ಸ್ಪೀಕರ್ ಆದವರು ಚುನಾವಣೆಯಲ್ಲಿ ಸೋಲುತ್ತಾರೆ ಎಂಬುದು ಮೌಡ್ಯ: ಬಸವರಾಜ ರಾಯರೆಡ್ಡಿ
ಬೆಂಗಳೂರು, ಮೇ24: ಸಭಾಧ್ಯಕ್ಷ ಸ್ಥಾನವನ್ನ ಅಲಂಕರಿಸಿದವರು ಚುನಾವಣೆಯಲ್ಲಿ ಸೋಲುತ್ತಾರೆ ಎಂಬ ವದಂತಿ ಜೋರಾಗಿದ್ದು, ಸ್ಪೀಕರ್ ಆದವರು ಚುನಾವಣೆಯಲ್ಲಿ ಸೋಲುತ್ತಾರೆ ಎಂಬುದು ಮೌಡ್ಯ. ಈ ರೀತಿಯ ಮೌಡ್ಯವನ್ನು ಹರಿಯಬಿಡಬಾರದು ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು.
ಈ ಕುರಿತು ಬುಧವಾರ ಮಾತನಾಡಿದ ಅವರು, ಈ ಹಿಂದೆ ಸ್ಪೀಕರ್ ಆಗಿದ್ದ ಮತ್ತೊಮ್ಮೆ ಚುನಾವಣೆಯಲ್ಲಿ ಗೆದ್ದು ಸದನಕ್ಕೆ ಆರಿಸಿ ಬಂದಿದ್ದರು. ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕಾಗೋಡು ತಿಮ್ಮಪ್ಪ ಮತ್ತೊಮ್ಮೆ ಆರಿಸಿ ಬಂದಿದ್ದರು ಎಂದು ತಿಳಿಸಿದ್ದಾರೆ.

ಹಲವು ಸ್ಪೀಕರ್ ಗಳು ಒಳ್ಳೆಯ ಕೆಲಸ ಮಾಡಿದ್ದಾರೆ. ಸ್ಪೀಕರ್ ಆದವರು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಕೊಡಬೇಕು ಎಂದೇನಿಲ್ಲ, ಆದರೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಡುವುದು ನಿನಗೆ ಬಿಟ್ಟ ವಿಚಾರ ಎಂದರು.
ಈ ನಿಟ್ಟಿನಲ್ಲಿ ಯು.ಟಿ ಖಾದರ್ ವಿರುದ್ಧ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹಾಕಬಾರದು. ಈ ಹಿಂದೆ ಇಂತಹ ಸಂಪ್ರದಾಯ ಇತ್ತು ಎಂದು ರಾಯರೆಡ್ಡಿ ಗಮನ ಸೆಳೆದರು. ಇನ್ನೂ ದಿನದಿಂದ ದಿನಕ್ಕೆ ಸದನದಲ್ಲಿ ಶಿಸ್ತು ಕಡಿಮೆ ಆಗುತ್ತಿದೆ.
ಅದನ್ನು ಕಾಪಾಡಬೇಕು. ಮುಂದಿನ ದಿನಗಳಲ್ಲಿ ಸಹಕಾರ ಮಾಡಿದ್ದದ್ದರೆ ಕ್ರಮ ಕೈಗೊಳ್ಳಬೇಕು. ಸಮಯ ಸರಿಯಾದ ಸಮಯಕ್ಕೆ ನಡೆಯಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಯು.ಟಿ ಖಾದರ್ ಅವರ ಮುಂದಾಳ್ವತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ: ಸಿದ್ದರಾಮಯ್ಯ
ವಿಧಾನಸಭೆಯಲ್ಲಿ ಆರೋಗ್ಯಪೂರ್ಣ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಕೂಡಿದ ಚರ್ಚೆಗಳಾಗುವ ಮೇಲ್ಪಂಕ್ತಿಯನ್ನು ಎತ್ತಿಹಿಡಿದುವ ಜವಾಬ್ದಾರಿ ಸಭಾಧ್ಯಕ್ಷರ ಮೇಲಿದೆ.
ಸದನದ ಘನತೆ, ಗಾಂಭೀರ್ಯ, ಗೌರವ, ಎತ್ತಿಹಿಡಿಯಬೇಕು. ಖಾದರ್ ಅವರ ಮುಂದಾಳ್ವತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಿಸಿದರು.

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಖಾದರ್ ಅವರು ಸಭಾದ್ಯಕ್ಷರ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುವ ನಂಬಿಕೆ ವಿಶ್ವಾಸವಿದೆ.
ಅವರು ಬಹಳ ತಾಳ್ಮೆ ಇರುವ ವ್ಯಕ್ತಿ. ಅದು ಈ ಹುದ್ದೆಗೆ ಅಗತ್ಯವಾದ ಗುಣ. ಸದಸನದಲ್ಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಚರ್ಚೆಗಳಾಗಲಿ ಎಂದರಲ್ಲದೇ ಹೊಸದಾಗಿ ಆರಿಸಿಬಂದ ಸದಸ್ಯರಿಗೆ ಅಭಿನಂದಿಸಿದರು. ಎಲ್ಲ ರೀತಿಯ ಸಹಕಾರವನ್ನು ನೀಡುವುದಾಗಿಯೂ ತಿಳಿಸಿದರು.
ರಾಜಕಾರಣದ ಕುಟುಂಬದಿಂದ ಬಂದಿರುವ ಖಾದರ್ ಅವರು ತಮ್ಮ ತಂದೆಯ ನಿಧನದ ನಂತರ ಉಳ್ಳಾಲ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದವರು. ಅತ್ಯಂತ ಉತ್ಸಾಹಿ, ಸಕ್ರಿಯ ರಾಜಕಾರಣಿಯಾದ ಖಾದರದದ ಅವರು, ಶಾಸಕರು ಹಾಗೂ ಸಚಿವರಾಗಿ ಕಾರ್ಯನಿರ್ವಹಿಸಿದ್ದು, 2018 ರಲ್ಲಿ ಅತಿ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದಕ್ಕಾಗಿ ಸದನವೀರ ಪ್ರಶಸ್ತಿಯೂ ದೊರೆತಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.
ಯು.ಟಿ.ಖಾದರ್ ಅವರು ಮಾದರಿ ಶಾಕಸರಾಗಿ ಕೆಲಸ ಮಾಡಿದ್ದು, ವಿರೋಧ ಪಕ್ಷದಲ್ಲಿದ್ದ ಸಂದರ್ಭದಲ್ಲಿ ಉಪವಿರೋಧಪಕ್ಷದ ನಾಯಕರಾಗಿ ಪರಿಣಾಮಕಾರಿಯಾಗಿ, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದವರು. ಜಾತ್ಯಾತೀತ ಮನೋಭಾವ ಉಳ್ಳವರು ಎಂದರು.
ಇನ್ನೂ ಸಭಾಧ್ಯಕ್ಷರಾದವರು ಪಕ್ಷಾತೀತವಾಗಿ ಕೆಲಸ ಆಡಬೇಕೆಂಬ ನಿರೀಕ್ಷೆಯನ್ನು ಎಲ್ಲ ಸದಸ್ಯರೂ ಬಯಸುತ್ತಾರೆ. ವಿಧಾನಸಭೆ ಈ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡಬೇಕು.
ಇತ್ತೀಚಿನ ದಿನಗಳಲ್ಲಿ ವಿಧಾನಸಭೆಯ ಗುಣಮಟ್ಟ ಕಡಿಮೆಯಾಗುತ್ತಿದೆ ಎಂಬ ಭಾವನೆ ಅನೇಕರಲ್ಲಿದೆ. ಆ ಭಾವನೆ ಹೋಗಲಾಡಿಸುವ ಕೆಲಸವನ್ನು ಮಾಡಬೇಕಿದೆ. ವಿಧಾನಸಭೆ ಪ್ರಜಾಪ್ರಭುತ್ವದ ದೇಗುಲ. ಇಲ್ಲಿ ಏಳು ಕೊಟಿ ಕನ್ನಡಿಗರ ಸಮಸ್ಯೆಗಳನ್ನು ಚರ್ಚೆ ಮಾಡಬೇಕು.
ಈ ಎಲ್ಲಾ ವಿಚಾರಗಳನ್ನು ಸದನದಲ್ಲಿ ಚರ್ಚೆಯಾಗಬೇಕು. ಸದಸನದ ಅಧ್ಯಕ್ಷರ ಸ್ಥಾನಕ್ಕೆ ಪ್ರಜಾಪ್ರಭುತ್ವದಲ್ಲಿ ಮಹತ್ವದ ಸ್ಥಾನವಿದೆ. ಸದಸನದ ಚರ್ಚೆಯಲ್ಲಿ ಅನೇಕ ವಿಚಾರಗಳು ಬರುತ್ತವೆ.
ಚರ್ಚೆಯಲ್ಲಿ ಭಾಗವಹಿಸುವಾಗ ಪದಬಳಕೆಯಲ್ಲಿ ಬಹಳ ಎಚ್ಛರಿಕೆ ವಹಿಸಬೇಕು. ಅಸಂವಿಧಾನಾತ್ಮಕ ಪದಬಳಕೆಗೆ ಅವಕಾಶವಿರಬಾರದು. ರಚನಾತ್ಮಾಕವಾದ ಸಲಹೆಗಳನ್ನು ನೀಡಲು ಅವಕಾಶ ಹಾಗೂ ಹಕ್ಕುಗಳಿವೆ ಎಂದರು.












Click it and Unblock the Notifications