BBMP Election: ಬಿಬಿಎಂಪಿ ಚುನಾವಣೆಯ ದಿನಾಂಕ ಫಿಕ್ಸ್:‌ ಮಾಹಿತಿ ಕೊಟ್ಟ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಫೆಬ್ರವರಿ 24: ಬಿಬಿಎಂಪಿ ಚುನಾವಣೆಯನ್ನು ಯಾವ ತಿಂಗಳು ನಡೆಸಲಾಗುತ್ತದೆ ಎಂಬ ಬಗ್ಗೆ ಕೋರ್ಟ್‌ಗೆ ತಿಳಿಸಲು ರಾಜ್ಯ ಸರ್ಕಾರ ತಯಾರಿ ಮಾಡಿಕೊಂಡಿದೆ. ಬಿಬಿಎಂಪಿ ಚುನಾವಣೆ ಶೀಘ್ರವೇ ಘೋಷಣೆಯಾಗಲಿದ್ದು, ರಾಜ್ಯದ ಇತರೆ ಸ್ಥಳೀಯ ಸಂಸ್ಥೆಗಳು, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೂ ಸಜ್ಜಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಸಚಿವ ರಾಮಲಿಂಗಾರೆಡ್ಡಿ ಅವರು ಬಿಬಿಎಂಪಿ ಚುನಾವಣೆ ನಡೆಸುವ ಕುರಿತು ಮಾಹಿತಿಯನ್ನ ನೀಡಿದ್ದಾರೆ.

ಈ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ನಮಗೆ ಇಷ್ಟವಿರಲಿ ಅಥವಾ ಇಲ್ಲದಿರಲಿ ಈ ಮೇ ತಿಂಗಳಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ನಡೆಸಲೇಬೇಕು. ಸೆಪ್ಟೆಂಬರ್ 2020 ರಿಂದ ಬೆಂಗಳೂರಿನಲ್ಲಿ ಬಿಬಿಎಂಪಿ ಗೆ ಚುನಾವಣೆ ನಡೆದಿಲ್ಲ. ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ 2001 ರಲ್ಲಿ ಸಮಯಕ್ಕೆ ಸರಿಯಾಗಿ ಚುನಾವಣೆಗಳು ನಡೆದಿತ್ತು. 2015 ರಲ್ಲಿ ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅಡಿಯಲ್ಲಿ, 2008 ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ, ಚುನಾವಣೆಗಳು 2.8 ವರ್ಷಗಳಷ್ಟು ವಿಳಂಬವಾಗಿತ್ತು ಎಂದು ತಿಳಿಸಿದ್ದಾರೆ.

BBMP elections should be held in May Says Ramalinga Reddy

ನಾವು ಇಷ್ಟಪಡುತ್ತೇವೋ ಇಲ್ಲವೋ, ಮೇ ತಿಂಗಳಲ್ಲಿ ಚುನಾವಣೆ ನಡೆಸಲೇಬೇಕು. ಇಲ್ಲದಿದ್ದರೆ, ಸುಪ್ರೀಂ ಕೋರ್ಟ್ ನಿರ್ದೇಶನ (ಚುನಾವಣೆ ನಡೆಸಲು) ನೀಡುತ್ತದೆ. ಕಳೆದ ವರ್ಷ ಜುಲೈನಲ್ಲಿ, ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ಶಿವಾಜಿನಗರ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ಜಂಟಿ ಆಯ್ಕೆ ಸಮಿತಿಗೆ ಉಲ್ಲೇಖಿಸಲಾಗಿತ್ತು. ಇನ್ನೂ ವಿಳಂಬದ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ಸಮರ್ಥಿಸಿಕೊಂಡ ರೆಡ್ಡಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚಿಸುವ ಸರ್ಕಾರದ ಯೋಜನೆಗಳಿಂದಾಗಿ ಚುನಾವಣೆ ಮುಂದೂಡಿಕೆಯಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದರು.

ನಾವು ಬೆಂಗಳೂರಿನ ಜನರಿಗೆ ಸೇವೆ ಸಲ್ಲಿಸಲು ಬಯಸಿದರೆ, ಒಂದೇ ನಿಗಮ ಖಂಡಿತವಾಗಿಯೂ ಸಾಕಾಗುವುದಿಲ್ಲ. ಒಬ್ಬ ಆಯುಕ್ತರು ಇಡೀ ನಗರವನ್ನು ಮೇಲ್ವಿಚಾರಣೆ ಮಾಡಲು ಸಾಧ್ಯವಿಲ್ಲ. ಸರಿಯಾದ ರಸ್ತೆಗಳು, ಬೀದಿ ದೀಪಗಳು, ಉದ್ಯಾನವನಗಳು, ಆಟದ ಮೈದಾನಗಳು ಮತ್ತು ಮಳೆನೀರಿನ ಚರಂಡಿಗಳನ್ನು ನಿರ್ವಹಿಸಲು ನಮಗೆ ಎರಡು ಅಥವಾ ಮೂರು ನಿಗಮಗಳು ಬೇಕಾಗುತ್ತವೆ. ಸಮಿತಿಯು ಸೋಮವಾರ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಅವರಿಗೆ ತನ್ನ ವರದಿಯನ್ನು ಸಲ್ಲಿಸುವ ಸಾಧ್ಯತೆಯಿದೆ. ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯು ಬೆಂಗಳೂರಿನಲ್ಲಿ 10 ಮುನ್ಸಿಪಲ್ ಕಾರ್ಪೊರೇಷನ್‌ಗಳ ರಚನೆಗೆ ಅವಕಾಶ ನೀಡುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದರು.

ಕನ್ನಡ ಮಾತಾಡು ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಮ್ಮ ಕಂಡಕ್ಟರ್​ ಮಹಾದೇವ ಹುಕ್ಕೇರಿ ಮೇಲೆ ಬೇಕು ಅಂತಾನೇ ಪೋಕ್ಸೋ ಕೇಸ್​ ಕೊಟ್ಟಿದ್ದಾರೆ. ಅವತ್ತು ಬಸ್​​ನಲ್ಲಿ ಒಬ್ಬರು, ಇಬ್ಬರು ಇರಲಿಲ್ಲ. 90 ಜನ ಪ್ರಯಾಣಿಸುತ್ತಿದ್ದರು. ನೋಡೋಣ ಆ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+