ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಸರ ಸ್ನೇಹಿ ದೀಪಾವಳಿ: ಗೋಮಯ ಹಣತೆ!

|
Google Oneindia Kannada News

ಬೆಂಗಳೂರು, ಅ. 24: ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ದೀಪಾವಳಿಯನ್ನಾಗಿ ಆಚರಿಸಲು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಮನವಿ ಮಾಡಿದ್ದಾರೆ. ಹೀಗಾಗಿ ಈ ಬಾರಿಯ ದೀಪಾವಳಿಯನ್ನು ಕಾಮಧೇನು(ಗೋಮಯ) ದೀಪಾವಳಿಯನ್ನಾಗಿಸಲು ವಿನಂತಿಸಿದ್ದಾರೆ. ರಾಸಾಯನಿಕಮುಕ್ತ ಹಣತೆ, ಅಪಾಯಕಾರಿ ಪಟಾಕಿಗಳನ್ನು ಬಳಸುವುದನ್ನು ಬಿಟ್ಟು ಮನಸಿಗೆ ಮುದ ನೀಡುವ ಹಾನಿಕಾರಕವಲ್ಲದ ಗೋಮಯ ದೀಪಗಳನ್ನು ಬಳಸಲು ಕರೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ರೈತ ಸ್ವಾವಲಂಬನೆ ಹಾಗೂ ಆದಾಯ ದ್ವಿಗುಣ ಕಾರ್ಯಯೋಜನೆಯನ್ನು ಆತ್ಮ ನಿರ್ಭರ್ ಭಾರತದ ಸಂಕಲ್ಪವನ್ನು ಸಾಕಾರ ಗೊಳಿಸಲು ಕೇಂದ್ರ ಪಶು ಸಂಗೋಪನಾ ಸಚಿವಾಲಯದ ರಾಷ್ಟ್ರೀಯ ಕಾಮಧೇನು ಆಯೋಗದಿಂದ ಪ್ರಾಯೋಜಿತವಾದ ಸಗಣಿಯಿಂದ ತಯಾರಿಸಿದ ಗೋಮಯ ಹಣತೆಯನ್ನು ಈ ದೀಪಾವಳಿಯ ಸಂದರ್ಭದಲ್ಲಿ ದೇಶದಾದ್ಯಂತ ಉರಿಸುವ ಯೋಜನೆ ರೂಪಿಸಿದೆ.

bc patil has appealed to celebrate the light festival diwali as an eco-friendly diwali

ನಿಂದಕರಿರಬೇಕು ಹಂದಿಯಂತೆ ಎಂದಿದ್ಯಾಕೆ ಕೃಷಿ ಸಚಿವ ಬಿ.ಸಿ. ಪಾಟೀಲ್?ನಿಂದಕರಿರಬೇಕು ಹಂದಿಯಂತೆ ಎಂದಿದ್ಯಾಕೆ ಕೃಷಿ ಸಚಿವ ಬಿ.ಸಿ. ಪಾಟೀಲ್?

Recommended Video

Corona ಓಡಿಸೋ ಸಮಯ ದೂರ ಇಲ್ಲಾ | Corona Vaccine | Oneindia Kannada

ಈ ನಿಟ್ಟಿನಲ್ಲಿ ರಾಷ್ಟ್ರೀಯ ಕಾಮಧೇನು ಆಯೋಗ,ರಾಷ್ಟ್ರೋತ್ಥಾನ ಗೋಶಾಲೆ, ಗೋಸೇವಾ ಗತಿವಿಧಿ ಹಾಗೂ ಪ್ರಾಣಿ ಕಲ್ಯಾಣ ಮಂಡಳಿ ಈ ಬಾರಿಯ ದೀಪಾವಳಿಯನ್ನು ಪರಿಸರ ಸ್ನೇಹಿ ಗೋಮಯ ದೀಪಗಳಿಂದ ಆಚರಿಸಬೇಕೆಂದು ಯೋಜ‌ನೆ ರೂಪಿಸಿದ್ದು, ದೇಶದಲ್ಲಿ 33 ಕೋಟಿ ದೀಪಗಳನ್ನು ರಾಜ್ಯದಲ್ಲಿ 3 ಕೋಟಿ ಗೋಮಯ ದೀಪಗಳನ್ನು ಬಳಸುವ ಉದ್ದೇಶ ಹೊಂದಲಾಗಿದೆ.

bc patil has appealed to celebrate the light festival diwali as an eco-friendly diwali

ಈ ಗೋಮಯ ದೀಪಗಳನ್ನು ಬಳಸುವುದರಿಂದ ರೈತರ ಬೆನ್ನೆಲುಬಾದ ಭಾರತೀಯ ದೇಶಿ ಗೋತಳಿಯ ಉಳಿವಿಗೆ ಪ್ರಯತ್ನ ಮಾಡುವುದರ ಜೊತೆಗೆ ಆರೋಗ್ಯದ ಹಿತದೃಷ್ಟಿಯಿಂದಲೂ ಉತ್ತಮವಾಗಿದೆ. ಜೊತೆಗೆ ಇದರಿಂದ ದೇಶೀಯ ದೀಪಗಳಿಗೆ ಉತ್ತೇಜನ ತಯಾರಿಕರಿಗೆ ಪ್ರೋತ್ಸಾಹ ದೊರೆಯುವಂತಾಗುತ್ತದೆ ಎಂದು ಬಿ.ಸಿ. ಪಾಟೀಲ್ ಹೇಳಿದ್ದಾರೆ.

English summary
Minister of Agriculture B.C. Patil has appealed To celebrate the light festival Diwali as an eco-friendly Diwali
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X