ನಂದಿನಿಯನ್ನು ಕೆಳಗಿಳಿಸಲು ಪ್ರಯತ್ನಿಸಿದರೆ ಹುಷಾರ್!- ಅಮುಲ್‌ಗೆ ಎಚ್ಚರಿಕೆ ಕೊಟ್ಟ ಕರವೇ
ಬೆಂಗಳೂರು ಏಪ್ರಿಲ್ 8: ಗುಜರಾತ್ ಮೂಲದ ಹಾಲು ಉತ್ಪಾದಕರ ಸಹಕಾರ ಸಂಘ ಅಮುಲ್ ಮಾಡುತ್ತಿರುವ ಜಾಹೀರಾತುಗಳಿಗೆ ಕನ್ನಡಿಗರು ಆಕ್ರೋಶಗೊಂಡಿದ್ದಾರೆ. ಅಮುಲ್ ಹಾಲು, ಮೊಸರು ಇನ್ನಿತರ ಉತ್ಪನ್ನಗಳನ್ನು ಖರೀದಿಸದಂತೆ ಕನ್ನಡಿಗರಿಗೆ ಕರೆ ನೀಡಲಾಗಿದೆ. ಇದರೊಂದಿಗೆ ಇ-ಕಾಮರ್ಸ್ ಅಡಿಯಲ್ಲಿ ಅಮುಲ್ ಹಾಲು, ಮೊಸರು ಮಾರಾಟ ಮಾಡಿದರೆ ಮುಂದಾಗುವ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಎಚ್ಚರಿಗೆ ಕೊಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರವೇ ರಾಜಾಧ್ಯಕ್ಷರಾದ ನಾರಾಯಣಗೌಡ್ರು.ಟಿ.ಎ ಅವರು, 'ಇ-ಕಾಮರ್ಸ್ ಅಡಿಯಲ್ಲಿ ಅಮುಲ್ ಹಾಲು, ಮೊಸರು ಮಾರಾಟಕ್ಕೆ ಮುಂದಾದರೆ ಅಂಥ ಸಂಸ್ಥೆಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ನಡೆಸಲಿದೆ. ಈ ಸಂಸ್ಥೆಗಳು ಅಮುಲ್ ಮಾರಾಟ ನಿಲ್ಲಿಸಬೇಕು, ಇಲ್ಲವಾದಲ್ಲಿ ಆಗುವ ಅನಾಹುತಕ್ಕೆ ಆ ಸಂಸ್ಥೆಗಳೇ ಜವಾಬ್ದಾರಿಯಾಗುತ್ತವೆ' ಎಂದು ಖಡಕ್ ಸೂಚನೆ ಕೊಟ್ಟಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ನಾರಾಯಣಗೌಡ್ರು.ಟಿ.ಎ ಅವರು ಅಮುಲ್ ವಿರುದ್ಧ ಆಕ್ರೋಶ್ ಹೊರಹಾಕಿದ್ದಾರೆ.

'ಅಮುಲ್ ಪ್ರವೇಶಕ್ಕಾಗಿಯೇ ವೇದಿಕೆ ಸಜ್ಜುಗೊಳಿಸಲಾಗಿದೆ. ಕೃತಕವಾಗಿ ನಂದಿನ ಹಾಲಿನ ಪೂರೈಕೆ ಕುಸಿಯುವಂತೆ ಮಾಡಲಾಗಿದೆ. ಇದ್ದಕ್ಕಿದ್ದಂತೆ ನಂದಿನಿ ಹಾಲಿನ ಉತ್ಪಾದನೆ ಕುಸಿಯಲು ಕಾರಣವೇನು? ನಂದಿನಿಯನ್ನು ಮುಗಿಸಲು ಕೆಎಂಎಫ್ ಅಧಿಕಾರಿಗಳಿಗೆ ಸುಪಾರಿ ನೀಡಲಾಗಿದೆಯೇ?' ಎಂದು ನಾರಾಯಣಗೌಡ್ರು.ಟಿ.ಎ ಪ್ರಶ್ನೆ ಮಾಡಿದ್ದಾರೆ.
ಇ-ಕಾಮರ್ಸ್ ಅಡಿಯಲ್ಲಿ ಅಮೂಲ್ ಹಾಲು, ಮೊಸರು ಮಾರಾಟಕ್ಕೆ ಮುಂದಾದರೆ ಅಂಥ ಸಂಸ್ಥೆಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ನಡೆಸಲಿದೆ. ಈ ಸಂಸ್ಥೆಗಳು ಅಮೂಲ್ ಮಾರಾಟ ನಿಲ್ಲಿಸಬೇಕು, ಇಲ್ಲವಾದಲ್ಲಿ ಆಗುವ ಅನಾಹುತಕ್ಕೆ ಆ ಸಂಸ್ಥೆಗಳೇ ಜವಾಬ್ದಾರಿಯಾಗುತ್ತವೆ. (1/7)#SaveNandini pic.twitter.com/9MIOVV58sI
— ನಾರಾಯಣಗೌಡ್ರು.ಟಿ.ಎ | Narayanagowdru T.A. (@narayanagowdru) April 8, 2023
'ಕರ್ನಾಟಕದ ಬಹುಪಾಲು ರೈತರು ಹಾಲು ಉತ್ಪಾದನೆಯನ್ನು ನೆಚ್ಚಿಕೊಂಡು ಬದುಕುತ್ತಿದ್ದಾರೆ. ಅವರನ್ನು ಗುಜರಾತಿ ವ್ಯಾಪಾರಿಗಳ ಅಡಿಯಾಳಾಗಿ ಮಾಡುವ ಹುನ್ನಾರವೇ ಅಮುಲ್-ನಂದಿನಿ ವಿಲೀನದ ಪ್ರಸ್ತಾಪ. ಅದನ್ನು ಜಾರಿಗೊಳಿಸುವ ಸಲುವಾಗಿಯೇ ಅಮುಲ್ ಹಾಲು-ಮೊಸರು ರಾಜ್ಯವನ್ನು ಪ್ರವೇಶಿಸುತ್ತಿದೆ' ಎಂದಿದ್ದಾರೆ.

'ಕೇಂದ್ರ ಗೃಹಸಚಿವ ಅಮಿತ್ ಶಾ ಅಮುಲ್ ನೊಂದಿಗೆ ನಂದಿನಿ ಸೇರಿದಂತೆ ದೇಶದ ವಿವಿಧ ಹಾಲು ಉತ್ಪಾದಕ ಸಂಸ್ಥೆಗಳನ್ನು ವಿಲೀನಗೊಳಿಸುವ ಮಾತುಗಳನ್ನು ಆಡಿದ ಬೆನ್ನಲ್ಲಿ ನಡೆಯುತ್ತಿರುವ ಘಟನೆಗಳನ್ನು ಗಮನಿಸಿದರೆ ಕೇಂದ್ರ ಸರ್ಕಾರವೇ ಪಿತೂರಿಯ ಹಿಂದಿದೆ ಎಂಬುದು ಸ್ಪಷ್ಟವಾಗುತ್ತದೆ. ಆದರೆ ಗುಜರಾತಿ ಲಾಬಿಗೆ ನಾವು ಮಣಿಯುವುದಿಲ್ಲ' ಕರವೇ ರಾಜಾಧ್ಯಕ್ಷರು ಹೇಳಿದ್ದಾರೆ.
ಅಮೂಲ್ ಪ್ರವೇಶಕ್ಕಾಗಿಯೇ ವೇದಿಕೆ ಸಜ್ಜುಗೊಳಿಸಲಾಗಿದೆ. ಕೃತಕವಾಗಿ ನಂದಿನ ಹಾಲಿನ ಪೂರೈಕೆ ಕುಸಿಯುವಂತೆ ಮಾಡಲಾಗಿದೆ. ಇದ್ದಕ್ಕಿದ್ದಂತೆ ನಂದಿನಿ ಹಾಲಿನ ಉತ್ಪಾದನೆ ಕುಸಿಯಲು ಕಾರಣವೇನು? ನಂದಿನಿಯನ್ನು ಮುಗಿಸಲು ಕೆಎಂಎಫ್ ಅಧಿಕಾರಿಗಳಿಗೆ ಸುಪಾರಿ ನೀಡಲಾಗಿದೆಯೇ? (6/7)#SaveNandini
— ನಾರಾಯಣಗೌಡ್ರು.ಟಿ.ಎ | Narayanagowdru T.A. (@narayanagowdru) April 8, 2023
'ಕನ್ನಡಿಗರು ಕಷ್ಟಪಟ್ಟು ಬೆಳೆಸಿದ ನಂದಿನಿ ಬ್ರಾಂಡ್ ಅನ್ನು ಮುಗಿಸಲೆಂದೇ ಅಮುಲ್ ಹಾಲು-ಮೊಸರನ್ನು ರಾಜ್ಯಕ್ಕೆ ತರಲಾಗುತ್ತಿದೆ. ಕರ್ನಾಟಕದ ರೈತರನ್ನು ಭಿಕ್ಷುಕರನ್ನಾಗಿಸುವ ಸಂಚು ನಡೆಯುತ್ತಿದೆ. ಕನ್ನಡಿಗರು ಸ್ವಾಭಿಮಾನಿಗಳು, ಕೆರಳಿ ನಿಂತರೆ ಇಂಥ ಸಂಚುಗಳನ್ನು ವಿಫಲಗೊಳಿಸುವುದು ಅವರಿಗೆ ಗೊತ್ತಿದೆ' ಎಂದು ಹೇಳಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಈ ಹಿಂದೆ ಆಂಧ್ರಪ್ರದೇಶದ ಕಲಬೆರೆಕೆ ಹಾಲಿನ ವಿರುದ್ಧ ಹೋರಾಟ ಸಂಘಟಿಸಿ ನಿಲ್ಲಿಸುವಲ್ಲಿ ಯಶಸ್ವಿಯಾಗಿತ್ತು. ಅದೇ ರೀತಿ ಈಗ ಅಮುಲ್ ವಿರುದ್ಧವೂ ಚಳವಳಿ ರೂಪಿಸಲಿದೆ. ನಂದಿನಿ ವಿರುದ್ಧ ನಡೆದಿರುವ ಪಿತೂರಿಗೆ ಕರವೇ ಸಂಬಂಧಪಟ್ಟವರಿಗೆ ತಕ್ಕ ಪಾಠ ಕಲಿಸಲಿದೆ' ಎಂದರು.
ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಕನ್ನಡಿಗರ ಜೀವನಾಡಿ ನಂದಿನಿಯನ್ನ ಮುಗಿಸಲು ಸರ್ಕಾರ ಮೂರು ಸಂಚು ರೂಪಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಬಂದಂತಹ ಸಂದರ್ಭದಲ್ಲಿ ಅಮುಲ್ ಜತೆ ನಂದಿನಿ ವಿಲೀನ ಹೇಳಿಕೆ ಇದು ನಂದಿನಿ ಮುಗಿಸುವ ಮೊದಲ ಸಂಚು, ಮೊಸರಿನ ಮೇಲೆ ಹಿಂದಿಯ 'ದಹಿ' ಪದ ಮುದ್ರಣ ಇದು ಎರಡನೇ ಸಂಚು ಎಂದು ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.












Click it and Unblock the Notifications