ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಂಇಎಸ್, ಉದ್ಧ(ಟ)ವ್ ಠಾಕ್ರೆ ಇಷ್ಟು ಬೆಳೆಯಲು ಕಾರಣ ಬಿಜೆಪಿಯ ಸಲುಗೆ

|
Google Oneindia Kannada News

ಬೆಂಗಳೂರು, ಜ 21: ಸದಾ ಗಡಿವಿವಾದ ಕೆದಕುವ ಶಿವಸೇನೆ ಮತ್ತು ಎಂಇಎಸ್ ವಿರುದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಅವರು ಈ ಹಂತಕ್ಕೆ ಬೆಳೆಯಲು ಬಿಜೆಪಿಯ ಸಲುಗೆ ಕಾರಣ ಎನ್ನುವ ಅಭಿಪ್ರಾಯವನ್ನು ಎಚ್ಡಿಕೆ ಪಟ್ಟಿದ್ದಾರೆ.

ಈ ಸಂಬಂಧ ಕುಮಾರಸ್ವಾಮಿ ಮಾಡಿರುವ ಟ್ವೀಟ್ ಹೀಗಿದೆ, "ನಮ್ಮ ನೆಲ, ನಮ್ಮ ಭಾಷೆ, ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ ಹಾರಿಸುತ್ತೇವೆ. ಅದನ್ನು ಕೇಳಲು ಎಂಇಎಸ್‌, ಶಿವಸೇನೆಯವರು ಯಾವ ಊರ ದೊಣ್ಣೆ ನಾಯಕರು? ಇವರ ಬಾಧೆಯಾದರೂ ಏನು? ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವಿಗೆ ಇವರು ಇಂದು ನಡೆಸುತ್ತಿರುವ ಪ್ರತಿಭಟನೆ ಸಮಾಜವಿರೋಧಿ. ಇವರ ಮನಸ್ಸಲ್ಲಿರುವ ವಿಷ ದೇಶದ್ರೋಹಕ್ಕೆ ಸಮ"ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದು 'ಮಹಾ' ಮುಖಭಂಗದ ಸುದೀರ್ಘ ಕತೆ: ಏನಿದು ಉಭಯ ರಾಜ್ಯಗಳ ಗಡಿ ವಿವಾದ?ಇದು 'ಮಹಾ' ಮುಖಭಂಗದ ಸುದೀರ್ಘ ಕತೆ: ಏನಿದು ಉಭಯ ರಾಜ್ಯಗಳ ಗಡಿ ವಿವಾದ?

"ಕರ್ನಾಟಕದ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವುದಾಗಿ ಉದ್ಧ(ಟ)ವ ಠಾಕ್ರೆ ಹೇಳಿದ್ದರು. ಬೆಳಗಾವಿಯಲ್ಲಿ ಕಿಡಿಗೇಡಿಗಳು, ಸಮಾಜಘಾತುಕರು ನಡೆಸುತ್ತಿರುವ ಧ್ವಜವಿರೋಧಿ ಹೋರಾಟ ಬೆಂಬಲಿಸುವ ಮೂಲಕ ಶಿವಸೇನೆ ಠಾಕ್ರೆ ಇಚ್ಛೆಯನ್ನು ಜಾರಿಗೆ ತರಲು ಹೊರಟಿದೆ. ನ್ಯಾಯದ ಉದ್ದೇಶವಿಲ್ಲದ ಈ ಹೋರಾಟವನ್ನು ಸರ್ಕಾರ ಮುಲಾಜಿಲ್ಲದೇ ಹತ್ತಿಕ್ಕಬೇಕು"ಎಂದು ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.

Because Of BJP, MES And Shiv Sena Always Raise Border Issue With Karnataka, Said H D Kumaraswamy

"ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ಜಜ ತೆರವಿಗಾಗಿ ಎಂಇಎಸ್‌, ಶಿವಸೇನೆ ಇಷ್ಟು ಕುತಂತ್ರ ಮಾಡುತ್ತಿದ್ದರೂ, ಬಿಜೆಪಿ ಸರ್ಕಾರದ ಯಾವೊಬ್ಬ ಪ್ರತಿನಿಧಿಯಾಗಲಿ, ಕಾಂಗ್ರೆಸ್‌ನ ಯಾವ ನಾಯಕರಾಗಲಿ ಪ್ರತಿಕ್ರಿಯಿಸಿದ್ದನ್ನು ನಾನು ನೋಡಲಿಲ್ಲ. ಇದೇ ಸಲುಗೆಯಲ್ಲೇ ಉದ್ಧವ ಠಾಕ್ರೆ ಬೆಳಗಾವಿಯಂಥ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಮಾತಾಡಿದ್ದು"ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

"ಈ ಧ್ವಜ ವಿರೋಧಿ ಹೋರಾಟವನ್ನು ರಾಜ್ಯದ ಪ್ರತಿಯೊಬ್ಬರೂ ಪಕ್ಷಾತೀತವಾಗಿ ವಿರೋಧಿಸಬೇಕಾಗಿದೆ. ಕನ್ನಡದ ವಿಚಾರಕ್ಕೆ ಮಾತಾಡಲು, ಕನ್ನಡಕ್ಕೆ ಕೈ ಎತ್ತಲು ರಾಜ್ಯದ ನಾಯಕರು ರಾಜಕೀಯ ಮರೆಯಬೇಕು. ಪಕ್ಷ ನೋಡಬಾರದು, ಮಿತ್ರಪಕ್ಷವೆಂದು ಎಣಿಸಬಾರದು, ದೆಹಲಿ ಕಡೆಗೆ ನೋಡಬಾರದು. ಆಗ ಮಾತ್ರ ಇಂಥ ಆಕ್ರಮಣಕಾರಿ ಪ್ರವೃತ್ತಿಗಳನ್ನು ನಾವು ಹತ್ತಿಕ್ಕಲು ಸಾಧ್ಯ"ಎಂದು ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ಪಕ್ಷ ಸಂಘಟನೆ: ಹೊಸ ತಂತ್ರ ಪ್ರಯೋಗಿಸಲು ಮುಂದಾದ ಕುಮಾರಸ್ವಾಮಿ ಪಕ್ಷ ಸಂಘಟನೆ: ಹೊಸ ತಂತ್ರ ಪ್ರಯೋಗಿಸಲು ಮುಂದಾದ ಕುಮಾರಸ್ವಾಮಿ

Recommended Video

ಬಿಎಂಟಿಸಿ ಬಸ್ ಅಲ್ಲಿ ಕಾಂಗ್ರೆಸ್ಸ್ ಕಾರ್ಯಕರ್ತರು!! | Oneindia Kannada

"ಬೆಳಗಾವಿಯಲ್ಲಿ ಇಂದು ಕನ್ನಡ ಧ್ವಜ ವಿರೋಧಿಸಿ ಎಂಇಎಸ್‌, ಶಿವಸೇನೆ ನಡೆಸುವ ಪ್ರತಿಭಟನೆಯನ್ನು ಸಮಾಜ ವಿದ್ರೋಹಿ, ದೇಶದ್ರೋಹಿ, ಘಾತಕ ಕೃತ್ಯವೆಂದು ಹೇಳಲು ಅಡ್ಡಿಯಿಲ್ಲ. ದೇಶದ ಸಾಮರಸ್ಯಕ್ಕೆ, ಭಾಷಾ ಸೌಹಾರ್ದತೆಗೆ ಈ ಹೋರಾಟ ವಿಷ ಹಿಂಡಲಿದೆ ಎಂಬುದರಲ್ಲಿ ಎರಡು ಮಾತೂ ಇಲ್ಲ. ಇದರ ಹಿಂದೆ ಮಹಾರಾಷ್ಟ್ರ ಇದೆ ಎಂಬುದಕ್ಕೆ ಸಾಕ್ಷಿಯೂ ಬೇಕಿಲ್ಲ"ಎನ್ನುವ ಎಚ್ಚರಿಕೆಯನ್ನು ಕುಮಾರಸ್ವಾಮಿ ನೀಡಿದ್ದಾರೆ.

English summary
Because Of BJP, MES And Shiv Sena Always Raise Border Issue With Karnataka, Said H D Kumaraswamy,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X