SSLC, PUC passing marks: ಎಸ್‌ಎಸ್‌ಎಲ್‌ಸಿ, ಪಿಯುಸಿ ಉತ್ತೀರ್ಣ ಅಂಕಗಳ ಕಡಿತ ನಿರ್ಧಾರದ ಅಪ್ಡೇಟ್ ಮಾಹಿತಿ
ಬೆಂಗಳೂರು, ಅಕ್ಟೋಬರ್ 30: ರಾಜ್ಯದಲ್ಲಿ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಆಗಾಗ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುತ್ತದೆ. ಇತ್ತೀಚೆಗಷ್ಟೇ ಎಸ್‌ಎಸ್‌ಎಲ್‌ಸಿಯಲ್ಲಿ ವಿದ್ಯಾರ್ಥಿಗಳಿಗೆ ಉತ್ತೀರ್ಣ ಅಂಕಗಳನ್ನು 35ರಿಂದ 33ಕ್ಕೆ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ 35ರಿಂದ 30ಕ್ಕೆ ಇಳಿಸಿ ಆದೇಶ ಹೊರಡಿಸಲಾಗಿತ್ತು. ಇನ್ನೂ ಇದೀಗ ಈ ನಿರ್ಧಾಕ್ಕೆ ಬಸವರಾಜ ಹೊರಟ್ಟಿ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ ಅವರು ಏನು ಹೇಳಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಬಗ್ಗೆ ಮಾಹಿತಿ ನೀಡಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಕನಿಷ್ಠ ಉತ್ತೀರ್ಣ ಅಂಕಗಳನ್ನು 35ರಿಂದ 33 ಮತ್ತು 30ಕ್ಕೆ ಇಳಿಕೆ ಮಾಡಿದ್ದೇವೆ. ನಾವು ಉತ್ತೀರ್ಣತೆಯ ಶೇಕಡಾವಾರು ಪ್ರಮಾಣವನ್ನು ಹೆಚ್ಚಳ ಮಾಡಲು, ಸಿಬಿಎಸ್‌ಇ ಮತ್ತು ಇತರ ಮಂಡಳಿಗಳಿಗೆ ಹೊಂದಾಣಿಕೆಯಾಗುವ ಏಕರೂಪ ವ್ಯವಸ್ಥೆಯನ್ನು ಪರಿಚಯಿಸಲು ಬಯಸುತ್ತೇವೆ ಎಂದು ಹೇಳಿದ್ದರು.

ಇನ್ನೂ ಇದೀಗ ಈ ಬಗ್ಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾತಾಡಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳ ಕನಿಷ್ಠ ಉತ್ತೀರ್ಣ ಅಂಕಗಳನ್ನು ಇಳಿಕೆ ಮಾಡುವ ಕ್ರಮ ಸರಿಯಲ್ಲ. ಈ ಹಿಂದೆ ಇದ್ದ ಕನಿಷ್ಠ ಅಂಕ 35 ಅಂಕಗಳನ್ನೇ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ಈ ಹಿಂದೆ ಸಚಿವ ಮಧು ಬಂಗಾರಪ್ಪ ಅವರು 33 ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಉತ್ತೀರ್ಣರೆಂದು ಪರಿಗಣನೆ ಮಾಡಲಾಗುತ್ತದೆ ಎಂದು ಘೋಷಿಸಿದ್ದರು. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಬಸವರಾಜ ಹೊರಟ್ಟಿ ಅವರು, ಇದು ಸರಿಯಾದ ಕ್ರಮ ಅಲ್ಲ. ಇದು ಬೋಧನೆಯ ಗುಣಮಟ್ಟ ಮತ್ತು ಕಲಿಕೆಯ ಗುಣಮಟ್ಟವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.
ಮಧು ಬಂಗಾರಪ್ಪ ಅವರ ನಿರ್ಧಾರವನ್ನು ಸ್ಪರ್ಧಾದ್ಮಕ ಜಗತ್ತಿನಲ್ಲಿ ಯಾವುದೇ ವಿದ್ಯಾರ್ಥಿ ಪರೀಕ್ಷೆಗಳನ್ನು ಎದುರಿಸುವುದು ಮುಖ್ಯ. ಅಂಕಗಳನ್ನು ಗಳಿಸುವುದು ಪರೀಕ್ಷೆಗಳ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ. ಆದರೂ, ಇದು ವಿದ್ಯಾರ್ಥಿಯು ತನ್ನ ಗಮನ, ಧೈರ್ಯ, ಸ್ಮರಣಶಕ್ತಿ, ಕಲಿಕಾ ಸಾಮರ್ಥ್ಯ ಮತ್ತು ಇತರ ಸಮಗ್ರ ಬೆಳವಣಿಗೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ವಿದ್ಯಾರ್ಥಿಯ ಪ್ರತಿಭೆಯನ್ನು ಹೊರತರಲು ಸಹಾಯ ಮಾಡುತ್ತದೆ. ಇದು ಅವರ ಭವಿಷ್ಯಕ್ಕೆ ಸಹಾಯ ಮಾಡುತ್ತದೆ. ಈ ಉದ್ದೇಶದಿಂದ 35 ಅಂಕಗಳನ್ನು ಬಹಳ ಹಿಂದಿನಿಂದಲೂ ನಿಗದಿ ಮಾಡಲಾಗಿದೆ. ಇದು ವೈಜ್ಞಾನಿಕ ಮಾನದಂಡವಾಗಿದೆ. ಅದನ್ನು 33 ಅಂಕಗಳಿಗೆ ಇಳಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಮಧು ಬಂಗಾರಪ್ಪ ಹೇಳಿದ್ದೇನು?: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯು ಆಂತರಿಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆ ಎರಡರಲ್ಲೂ ಒಟ್ಟಾರೆಯಾಗಿ ಶೇಕಡ 33ರಷ್ಟು ಆಂಕ ಪಡೆದೆಡ ಮತ್ತು ಒಟ್ಟು 625ರಲ್ಲಿ ಕನಿಷ್ಠ 206 ಅಂಕಗಳನ್ನು ಗಳಿಸಿದರೆ ಮತ್ತು ಆಯಾ ವಿಷಯಗಳಲ್ಲಿ ಕನಿಷ್ಠ 30 ಅಂಕಗಳನ್ನು ಪಡೆದರೆ, ಅಭ್ಯರ್ಥಿಯನ್ನು ಉತ್ತೀರ್ಣ ಎಂದು ಘೋಷಣೆ ಮಾಡಲಾಗುತ್ತದೆ ಎಂದ ಮಧು ಬಂಗಾರಪ್ಪ ಅವರು ಹೇಳಿದ್ದರು.
ಅದೇ ರೀತಿಯಲ್ಲೇ ಪಿಯುಸಿ ವಿದ್ಯಾರ್ಥಿಯು ಲಿಖಿತ ಮತ್ತು ಪ್ರಾಯೋಗಿಕ ಅಥವಾ ಆಂತರಿಕ ಅಂಕಗಳ ಜೊತೆ ಪ್ರತಿ ವಿಷಯದಲ್ಲಿ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 30 ಅಂಕಗಳನ್ನು ಗಳಿಸಬೇಕು ಮತ್ತು ಕೋರ್ಸ್‌ನಲ್ಲಿ ಉತ್ತೀರ್ಣರಾಗಲು ಒಟ್ಟಾರೆ ಶೇಕಡಾ 33 ಅಂದರೆ 600ರಲ್ಲಿ 198 ಅಂಕಗಳನ್ನು ಪಡೆಯಬೇಕೆಂದು ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದರು.












Click it and Unblock the Notifications