ಉಚಿತ ವಿದ್ಯುತ್‌ ನೀಡುವ ಮುನ್ನ ಜನತೆಗೆ ಬೆಲೆ ಏರಿಕೆ ಶಾಕ್‌ ನೀಡಿದ ಸರ್ಕಾರ!

ಬೆಂಗಳೂರು, ಜೂನ್‌ 3: ಗೃಹಜ್ಯೋತಿ ಯೋಜನೆಯಡಿ ರಾಜ್ಯ ಜನತೆಗೆ 200 ಯುನಿಟ್‌ವರೆಗೆ ಉಚಿತ ವಿದ್ಯುತ್‌ ನೀಡಿದ ರಾಜ್ಯ ಸರ್ಕಾರ ಅದು ಜಾರಿಗೆ ಬರುವ ಮುನ್ನವೇ ಈಗ ಬೆಲೆ ಏರಿಕೆ ಮಾಡಿ ಶಾಕ್ ನೀಡಿದೆ.

ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿ ಈಗ ಬೆಲೆ ಏರಿಕೆಯನ್ನೂ ಮಾಡಿದೆ. ಮತ್ತೆ ವಿದ್ಯುತ್ ದರ ಏರಿಸುವ ಮೂಲಕ ಮತ್ತೆ ಜನರ ಜೇಬಿನಿಂದ ಹಣ ಮತ್ತೆ ಖಜಾನೆ ಸೇರುವಂತೆ ಮಾಡಿಕೊಂಡಿದೆ.

free electricity

ಸರ್ಕಾರವು ತನ್ನ ಆದಾಯದ ಕೊರತೆ ಮತ್ತು ನಷ್ಟವನ್ನು ಸರಿದೂಗಿಸಿಕೊಳ್ಳಲು ಪ್ರತಿ ಯೂನಿಟ್ ದರವನ್ನು ಏರಿಸಿ ಇಂಧನ ಇಲಾಖೆ ಆದೇಶ ಹೊರಡಿಸಿದೆ. ಅದರಂತೆ, ಬೆಸ್ಕಾಂ ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್‌ಗೆ 51 ಪೈಸೆ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ. ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ 50 ಪೈಸೆ ಏರಿಕೆ ಮಾಡಲಾಗಿದೆ.

ಇಂಧನ ಹೊಂದಾಣಿಕೆ ವೆಚ್ಚವನ್ನು ಮರುಪಡೆಯಲು ಮಾಡಿದ ವಾರ್ಷಿಕ ಪರಿಷ್ಕರಣೆಯ ಭಾಗವಾಗಿದೆ ಎಂದು ಇಲಾಖೆ ಹೇಳಿದೆ. ಆದೇಶವು ಎಲ್ಲಾ ಎಸ್ಕಾಂಗಳಿಗೆ ಅನ್ವಯಿಸಲಿದ್ದು, ಇಂಧನ ಹೊಂದಾಣಿಕೆ ವೆಚ್ಚದಲ್ಲಿ ಜುಲೈ 1 ರಿಂದ ಡಿಸೆಂಬರ್ 31, 2023 ರವರೆಗೆ ಬದಲಾವಣೆ ಇರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

ಜುಲೈ 1 ರಿಂದ ಗ್ರಾಹಕರು ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ. ಮೆಸ್ಕಾಂ (ಮಂಗಳೂರು) ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್‌ಗೆ 47 ಪೈಸೆ ಮತ್ತು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ಗೆ 46 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ. ಸೆಸ್ಕಾಂ (ಮೈಸೂರು) ಗ್ರಾಹಕರು ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ಗೆ 41 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ.

free electricity

ಹೆಸ್ಕಾಂ (ಹುಬ್ಬಳ್ಳಿ-ಧಾರವಾಡ) ಗ್ರಾಹಕರು ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ಗೆ 50 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ. ಗೆಸ್ಕಾಂ (ಕಲಬುರಗಿ) ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್ಗೆ 34 ಪೈಸೆ ಮತ್ತು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಪ್ರತಿ ಯೂನಿಟ್ಗೆ 33 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ. ಈ ನಡುವೆ ಬೆಸ್ಕಾಂ ಕೂಡ ವಿದ್ಯುತ್ ದರ ಪರಿಷ್ಕರಿಸಲು ಕೆಇಆರ್ಸಿ ಮುಂದೆ ಪರಿಶೀಲನಾ ಅರ್ಜಿ ಸಲ್ಲಿಸಿದೆ.

ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ತಮ್ಮ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲ ಗ್ಯಾರಂಟಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರವಷ್ಟೇ ಅಸ್ತು ಎಂದಿದ್ದರು. ಬಡವರು ಹಾಗೂ ಮಧ್ಯಮ ವರ್ಗದವರಿಗೆ ಸಿಹಿಸುದ್ದಿ ನೀಡಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 200 ಯುನಿಟ್‌ ವಿದ್ಯುತ್‌ ಅನ್ನು ಯಾವುದೇ ಜಾತಿ, ಧರ್ಮ, ಭಾಷೆಗಳ ತಾರತಮ್ಯವಿಲ್ಲದೆ ಜಾರಿ ಮಾಡುತ್ತಿದ್ದೇವೆ ಎಂದು ಹೇಳಿದ್ದರು.

200 ಯುನಿಟ್‌ ಬರಲಿಲ್ಲ ಎಂದರೆ ಶುಲ್ಕ ಇರಲ್ಲ. ಈ ತಿಂಗಳು ಬಿಲ್‌ ತಯಾರು ಆಗಿರುವುದರಿಂದ ಮುಂದಿನ ತಿಂಗಳು ಜುಲೈ 1ರಿಂದ ಇದು ಜಾರಿ ಬರಲಿದೆ. ಇಲ್ಲಿವರೆಗೂ (ಜುಲೈ) ಉಳಿಸಿರುವ ಬಾಕಿಯನ್ನು ಅವರೇ ಕಟ್ಟಬೇಕು. ಇಲ್ಲಿ ಬಾಡಿಗೆದಾರರಿಗೂ ಉಚಿತ ವಿದ್ಯುತ್‌ ಅನ್ವಯವಾಗುತ್ತದೆ ಎಂದು ಪ್ರತಿಕಾಗೋಷ್ಟಿಯಲ್ಲಿ ತಿಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+