ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ದಿನ ಮಾಂಸ ಮಾರಾಟಕ್ಕೆ ನಿರ್ಬಂಧ

ಬೆಂಗಳೂರು, ಆಗಸ್ಟ್.21: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ಗಮನದಲ್ಲಿಟ್ಟುಕೊಂಡು ಈ ವರ್ಷ ಗಣೇಶ ಚತುರ್ಥಿ ಹಬ್ಬ ಆಚರಿಸುವುದಕ್ಕೆ ರಾಜ್ಯ ಸರ್ಕಾರವು ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊರಡಿಸಿದೆ.

Recommended Video

      ಪಬ್ ವಿಚಾರ CM ಹತ್ರ ಮಾತಾಡ್ತೀನಿ | Oneindia Kannada

      ಆಗಸ್ಟ್.22ರ ಶನಿವಾರ ಆಚರಿಸುವ ಗಣೇಶ ಚತುರ್ಥಿ ಹಬ್ಬವನ್ನು ಗಮನದಲ್ಲಿಟ್ಟುಕೊಂಡು ಬಿಬಿಎಂಪಿ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಗಣೇಶ ಹಬ್ಬದ ದಿನ ನಗರದಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ರದ್ದುಗೊಳಿಸಲಾಗಿದೆ.

      ಪವಿತ್ರ ಹಬ್ಬದ ದಿನದಂದು ನಗರದಲ್ಲಿ ಯಾವುದೇ ರೀತಿ ಪ್ರಾಣಿ ವಧೆಯನ್ನು ಮಾಡುವಂತಿಲ್ಲ. ಜೊತೆಗೆ ಮಾಂಸ ಮಾರಾಟ ಅಂಗಡಿಗಳನ್ನು ಬಂದ್ ಮಾಡುವಂತೆ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯು ಸೂಚನೆ ನೀಡಿದೆ.

      BBMP Issued An Order Prohibiting The Sale Of Meat On Ganesha Chaturthi Day

      ಗಣೇಶ ಚತುರ್ಥಿ ಆಚರಣೆಗೆ ಸರ್ಕಾರದ ಮಾರ್ಗಸೂಚಿ:

      ಮಹಾಮಾರಿ ಕೊರೊನಾವೈರಸ್ ಸೋಂಕಿನ ಭೀತಿ ನಡುವೆ ಗಣೇಶ ಚತುರ್ಥಿ ಹಬ್ಬದ ಆಚರಣೆಗೆ ರಾಜ್ಯ ಸರ್ಕಾರವು ಅನುಮತಿ ನೀಡಿದ್ದು, ಕೆಲವು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ.

      - ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸುವುದು. ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಗಳಲ್ಲಿ ಎರಡು ಅಡಿ ಎತ್ತರ ಮೀರದಂತೆ ಪ್ರತಿಷ್ಠಾಪಿಸಬೇಕು.

      - ಪಾರಂಪರಿಕ ಗಣೇಶೋತ್ಸವಕ್ಕಾಗಿ, ಗಣೇಶ ಸಮಿತಿಗಳು, ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನ್ಸಿಪಲ್ ಕಾರ್ಪೋರೇಷನ್ ಮತ್ತು ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆದುಕೊಳ್ಳುವುದು ಕಡ್ಡಾಯಗೊಳಿಸಲಾಗಿದೆ. ಒಂದು ವಾರ್ಡಿಗೆ ಅಥವಾ ಒಂದು ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವುದಕ್ಕೆ ಪ್ರೋತ್ಸಾಹಿಸಲಾಗುತ್ತದೆ.

      - ಗಣೇಶೋತ್ಸವ ಆಚರಿಸುವ ಸಾರ್ವಜನಿಕ ಪ್ರದೇಶಗಳಲ್ಲಿ ಏಕಕಾಲಕ್ಕೆ 20ಕ್ಕಿಂತ ಹೆಚ್ಚು ಜನರು ಸೇರದಂತೆ ಮುನ್ನೆಚ್ಚರಿಕೆ ವಹಿಸುವುದು ಕಡ್ಡಾಯವಾಗಿದೆ. 20ಕ್ಕಿಂತ ಕಡಿಮೆ ಭಕ್ತರಿಗೆ ಮಾತ್ರ ಗಣೇಶನ ದರ್ಶನಕ್ಕೆ ಅವಕಾಶ ನೀಡುವುದು. ಜೊತೆಗೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಸ್ಥಳದಲ್ಲಿ ಯಾವುದೇ ರೀತಿ ಸಾಂಸ್ಕೃತಿಕ/ಸಂಗೀತ/ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವುದಕ್ಕೆ ಅವಕಾಶ ಇರುವುದಿಲ್ಲ.

      - ಗಣೇಶ ಮೂರ್ತಿಯನ್ನು ತರುವಾಗ ಮತ್ತು ವಿಸರ್ಜಿಸುವ ಸಂದರ್ಭದಲ್ಲಿ ಯಾವುದೇ ಕಾರಣಕ್ಕಾಗಲಿ ಅಥವಾ ಸಂದರ್ಭಕ್ಕಾಗಲಿ ಮೆರವಣಿಗೆಗಳನ್ನು ಮಾಡುವಂತಿಲ್ಲ. ಗಣೇಶ ಮೂರ್ತಿ ಮೆರವಣಿಗೆ ಹೊರಡಿಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

      - ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲೇ ವಿಸರ್ಜಿಸುವುದು ಮತ್ತು ಸರ್ಕಾರಿ / ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮೂರ್ತಿಗಳನ್ನು ಅತಿ ಸಮೀಪವಾಗುವಂತಹ ಮಾರ್ಗವನ್ನು ಬಳಸಿಕೊಂಡು ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಹತ್ತಿರದ ಸ್ಥಳೀಯ ಸಂಸ್ಥೆಗಳ/ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್ ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ವಿಸರ್ಜನೆ ಮಾಡುವುದು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+