ಜಾತಿ ಗಣತಿ ಹೆಸರಿನಲ್ಲಿ ಸಮಾಜ ಬೇರ್ಪಡಿಸುವ ಸಂಚು: ಮಾಜಿ ಸಿಎಂ
ದಾವಣಗೆರೆ, ಡಿಸೆಂಬರ್ 25: ಇಂದಿನ ದಿನಮಾನಗಳಲ್ಲಿ ದೇಶದಲ್ಲಿ ಜಾತಿ ಗಣತಿ (Caste Census) ಎಂಬುದು ರಾಜಕೀಯ ಅಸ್ತ್ರವಾಗುತ್ತಿರುವುದು ದೊಡ್ಡ ದುರಂತದ ಸಂಗತಿ. ಇತ್ತೀಚೆಗೆ ಜಾತಿ ಗಣತಿ ಹೆಸರಿನಲ್ಲಿ ಸಮಾಜ ಒಡೆಯುವ ಹುನ್ನಾರ ನಡೆಯುತ್ತಿದೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಜಿಲ್ಲೆಯ ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನದಲ್ಲಿ ಹಮ್ಮಿಕೊಳ್ಳಲಾಗಿದ್ದ ನೌಕರರ ಮತ್ತು ಸಾಹಿತ್ಯ ಅಧಿವೇಶನದಲ್ಲಿ ಭಾನುವಾರ ಪಾಲ್ಗೊಂಡು ಅವರು ಮಾತನಾಡಿದರು.

ಜಾತಿ ಗಣತಿಯು ಪ್ರತಿಯೊಂದು ಸಮುದಾಯಗಳಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಕಾರ್ಯಕ್ರಮಗಳನ್ನು ರೂಪಿಸಲು ಅಗತ್ಯವಾಗಿ ಬೇಕು. ಆದರೆ ಈಗ ಆಗುತ್ತಿರುವುದು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜಾತಿ ಗಣತಿಯ ಸದ್ದು ಮಾಡುತ್ತಿದೆ. ಇದಕ್ಕೆ ಅವಕಾಶ ನೀಡಬಾರದು. ರಾಜಕಾರಣ ಮಾಡಲು ಹಲವಾರು ಮಾರ್ಗಗಳು ಇವೆ ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಜಾತಿ ಗಣತಿ ಹೆಸರಿನಲ್ಲಿ ಸಮಾಜ ಬೇರ್ಪಡಿಸುವ ಹುನ್ನಾರ ನಡೆಯುತ್ತದೆ. ಜಾತಿ ಗಣತಿ ಬಗ್ಗೆ ಸ್ಪಷ್ಟ ನೀತಿ ಇರಬೇಕು. ಈಗ ಕರ್ನಾಟಕದಲ್ಲಿ ಜಾತಿ ಗಣತಿ ನಡೆದಿದೆ, ಅದು ಜಾತಿ ಗಣತಿಯಲ್ಲ. ಯಾವ್ಯಾವ ಸನುದಾಯದಲ್ಲಿ ಶಿಕ್ಷಣ, ಆರ್ಥಿಕ, ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ವರದಿ ತಯಾರಿ ಮಾಡಲಾಗಿದೆ. ಆದರೆ ಅದನ್ನೇ ಜಾತಿ ಗಣತಿ ಎಂದು ಆದೇಶ ಹೊರಡಿಸಲು ಸರ್ಕಾರ ಮುಂದಾಗಿದೆ. ಜಾತಿ ಗಣತಿ ಮಾಡಲು ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ ಎಂದು ಸುಪ್ರೀಂ ಕೋಟ್೯ ಹಲವಾರು ಬಾರಿ ಪ್ರಸ್ತಾಪ ಮಾಡಿದೆ ಎಂದರು.
ಜಾತಿ ಗಣತಿ ವಿಚಾರದ ಚರ್ಚೆ, ಒತ್ತಾಯ
ಕರ್ನಾಟಕದಲ್ಲಿ ಜಾತಿ ಗಣತಿಯನ್ನು ಸರ್ಕಾರ ಸ್ವೀಕರಿಸಿಲ್ಲ. ಪ್ರಭಾವಿ ಸಮುದಾಯಗಳ ಒತ್ತಡ ಇರುವ ಕಾರಣ ಸಿಎಂ ಸಿದ್ದರಾಮಯ್ಯ ಅವರು ವರದಿ ಸ್ವೀಕರಿಸುತ್ತಿಲ್ಲ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ನಾಯಕರು ಆಪಾದಿಸಿದ್ದರು.

ಜಾತಿ ಗಣತಿ ವರದಿ ಸ್ವೀಕರಿಸಿಲ್ಲ. ಅದರಲ್ಲಿ ಏನಿದೆ ಅಂತಲೂ ನೋಡಬೇಕು. ಅದಕ್ಕು ಮೊದಲೇ ಹೀಗೆ ವಿರೋಧ ಮಾಡುವುದು ಸರಿಯಲ್ಲ. ಸುಮಾರು 150 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಲಾದ ಈ ಜಾತಿ ಗಣತಿ ಬಗ್ಗೆ ಸರ್ಕಾರ ನಿರ್ಧರಿಸಲಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ತಿಳಿಸಿದ್ದರು.
ಒಕ್ಕಲಿಗರ ಪತ್ರಕ್ಕೆ ಡಿಸಿಎಂ ಸಹಿ
ಜಾತಿ ಗಣತಿ ವರದಿಯನ್ನು ಜಾರಿಗೊಳಿಸಿದಂತೆ ಒಕ್ಕಲಿಗ ಸಂಘದ ಮುಖ್ಯಸ್ಥರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದಕ್ಕೆ ಒಕ್ಕಲಿಗ ನಾಯಕರು ಸಹಿ ಹಾಕಿದ್ದರು. ಸರ್ಕಾರದ ಪ್ರತಿನಿಧಿಯಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹಿತ ಈ ಮನವಿ ಪತ್ರಕ್ಕೆ ಸಹಿ ಹಾಕಿದ್ದರು. ಇದು ತೀವ್ರ ಚರ್ಚೆ ಹುಟ್ಟು ಹಾಕಿತ್ತು. ನಂತರ ಈ ಕುರಿತು ಡಿಸಿಎಂ ಅವರು ನನ್ನ ಬಳಿ ಚರ್ಚೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದರು.
ಇದೀಗ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದೆ. ಈ ವೇಳೆ ಚರ್ಚೆಗೆ ಬಂದಿರುವ ಜಾತಿ ಗಣತಿ ವಿಚಾರ, ಇದೇ ಚುನಾವಣೆ ಅಸ್ತ್ರವಾಗಿ ಬಳಕೆ ಆಗುವ ಸಾಧ್ಯತೆ ಇದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications