ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯತ್ನಾಳ್ ಮೇಲೆ ಯಾಕೆ ಶಿಸ್ತು ಕ್ರಮವಿಲ್ಲ? ರಹಸ್ಯ ಬಯಲು ಮಾಡಿದ ಜೆಡಿಎಸ್ ನಾಯಕ!

|
Google Oneindia Kannada News

ಬೆಂಗಳೂರು, ಅ. 24: ಉಪ ಚುನಾವಣೆ ಎರಡೂ ರಾಷ್ಟ್ರೀಯ ಪಕ್ಷಗಳ ನಾಯಕರಿಗೆ ಸಂಕಷ್ಟ ತಂದಿಟ್ಟಿದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆದಿದ್ದರೆ, ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಸಿಎಂ ಯಾರು ಎಂಬ ಚರ್ಚೆ ಈಗಲೇ ಶುರುವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಬೆಂಬಲಿಗರು ನಮ್ಮ ನಾಯಕ ಮುಂದಿನ ಸಿಎಂ, ನಮ್ಮ ನಾಯಕ ಮುಂದಿನ ಸಿಎಂ ಎಂದು ಹೇಳಿಕೆ ಕೊಡುತ್ತಿದ್ದಾರೆ.

ಮತ್ತೊಂದೆಡೆ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಮಾತು ಜೋರಾಗಿಯೇ ಕೇಳಿ ಬರುತ್ತಿದೆ. ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಇದೀಗ ಉತ್ತರ ಕರ್ನಾಟಕ ಭಾಗದ ಪ್ರಭಾವಿ ಜೆಡಿಎಸ್ ನಾಯಕರೊಬ್ಬರು ಸ್ಪೋಟಕ ಮಾಹಿತಿ ಹಂಚಿಕೊಂಡಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಯಡಿಯೂರಪ್ಪ ಬದಲಾವಣೆ ಹೇಳಿಕೆ ಹಿಂದಿನ ರಹಸ್ಯವನ್ನು ಬಹಿರಂಗಗೊಳಿಸಿದ್ದಾರೆ. ಆ ರಹಸ್ಯವಾದರೂ ಏನು?

ಯತ್ನಾಳ್ ಮೇಲೆ ಯಾಕೆ ಶಿಸ್ತು ಕ್ರಮವಿಲ್ಲ?

ಯತ್ನಾಳ್ ಮೇಲೆ ಯಾಕೆ ಶಿಸ್ತು ಕ್ರಮವಿಲ್ಲ?

ಸಿಎಂ ಬದಲಾವಣೆ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಕರಿತಂತೆ ಕೋಲಾರದಲ್ಲಿ ಜೆಡಿಎಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಮಾತನಾಡಿದ್ದಾರೆ. ಯಡಿಯೂರಪ್ಪ ಬದಲಾವನೆ ಕುರಿತು ಯತ್ನಾಳ್ ಅವರ ಮಾತಿನ ಹಿಂದಿನ ರಹಸ್ಯವನ್ನು ಬಹೊರಂಗೊಳಿಸಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಲಾಟೀಲ್ ಯತ್ನಾಳ್ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಬಿಜೆಪಿಯಲ್ಲಿ ಯಾರಿಗೂ ಧಮ್ ಇಲ್ಲ ಎಂದಿದ್ದಾರೆ. ಅದಕ್ಕೆ ಕಾರಣವನ್ನೂ ಹೊರಟ್ಟಿ ಅವರು ಕೊಟ್ಟಿದ್ದಾರೆ.

ಕಾಲು ಹಿಡಿದು, ತಲೆಹಿಡಿಯುವ ಕೆಲಸ ಮಾಡಿಲ್ಲ: ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ಮತ್ತೆ ಕಿಡಿಕಾಲು ಹಿಡಿದು, ತಲೆಹಿಡಿಯುವ ಕೆಲಸ ಮಾಡಿಲ್ಲ: ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ಮತ್ತೆ ಕಿಡಿ

ಯತ್ನಾಳ್‌ಗೆ ಬೆಂಬಲವಿದೆ!

ಯತ್ನಾಳ್‌ಗೆ ಬೆಂಬಲವಿದೆ!

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈ ದಿ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕಾಲದಲ್ಲಿಯೇ ಕೇಂದ್ರ ಸಚಿವರಾಗಿದ್ದವರು. ಅವರಿಗೆ ಕೇಂದ್ರ ಬಿಜೆಪಿ ನಾಯಕರ ಬೆಂಬಲವಿದೆ. ಹೀಗಾಗಿಯೇ ಸಿಎಂ ಯಡಿಯೂರಪ್ಪ ಅವರ ಮೇಲೆ ಗದಪ್ರಹಾರ ನಡೀತಿದೆ. ಹೀಗಾಗಿ ಬಿಜೆಪಿ ಸರ್ಕಾರ ಮುಂದುವರೆಯುವ ಲಕ್ಷಣ ಕಾಣಿಸುತ್ತಿಲ್ಲ ಎಂದು ಕುತೂಹಲದ ಹೇಳಿಕೆ ನೀಡಿದ್ದಾರೆ.

ಯಡಿಯೂರಪ್ಪ ಜೊತೆ ಹೊಂದಾಣಿಕೆ

ಯಡಿಯೂರಪ್ಪ ಜೊತೆ ಹೊಂದಾಣಿಕೆ

ಬಿಜೆಪಿ ಸರ್ಕಾರದಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಸಂಪುಟದ ಇತರ ಸಚಿವರೊಂದಿಗೆ ಹೊಂದಾಣಿಕೆ ಇಲ್ಲ. ಹೀಗಾಗಿ ಈ ಎಲ್ಲ ಬೆಳವಣಿಗೆಗಳು ಆಗುತ್ತಿವೆ. ಸಿಎಂ ಯಡಿಯೂರಪ್ಪ ಬದಲಾವಣೆ ಆಗಬಹುದು ಎಂದು ಹೊರಟ್ಟಿ ಹೇಳಿದರು.

ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ ಸಿಎಂ ಯಡಿಯೂರಪ್ಪ ಏನಂದ್ರು ಗೊತ್ತಾ?ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ ಸಿಎಂ ಯಡಿಯೂರಪ್ಪ ಏನಂದ್ರು ಗೊತ್ತಾ?

Recommended Video

Corona ಓಡಿಸೋ ಸಮಯ ದೂರ ಇಲ್ಲಾ | Corona Vaccine | Oneindia Kannada
ಯಡಿಯೂರಪ್ಪ ಮೇಲೆ ಮೃದು ಧೋರಣೆಯಿಲ್ಲ

ಯಡಿಯೂರಪ್ಪ ಮೇಲೆ ಮೃದು ಧೋರಣೆಯಿಲ್ಲ

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮೃದುಧೋರಣೆ ಹೊಂದಿಲ್ಲ ಎಂದು ಇದೇ ಸಂದರ್ಭದಲ್ಲಿ ಬಸವರಾಜ್ ಹೊರಟ್ಟಿ ಅವರು ಸ್ಪಷ್ಟಪಡಿಸಿದರು. ಕುಮಾರಸ್ವಾಮಿ ಯಾರ ಬಗ್ಗೆಯೂ ಸಾಫ್ಟ್‌ ಕಾರ್ನರ್ ಹೊಂದಿಲ್ಲ, ಎಲ್ಲರನ್ನೂ ಟೀಕೆ ಮಾಡುತ್ತಿದ್ದಾರೆ. ಶಿರಾ ಮತ್ತು ಆರ್ ಆರ್ ನಗರ ಎರಡೂ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಲಿದೆ ಎಂದರು.

English summary
JDS leader Basavaraj Horatti revealed the secret behind BJP MLA Basanagowda Patil Yatnal's statement on Yediyurappa change. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X