ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಭಾಪತಿ ಬಸವರಾಜ ಹೊರಟ್ಟಿ ಖಡಕ್ ಸೂಚನೆ!

|
Google Oneindia Kannada News

ಬೆಂಗಳೂರು, ಸೆ. 09: ಸೆಪ್ಟಂಬರ್ 13ರಿಂದ ಹತ್ತು ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ವಿಧಾನ ಪರಿಷತ್ ಕಲಾಪದಲ್ಲಿ ಸಚಿವರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಎಲ್ಲ ಮಂತ್ರಿಗಳಿಗೆ ಸೂಚನೆ ನೀಡುವಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೂಚಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಧಾನ ಮಂಡಲದ ಅಧಿವೇಶನ ಬಹುಮುಖ್ಯವಾಗಿದ್ದು, ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಹಾಗೂ ಸಾರ್ವಜನಿಕರ ಸಂಕಷ್ಟಗಳ ಕುರಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಅಧಿವೇಶನ ಸೂಕ್ತ ವೇದಿಕೆಯಾಗಿದೆ. ಹೀಗಾಗಿ ಶಾಸನ ಸಭೆಯ ಕಲಾಪಗಳು ನಡೆಯುವಾಗ ಸಚಿವರು ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚನೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ಮಂತ್ರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಡಿ!

ಮಂತ್ರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಡಿ!

ಈ ಹಿಂದೆ ನಡೆದಿರುವ ಅಧಿವೇಶನಗಳ ಸಂದರ್ಭದಲ್ಲಿ ಹಲವು ಸಚಿವರು, ತಮ್ಮ ಕ್ಷೇತ್ರಕ್ಕೆ ಸಂಬಂಧಿತ ಕಾರ್ಯಗಳ ಕಾರಣದ ಮೇಲೆ ಸದನಕ್ಕೆ ಗೈರು ಹಾಜರಾಗಲು ಅನುಮತಿ ಕೋರುತ್ತಿದ್ದರು. ಅದು ಹಿಂದೆ ಸಾಮಾನ್ಯವಾಗಿತ್ತು. ಆದರೆ ಸದಸ್ಯರು ಸಾರ್ವಜನಿಕ ಮಹತ್ವದ ವಿಚಾರಗಳ ಬಗ್ಗೆ ಸದನದಲ್ಲಿ ಕೇಳುವ ಪ್ರಶ್ನೆಗಳಿಗೆ ಸಂಬಂಧಿತ ಸಚಿವರು ಉತ್ತರ ನೀಡಬೇಕಾಗಿರುತ್ತದೆ.


ಇದು ಸಚಿವರ ಕರ್ತವ್ಯ ಹಾಗೂ ಜವಾಬ್ದಾರಿಯೂ ಆಗಿರುತ್ತದೆ. ಆದರೆ ಚರ್ಚೆಯ ವೇಳೆ ಸಚಿವರು ಸದನದಲ್ಲಿ ಇಲ್ಲದೇ ಇರುವುದರಿಂದ ಸಂಬಂಧಪಟ್ಟ ಪ್ರಶ್ನೆಗೆ ಸಮರ್ಪಕ ಉತ್ತರ ದೊರೆಯದೇ ಸಮಸ್ಯೆಗೆ ಸೂಕ್ತ ಪರಿಹಾರ ಸಿಗುವುದಿಲ್ಲ. ಸಚಿವರ ಗೈರಿನಿಂದಾಗಿ ಕಲಾಪ ನಡೆಸುವ ಉದ್ದೇಶ ಸಾಫಲ್ಯಗೊಳ್ಳುವುದಿಲ್ಲ ಎಂದು ಸಭಾಪತಿ ಹೊರಟ್ಟಿ ಅಭಿಪ್ರಾಯ ಪಟ್ಟಿದ್ದಾರೆ.

ಜನ ಸಾಮಾನ್ಯರ ಹಕ್ಕು ವಂಚಿಸಬೇಡಿ!

ಜನ ಸಾಮಾನ್ಯರ ಹಕ್ಕು ವಂಚಿಸಬೇಡಿ!

ಹೀಗೆ ಸಚಿವರ ಅನುಪಸ್ಥಿತಿಯಿಂದ ಆಡಳಿತಾರೂಢ ಸರಕಾರದಿಂದ ಉತ್ತರ ಪಡೆಯುವ ಮಾನ್ಯ ಸದಸ್ಯರ ಹಕ್ಕು ಮತ್ತು ಅವಕಾಶವನ್ನು ವಂಚಿಸಿದಂತಾಗುತ್ತದೆ, ಕಾರಣ ಸಚಿವರು ಸದನದಲ್ಲಿ ಹಾಜರಿರುವುದನ್ನು ಖಾತ್ರಿಪಡಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಸಭಾಪತಿ ಬಸವರಾಜ ಹೊರಟ್ಟಿ ಸೂಚಿಸಿದ್ದಾರೆ.

ಜವಾಬ್ದಾರಿ ನಿರ್ವಹಿಸಿ; ಮಂತ್ರಿಗಳಿಗೆ ಸೂಚನೆ!

ಜವಾಬ್ದಾರಿ ನಿರ್ವಹಿಸಿ; ಮಂತ್ರಿಗಳಿಗೆ ಸೂಚನೆ!

ಮಂತ್ರಿಮಂಡಲದ ಎಲ್ಲಾ ಸದಸ್ಯರು ಸಹ ಸ್ವಯಂ ಪ್ರೇರಿತರಾಗಿ ಕಡ್ಡಾಯವಾಗಿ ಸದನದ ಕಾರ್ಯ ಕಲಾಪಗಳಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಜವಾಬ್ದಾರಿ ನಿರ್ವಹಿಸುವಂತೆ ಸೂಚಿಸಿರುವ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಅಧಿವೇಶನದ ವೇಳೆ ತಮ್ಮ ಕ್ಷೇತ್ರಗಳ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಸದನ ಕಲಾಪದಿಂದ ವಿನಾಯಿತಿ ಕೋರಿ ಮನವಿ ಸಲ್ಲಿಸದಂತೆ ಎಲ್ಲಾ ಸಚಿವರಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಸೂಚಿಸಿದ್ದಾರೆ.

ಸದನದಲ್ಲಿ ಉನ್ನತಾಧಿಕಾರಿಗಳು ಇರಲೇಬೇಕು!

ಸದನದಲ್ಲಿ ಉನ್ನತಾಧಿಕಾರಿಗಳು ಇರಲೇಬೇಕು!

ಅಧಿವೇಶನದ ಯಶಸ್ವಿಯಲ್ಲಿ ಕೇವಲ ಸಚಿವರ ಹಾಗೂ ಶಾಸಕರುಗಳ ಪಾತ್ರವಿರದೇ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಪಾಲ್ಗೊಳ್ಳುವಿಕೆಯೂ ಅಷ್ಟೇ ಪ್ರಮುಖವಾಗಿದೆ. ಹೀಗಾಗಿ ರಚನೆ ವೇಳೆ ಸದನದಲ್ಲಿ ಅಧಿಕಾರಿಗಳ ಉಪಸ್ಥಿತಿ ಕುರಿತು ಮುಖ್ಯಕಾರ್ಯದರ್ಶಿಗಳು ಗಮನಹರಿಸಬೇಕೆಂದು ಸಭಾಪತಿ ಬಸವರಾಜ ಹೊರಟ್ಟಿ ಸೂಚಿಸಿದ್ದಾರೆ.

ವಿಧಾನ ಪರಿಷತ್ತಿನ ಅಧಿವೇಶನದ ಕಲಾಪದಲ್ಲಿ ಆಯಾ ದಿನದಲ್ಲಿ ಹಾಜರಾಗುವ ಸಚಿವರ ಹಾಗೂ ಅಧಿಕಾರಿಗಳ ಹೆಸರನ್ನು ಆಯಾ ದಿನದ ಸದನ ಆರಂಭಗೊಳ್ಳುವಾಗಲೇ ಪ್ರಕಟಿಸಲಾಗುವುದು ಹಾಗೂ ಗೈರು ಹಾಜರಾದವರ ಮಾಹಿತಿಯನ್ನು ಸಂಬಂಧಿಸಿದವರಿಗೆ ಕಳುಹಿಸಿ ಕ್ರಮಕ್ಕೆ ಸೂಚಿಸಲಾಗುವುದೆಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ಲೋಕಸಭೆ ಮಾದರಿಯಲ್ಲಿ ಕಲಾಪದ ನೇರ ಪ್ರಸಾರ:

ಕರ್ನಾಟಕ ವಿಧಾನಸಭೆಯ ಅಧಿವೇಶನವು ಸೆಪ್ಟೆಂಬರ್ 13 ರಿಂದ ಪ್ರಾರಂಭವಾಗಲಿದ್ದು, ಅಧಿವೇಶನದ ಕಾರ್ಯಕಲಾಪಗಳನ್ನು ಲೋಕಸಭೆಯ ಮಾದರಿಯಲ್ಲಿ ಚಿತ್ರೀಕರಿಸಿ ನೇರ ಪ್ರಸಾರ ಮಾಡಲು ಹಾಗೂ ಚಿತ್ರೀಕರಿಸಿದ ದೃಶ್ಯಗಳನ್ನು ಇತರೆ ಖಾಸಗಿ ಚಾನೆಲ್‌ಗಳಿಗೆ ಸ್ಯಾಟಲೈಟ್ ಮೂಲಕ ಸಂಪರ್ಕವನ್ನು ಒದಗಿಸುವ ಕಾರ್ಯವನ್ನು ಬೆಂಗಳೂರು ದೂರದರ್ಶನ ಕೇಂದ್ರಕ್ಕೆ ಹಾಗೂ ಅದೇ ರೀತಿ ಸದನದ ಕಾರ್ಯಕಲಾಪಗಳ ಛಾಯಾಚಿತ್ರಗಳನ್ನು ತೆಗೆದು ಮುದ್ರಣ ಮಾಧ್ಯಮದವರಿಗೆ ಒದಗಿಸುವ ಕಾರ್ಯವನ್ನು ವಾರ್ತಾ ಇಲಾಖೆಗೆ ವಹಿಸಲಾಗಿದೆ.

Recommended Video

Yash ಪೂಜೆ ಮಾಡುವಾಗ ಮಗ ಹಾಗು ಮಗಳು ಏನು ಮಾಡ್ತಾರೆ ನೋಡಿ | Oneindia Kannada

English summary
Karnataka Assembly Sessions will be held for ten days from 13 September. Legislative Council Chairperson Basavaraj Horatti insist CM Basavaraj Bommai to instruct all ministers to attend the Session mandatory. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X