Mann Ki Baat : ಮನ್ ಕಿ ಬಾತ್ ಕಾರ್ಯಕ್ರಮ ಮಾತ್ರವಲ್ಲ ಅದೊಂದು ಪೂಜೆ, ನಂಬಿಕೆ ಮತ್ತು ವ್ರತವಿದ್ದಂತೆ: ಮೋದಿ
ಬೆಂಗಳೂರು,ಏಪ್ರಿಲ್30: ಮನ್ ಕಿ ಬಾತ್ ನನಗೆ ಒಂದು ಕಾರ್ಯಕ್ರಮ ಮಾತ್ರವಲ್ಲ, ಪೂಜೆ, ನಂಬಿಕೆ ಮತ್ತು ವ್ರತವಿದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ರೇಡಿಯೋ ಕಾರ್ಯಕ್ರಮ "ಮನ್ ಕೀ ಬಾತ್" ನ 100 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇದು ಕೇವಲ ಕಾರ್ಯಕ್ರಮ ಮಾತ್ರವಲ್ಲ, ಜನರೇ ದೇವರು ಎಂದು ಹೇಳಿದ್ದು, ಹರ್ಯಾಣದ ಸುನಿಲ್ ಜಾಗರಣ್ ಅವರ ಬಗ್ಗೆ ಮೋದಿ ಮಾತನಾಡಿ, ಅವರು ಆರಂಭಿಸಿರುವ ಸೆಲ್ಫಿ ವಿತ್ ಡಾಟರ್ ಅಭಿಯಾನವೂ ದೇಶಾದ್ಯಂತ ಮನ್ನಣೆ ಪಡೆದಿದೆ. ಇದು ಹೆಣ್ಣು ಕುಟುಂಬಕ್ಕೆ ಎಷ್ಟು ಮುಖ್ಯ ಎಂದು ಸಾರುವ ಕಾರ್ಯಕ್ರಮ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರವಾಸೋದ್ಯಮ ಕುರಿತು ಮಾತನಾಡಿದ ಪ್ರಧಾನಿ ಮೋದಿ, ದೇಶದಲ್ಲಿ ಪ್ರವಾಸೋದ್ಯಮ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ನಮ್ಮ ಪ್ರಾಕೃತಿಕ ಸಂಪತ್ತೇ ಇರಲಿ, ನದಿಗಳಿರಲಿ, ಪರ್ವತಗಳಿರಲಿ, ಕೊಳಗಳಿರಲಿ ಅಥವಾ ಯಾತ್ರಾಸ್ಥಳಗಳಿರಲಿ, ಅವುಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಬಹಳ ಮುಖ್ಯ ಎಂದು ಹೇಳಿದರು.
ಇನ್ನೂ ಈ ಹಿಂದೆ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಿನ ಕೆಲವು ಕ್ಷಣಗಳನ್ನು ನೆನೆದ ಪ್ರಧಾನಿ ನರೇಂದ್ರ ಮೋದಿ ಅವರು, ತಾವು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ, ಜನತೆಯೊಂದಿಗೆ ಮಾತನಾಡಲು, ಅವರ ಸಮಸ್ಯೆಗಳನ್ನು ಆಲಿಸಲು ಸಾಧ್ಯವಾಗುತ್ತಿತ್ತು, ಏಕಾಏಕಿ ಪ್ರಧಾನಿಯಾಗಿ ದೆಹಲಿಗೆ ಬಂದ ಬಳಿಕ ಏನೋ ಖಾಲಿ ಖಾಲಿ ರೀತಿ ಭಾಸವಾಗುತ್ತಿತ್ತು ಎಂದು ಹೇಳಿದ ಅವರು, ಪ್ರೋಟೋಕಾಲ್ನಿಂದಾಗಿ ಜನರ ಮಧ್ಯೆ ತೆರಳಿ ಕಷ್ಟಗಳನ್ನು ಆಲಿಸುವುದು ಸಾಧ್ಯವಿಲ್ಲ, ಆಗ ಈ ಮನ್ ಕೀ ಬಾತ್ ಶುರು ಮಾಡುವ ಬಗ್ಗೆ ಆಲೋಚನೆ ಬಂದಿತ್ತು, ಈಗ ದೇಶಾದ್ಯಂತ ಇರುವ ಜನರನ್ನು ತಲುಪಲು ಸಾಧ್ಯವಾಗಿದೆ. ಈ ಬಗ್ಗೆ ನನಗೆ ಹೆಮ್ಮೆ ಇದೆ ಸಂತಸವನ್ನ ವ್ಯಕ್ತಪಡಿಸಿದರು.

ಇತ್ತ ಮನ್ ಕಿ ಬಾತ್ ನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪೆನ್ಸಿಲ್ ಮತ್ತು ಸ್ಲೇಟ್ ವ್ಯಾಪಾರ ಮಾಡುವ ಮಂಜೂರ್ ಅಹ್ಮದ್ ಎಂಬ ವ್ಯಕ್ತಿಯೊಂದಿಗೆ ಪ್ರಧಾನಿ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ, ಜಮ್ಮು ಮತ್ತು ಕಾಶ್ಮೀರದ ಪೆನ್ಸಿಲ್ ಸ್ಲೇಟ್ ಉದ್ಯಮವು ಉತ್ತಮವಾಗಿ ನಡೆಯುತ್ತಿದೆ ಎಂದು ಮಂಜೂರ್ ಅಹ್ಮದ್ ಹೇಳಿದರು.
ಕಾರ್ಯಕ್ರಮದಲ್ಲಿ ನೀವು ಜಮ್ಮು ಮತ್ತು ಕಾಶ್ಮೀರದಲ್ಲಿ ಪೆನ್ಸಿಲ್ ಮತ್ತು ಸ್ಲೇಟ್ ವ್ಯಾಪಾರ ಪ್ರಸ್ತಾಪಿಸಿದಾಗಿನಿಂದ, ಪೆನ್ಸಿಲ್ ವ್ಯಾಪಾರವು ಚೆನ್ನಾಗಿ ನಡೆಯುತ್ತಿದೆ. ಸದ್ಯ ಇಲ್ಲಿ 200 ಮಂದಿ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಜನರಿಗೆ ಉದ್ಯೋಗ ನೀಡಲಾಗುವುದು ಎಂದರು.
ಹಿಮಾಲಯವನ್ನು ಕಸ ಮುಕ್ತ ಮಾಡುವಲ್ಲಿ ನಿರತರಾಗಿರುವ ಪ್ರದೀಪ್ ಸಾಂಗ್ವಾನ್ ಅವರ ಅಭಿಯಾನವು ಉತ್ತಮವಾಗಿ ನಡೆಯುತ್ತಿದೆ ಎಂದು ಹೇಳಿದರು. 2020 ರಲ್ಲಿ ಮನ್ ಕಿ ಬಾತ್‌ನಲ್ಲಿ ಪ್ರಸ್ತಾಪಿಸುವ ಮೊದಲು ಸಾಕಷ್ಟು ಸಮಸ್ಯೆ ಇತ್ತು. ಆದರೆ ಇದಾದ ನಂತರ ಜನರ ಬೆಂಬಲ ಸಿಕ್ಕಿತು ಮತ್ತು ಜನ ಸೇರುತ್ತಲೇ ಇದ್ದಾರೆ. ಒಂದು ವರ್ಷದಲ್ಲಿ ಮಾಡಿದ ಕೆಲಸ ಈಗ ಒಂದು ದಿನದಲ್ಲಿ ಆಗುತ್ತಿದೆ ಎಂದರು.
ಇದೇ ವೇಳೆ ತಮಿಳುನಾಡು ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಮಹಿಳೆಯರು ಇಲ್ಲಿನ ನದಿಗೆ ಮರುಜೀವ ನೀಡಿದ್ದಾರೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಕಮಲದ ನಾರುಗಳಿಂದ ಬಟ್ಟೆ ತಯಾರಿಸುವ ಮಣಿಪುರದ ವಿಜಯಶಾಂತಿ ದೇವಿ ಮಾತನಾಡಿದ್ದು, ಮೋದಿ ಅವರು ಈ ಬಗ್ಗೆ ಪ್ರಸ್ತಾಪಿಸಿದ್ದು, ಮಹಿಳೆಯರಿಗೆ ಹೆಚ್ಚಿನ ಉದ್ಯೋಗ ನೀಡಲಾಗಿದೆ ಎಂದು ಮಹಿಳೆ ಹೇಳಿದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications