರ್ಕದಲ್ಲಿದ್ದಾರೆ.
— Karnataka Congress (@INCKarnataka) January 7, 2023
ಇಡೀ ಸರ್ಕಾರವೇ ಈತನ ಕೈಯ್ಯೊಳಗಿದೆ.
ಆತನೊಂದಿಗೆ ಬಿಜೆಪಿ ನಾಯಕರ ಚಾಟಿಂಗು, ಮೀಟಿಂಗು, ಡೇಟಿಂಗು ಎಲ್ಲವೂ ಬಯಲಾಗಿದೆ!
ಈತನನ್ನು ಉನ್ನತ ತನಿಖೆಗೊಳಪಡಿಸಿದರೆ ಇಡೀ ಸರ್ಕಾರವೇ ಜೈಲು ಸೇರುವುದು ನಿಶ್ಚಿತ. pic.twitter.com/hWF5rwxuPB
ಆರಗ ಜ್ಞಾನೇಂದ್ರ ಮಾತನಾಡಿ, "ಸ್ಯಾಂಟ್ರೊ ರವಿ ಬಗ್ಗೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಬಳಿ ತುಂಬಾ ಮಾಹಿತಿ ಇದೆ. ರವಿಯದ್ದೂ ಕುಮಾರಸ್ವಾಮಿ ಜೊತೆ ಅದ್ಯಾವ ರೀತಿ ಸಂಬಂಧವಿದೆ ಎನ್ನುವುದು ಗೊತ್ತಾಗಬೇಕಿದೆ. ಅವರಿಗೆ ಮಾತ್ರ ಫೋಟೋ, ಆಡಿಯೋ ಹೇಗೆ ಸಿಗುತ್ತದೆ. ಇದು ಅಲೋಚನೆ ಮಾಡಬೇಕಾದ ಸಂಗತಿ" ಎಂದು ತಿಳಿಸಿದ್ದರು.
ಜೈಲು ಸೇರುವುದು ನಿಶ್ಚಿತ; ಕಾಂಗ್ರೆಸ್ ತನ್ನ ಟ್ವೀಟ್‌ನಲ್ಲಿ ಸರ್ಕಾರದ "ಚೀಫ್ ಬ್ರೋಕರ್" ಸ್ಯಾಂಟ್ರೋ ರವಿಯೊಂದಿಗೆ ಉನ್ನತ ಅಧಿಕಾರಿಗಳು, ಸಚಿವರು, ಮುಖ್ಯಮಂತ್ರಿ ಎಲ್ಲರೂ ನೇರಾನೇರ ಸಂಪರ್ಕದಲ್ಲಿದ್ದಾರೆ. ಇಡೀ ಸರ್ಕಾರವೇ ಈತನ ಕೈಯ್ಯೊಳಗಿದೆ.
ಆತನೊಂದಿಗೆ ಬಿಜೆಪಿ ನಾಯಕರ ಚಾಟಿಂಗು, ಮೀಟಿಂಗು, ಡೇಟಿಂಗು ಎಲ್ಲವೂ ಬಯಲಾಗಿದೆ!. ಈತನನ್ನು ಉನ್ನತ ತನಿಖೆಗೊಳಪಡಿಸಿದರೆ ಇಡೀ ಸರ್ಕಾರವೇ ಜೈಲು ಸೇರುವುದು ನಿಶ್ಚಿತ ಎಂದು ಟ್ವೀಟ್ ಮಾಡಿದೆ.












Click it and Unblock the Notifications