ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ

|
Google Oneindia Kannada News

ಹೊಸಪೇಟೆ ಅಕ್ಟೋಬರ್ 12: ಕರ್ನಾಟಕದಲ್ಲಿ ಬಿಜೆಪಿ ನಾಯಕರು ಬುಧವಾರ ಎರಡನೇ ದಿನವಾದ ಜನಸಂಕಲ್ಪ ಯಾತ್ರೆಯನ್ನು ಮುಂದುವರೆಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೊಸಪೇಟೆ ಸಮೀಪದ ಕಮಲಾಪುರ ಗ್ರಾಮದ ದಲಿತ ವ್ಯಕ್ತಿ ಹೀರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಉಪಹಾರ ಸೇವಿಸಿದರು.

ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಬೆಳಿಗ್ಗೆಯಿಂದಲೇ ಸಡಗರದ ವಾತಾವರಣ. ಅಡುಗೆ ಮನೆಯಲ್ಲಿ ಅವರ ಪುತ್ರಿಯರಾದ ಹುಲಿಗೆಮ್ಮ ಹಾಗೂ ರೇಣುಕಾ ಬೆಳಗಿನ ಉಪಾಹಾರದ ತಯಾರಿಯಲ್ಲಿ ನಿರತರಾಗಿದ್ದರು. ಮನೆಗೆ ಅತಿಥಿಗಳು ಬರುತ್ತಿದ್ದರಿಂದ ಅವರಿಗಾಗಿ ಕೇಸರಿಬಾತ್, ಮಂಡಕ್ಕಿ ಒಗ್ಗರಣೆ, ಮಿರ್ಚಿ, ಉಪ್ಪಿಟ್ಟಿನ ತಯಾರಿ ಮಾಡಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆನಂದ್ ಸಿಂಗ್ ಅವರೊಂದಿಗೆ ಆಗಮಿಸಿದ ಮುಖ್ಯಮಂತ್ರಿಗಳು ಕಮಲಾಪುರ ಅಂಬೇಡ್ಕರ್ ನಗರದ ದಲಿತ ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಬೆಳಗಿನ ಉಪಾಹಾರ ಸವಿದರು. ಕೊಲ್ಲಾರಪ್ಪ ಕುಟುಂಬದವರೊಂದಿಗೆ ಕುಶಲೋಪರಿ ವಿಚಾರಿಸಿದರು. ಕೊಲ್ಲಾರಪ್ಪ ನವರ ಮೊಮ್ಮಗಳು ಅಶ್ವಿನಿ ತಡಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿರುವ ವಿಷಯ ತಿಳಿದು ಮೆಚ್ಚುಗೆ ವ್ಯಕ್ತಪಡಿಸಿದರು. ಅವಳ ಶಿಕ್ಷಣ, ಕಾಲೇಜು ವಾತಾವರಣ ಮೊದಲಾದ ಕುರಿತು ಮಾಹಿತಿ ಪಡೆದರು.

ಕಾಲೇಜು ಚೆನ್ನಾಗಿದೆ. ಆದರೆ ಮೆಸ್ ಬಿಲ್ ದುಬಾರಿ ಎಂದು ಆಕೆ ಮುಖ್ಯಮಂತ್ರಿಯವರ ಗಮನ ಸೆಳೆದಾಗ ಇದನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

ಮನೆಯವರು ಪ್ರೀತಿಯಿಂದ ಉಣಬಡಿಸಿದ ಉಪಾಹಾರ , ಚಹಾ ಸೇವಿಸಿ ಮುಂದಿನ ಕಾರ್ಯಕ್ರಮಕ್ಕೆ ತೆರಳಿದರು. ಮಂಗಳವಾರ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿಗರೊಬ್ಬರು 14 ದಲಿತರನ್ನು ಬಂಧಿಯಾಗಿಟ್ಟು ಹಿಂಸಿಸಿರುವುದು ಬೆಳಕಿಗೆ ಬಂದ ನಂತರ ಇದು ನಡೆದಿದೆ.

ಬಂಧಿತರಲ್ಲಿ ಒಬ್ಬಳು ಗರ್ಭಿಣಿಯಾಗಿದ್ದಳು, ಆಕೆಯ ಮೇಲೆ ಹಲ್ಲೆ ಮಾಡಿದ ನಂತರ ಗರ್ಭಪಾತವಾಗಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಮಂಗಳವಾರ ರಾಯಚೂರು ಜಿಲ್ಲೆಯಿಂದ ಜನಸಂಕಲ್ಪ ಯಾತ್ರೆ ಮೂಲಕ ಚುನಾವಣಾ ಸದ್ದು ಮಾಡಿತ್ತು.

ವಿಡಿಯೊ ವೈರಲ್ ಬಳಿಕ ಕೇಸ್ ದಾಖಲು

ವಿಡಿಯೊ ವೈರಲ್ ಬಳಿಕ ಕೇಸ್ ದಾಖಲು

ದಲಿತ ಕುಟುಂಬದ ಹಲವು ಸದಸ್ಯರನ್ನು ಗೃಹಬಂಧನದಲ್ಲಿಟ್ಟು, ಗರ್ಭಿಣಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕಾಫಿ ಎಸ್ಟೇಟ್ ಮಾಲೀಕ, ಬಿಜೆಪಿ ಮುಖಂಡ ಜಗದೀಶ್ ಗೌಡ ಮತ್ತು ಆತನ ಪುತ್ರನ ವಿರುದ್ಧ ಬಾಳೆಹೊನ್ನೂರು ಪೊಲೀಸರು ಎಸ್ಸಿ, ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ಜಗದೀಶ್ ಗೌಡ ಮತ್ತು ಆತನ ಪುತ್ರ ತಿಲಕ್ ಗರ್ಭಿಣಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಪರಿಣಾಮ ಆ ಮಹಿಳೆಗೆ ಗರ್ಭಪಾತವಾಗಿದೆ ಎನ್ನಲಾಗಿದೆ. 6 ದಲಿತ ಕುಟುಂಬದ 14 ಕಾರ್ಮಿಕರನ್ನು ಮನೆಯೊಳಗೆ ಬೀಗ ಹಾಕಿ ಕೂಡಿ ಹಾಕಲಾಗಿದೆ. ಅಲ್ಲದೆ ಅವರನ್ನು ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಹೇಳಲಾದ ವೀಡಿಯೊ ವೈರಲ್ ಆದ ನಂತರ ಅವರ ಕೇಸ್ ದಾಖಲಿಸಲಾಗಿದೆ. ಜಗದೀಶ್ ಗೌಡ ಬಿಜೆಪಿ ಮುಖಂಡ ಎಂದು ಕಾಂಗ್ರೆಸ್ ಆರೋಪಿಸಿದೆ.

ಗೃಹ ಬಂಧನ ಹಿಂಸೆಯಿಂದ ಗರ್ಭಿಣಿಗೆ ಅರ್ಪಿತಾ

ಗೃಹ ಬಂಧನ ಹಿಂಸೆಯಿಂದ ಗರ್ಭಿಣಿಗೆ ಅರ್ಪಿತಾ

ಬಾಳೆಹೊನ್ನೂರು ಸಮೀಪದ ಹುಣಸೆಹಳ್ಳಿ ಪುರ ಗ್ರಾಮದಲ್ಲಿ ಅಕ್ಟೋಬರ್ 8 ರಂದು ಈ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಮೂಡಿಗೆರೆ ತಾಲೂಕಿನಿಂದ ಬಂದಿರುವ ದಲಿತ ಕುಟುಂಬಗಳು ಜಗದೀಶ್ ಗೌಡರಿಂದ 9 ಲಕ್ಷ ರೂಪಾಯಿ ಸಾಲ ಪಡೆದಿದ್ದು, ಕಳೆದ ನಾಲ್ಕು ತಿಂಗಳಿಂದ ಅವರ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

"ವೈರಲ್ ಆಗಿರುವ ವಿಡಿಯೊವನ್ನು ಆಧರಿಸಿ ನಾವು ಪ್ರಕರಣವನ್ನು ದಾಖಲಿಸಿದ್ದೇವೆ. ನಾವು ತನಿಖೆಯನ್ನು ಕೈಗೆತ್ತಿಕೊಂಡಿದ್ದೇವೆ. ತನಿಖೆಯ ಸಮಯದಲ್ಲಿ ಹೆಚ್ಚಿನ ವಿವರಗಳನ್ನು ತಿಳಿಸಲಾಗುವುದು" ಎಂದು ಅವರು ಹೇಳಿದ್ದಾರೆ. ದೂರಿನ ಪ್ರಕಾರ, ಜಗದೀಶ್ ಗೌಡ ಅವರು ಗರ್ಭಿಣಿ ಅರ್ಪಿತಾ ಅವರ ಹೊಟ್ಟೆಗೆ ಹೊಡೆದಿದ್ದಾರೆ ಮತ್ತು ಅರ್ಪಿತಾ ಅವರನ್ನು ರಕ್ಷಿಸಲು ಪ್ರಯತ್ನಿಸಿದಾಗ ಇತರ ಇಬ್ಬರು ಮಹಿಳೆಯರಾದ ರೂಪ ಮತ್ತು ಕವಿತಾ ಅವರ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ದಲಿತ ಕಾರ್ಮಿಕರನ್ನು ಬಂಧಿಸಿ ಹಿಂಸೆ

ದಲಿತ ಕಾರ್ಮಿಕರನ್ನು ಬಂಧಿಸಿ ಹಿಂಸೆ

ಜಗದೀಶ್ ಗೌಡ ಮತ್ತು ತಿಲಕ್ ತನ್ನ ಮತ್ತು ಪತಿ ವಿಜಯ್ ಮೇಲೆ ಹಲ್ಲೆ ನಡೆಸಿ ಫೋನ್ ಕಸಿದುಕೊಂಡಿದ್ದಾರೆ ಎಂದು ಅರ್ಪಿತಾ ದೂರಿನಲ್ಲಿ ಆರೋಪಿಸಿದ್ದಾರೆ. ಜಗದೀಶ್ ಗೌಡ ಮತ್ತು ಅವರ ಮಗ ದಲಿತ ಕಾರ್ಮಿಕರನ್ನು ಮನೆಯೊಳಗೆ ಬೀಗ ಹಾಕಿ ಕೂಡಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಜಿಲ್ಲಾಸ್ಪತ್ರೆಗೆ ದಾಖಲು

ಜಿಲ್ಲಾಸ್ಪತ್ರೆಗೆ ದಾಖಲು

ದೂರಿನ ಆಧಾರದ ಮೇಲೆ ಪೊಲೀಸರು ಜಗದೀಶ್ ಗೌಡ ಮತ್ತು ತಿಲಕ್ ವಿರುದ್ಧ ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ಇನ್ನಷ್ಟೇ ಬಂಧಿಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಅರ್ಪಿತಾ ಅವರನ್ನು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

English summary
BJP leaders in Karnataka continued the second day Janasankalpa Yatra on Wednesday. Chief Minister Basavaraja Bommai and Ex CM BS Yeddyurappa had breakfast at the home of Dalit man Heera Kollappa of Kamalapura village near Hospet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X