ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಯಡಿಯೂರಪ್ಪ ಎದುರು ಮಹತ್ವದ ಬೇಡಿಕೆ ಇಟ್ಟ ಬಿ.ಸಿ. ಪಾಟೀಲ್!

|
Google Oneindia Kannada News

ಬೆಂಗಳೂರು, ನ. 16: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ‌ ರಚನೆಯ ಜೊತೆಗೆ ಸಮುದಾಯಕ್ಕೆ ಹಿಂದುಳಿದ ವರ್ಗದ ಮೀಸಲಾತಿ ಒದಗಿಸುವಂತೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ತಾವೇ ಮಂತ್ರಿಯಾಗಿರುವ ರಾಜ್ಯ ಬಿಜೆಪಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯ ಕೋರಿದ ಬಿ.ಸಿ. ಪಾಟೀಲ್ ಅವರು, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನಗೆ ಸರ್ಕಾರ ಆದೇಶ ಮಾಡಿದೆ. ಅದೇ ರೀತಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಹಿಂದುಳಿದ ಬಡವರು ಹೆಚ್ಚಿದ್ದು ವೀರಶೈವ ಲಿಂಗಾಯತರ ಏಳಿಗೆಗೆ ಸರ್ಕಾರ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ‌‌ ರಚನೆ ಜೊತೆಗೆ ಹಿಂದುಳಿದ ವರ್ಗದ ಪ್ರವರ್ಗ-2ಎ ಸ್ಥಾನಮಾನ ನೀಡುವಂತೆಯೂ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

 bc patil demanded cm yediyurappa to formation of lingayat development corporation

ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವೀರಶೈವ ಮಹಾಸಭಾ ಆಗ್ರಹ!ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವೀರಶೈವ ಮಹಾಸಭಾ ಆಗ್ರಹ!

Recommended Video

ಹಾಗಾದ್ರೆ ಈ ಆಟಗಾರರ ಭವಿಷ್ಯ !! | RCB | Oneindia Kannada

ಬಸವಕಲ್ಯಾಣ ಚುನಾವಣೆ ಹಿನ್ನೆಲೆಯಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಾಗೂ 50 ಕೋಟಿ ರೂಪಾಯಿಗಳನ್ನು ಪ್ರಾಧಿಕಾರಕ್ಕೆ ಒದಗಿಸುವಂತೆ ಸಿಎಂ ಯಡಿಯೂರಪ್ಪ ಅವರು ಆದೇಶ ಮಾಡಿದ್ದರು. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಲಿಂಗಾಯತ ಸಮುದಾಯದ ಮುಖಂಡರು ತಮ್ಮ ಸಮುದಾಯಕ್ಕೆ ಮೀಸಲಾತಿ ಒದಗಿಸುವಂತೆ ಮನವಿ ಮಾಡಿದ್ದಾರೆ.

English summary
Minister of Agriculture B.C. Patil has demanded Chief Minister Yediyurappa to formation of Lingayat Development Corporation, Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X