ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲ್ಯಾಣ ಕರ್ನಾಟಕಕ್ಕೆ ಭರ್ಜರಿ ಕೊಡುಗೆ ಕೊಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!

|
Google Oneindia Kannada News

ಬೆಂಗಳೂರು, ಸೆ. 17: ಕಲ್ಯಾಣ ಕರ್ನಾಟಕಕ್ಕೆ ಭರ್ಜರಿ ಕೊಡುಗೆ ನೀಡುವುದಾಗಿ ಬಜೆಟ್‌ಗೂ ಮೊದಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ದಿನಾಚರಣೆ ಹಿನ್ನೆಲೆಯಲ್ಲಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ದಾರೆ.

ಮುಂದಿನ ಎರಡು ತಿಂಗಳ ಒಳಗೆ ಕಲ್ಯಾಣ ಕರ್ನಾಟಕ ಹೂಡಿಕೆದಾರರ ಸಮಾವೇಶ ನಡೆಸಲಾಗುವುದು. ಕಲಬುರಗಿಯಲ್ಲಿ ಉದ್ಯೋಗ ಸೃಷ್ಟಿ ಬಹಳ ಮುಖ್ಯ. ಸಣ್ಣ, ಮಧ್ಯಮ ಮತ್ತು ಭಾರಿ ಉದ್ಯಮಗಳ ಸೃಷ್ಟಿಗೆ ವಿಪುಲ ಅವಕಾಶಗಳಿವೆ ಎಂದು ಇದೇ ವೇಳೆ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅವರ ನೇತೃತ್ವದಲ್ಲಿ ಕರ್ನಾಟಕದ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹೂಡಿಕೆದಾರರ ಸಭೆ ನಡೆಸಿ ಚರ್ಚಿಸಿ, ಅನುಮೋದನೆಗಳನ್ನು ನೀಡಲಾಗುವುದು. ಇಲ್ಲಿ ದೊಡ್ಡ ಕೈಗಾರಿಕೆಗಳು ಸ್ಥಾಪನೆಯಾಗುವುದು ಬಹಳ ಅಗತ್ಯವಿದೆ. ಅದರಿಂದ ಸಣ್ಣ ಉದ್ದಿಮೆಗಳೂ ಬೆಳೆಯುತ್ತವೆ. ಹಾಗೂ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಸಿಮೆಂಟ್ ಕಾರ್ಖಾನೆಗಳ ಮಾಲೀಕರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಖಡಕ್ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.

ಸ್ಥಳೀಯರಿಗೆ ಉದ್ಯೋಗ ಕೊಡಲೇಬೇಕು!

ಸ್ಥಳೀಯರಿಗೆ ಉದ್ಯೋಗ ಕೊಡಲೇಬೇಕು!

ಸಿಮೆಂಟ್ ಉದ್ಯಮ ಇಲ್ಲಿ ಬಹಳ ಇದೆ. ಆದರೆ ಇದರ ಲಾಭ ಸ್ಥಳೀಯರಿಗೆ ಆಗುತ್ತಿಲ್ಲ. ಆದ್ದರಿಂದ ಸಿಮೆಂಟ್ ತಯಾರಕರನ್ನು ಕರೆಸಿ, ಎಷ್ಟು ಜನ ಸ್ಥಳೀಯರಿಗೆ ಉದ್ಯೋಗ ನೀಡಿದ್ದೀರಿ? ಎಂದು ಮಾಹಿತಿ ಪಡೆದುಕೊಳ್ಳಲಾಗುವುದು. ಕಾನೂನಾತ್ಮಕವಾಗಿ ಬರುವ ಲಾಭದಲ್ಲಿ ಸಿ.ಎಸ್.ಆರ್. ಅನುದಾನ ಕಲ್ಯಾಣ ಕರ್ನಾಟಕಕ್ಕೆ ದೊರೆಯಬೇಕು. ಆದರೆ ಇದು ಆಗುತ್ತಾ ಇಲ್ಲ. ಕೋವಿಡ್ ಸಂದರ್ಭದಲ್ಲಿಯೂ ನಿರೀಕ್ಷೆಗೆ ತಕ್ಕಂತೆ ನೆರವು ನೀಡಿಲ್ಲ. ಆದರೆ ಮುಂದೆ ಹೀಗೆ ನಡೆಯುವುದಿಲ್ಲ. ಯಾವ ಭೂಮಿಯಿಂದ ನೀವು ಲಾಭ ಪಡೆದಿದ್ದೀರೋ, ಆ ನೆಲಕ್ಕೆ, ಅಲ್ಲಿನ ಜನರಿಗೆ ಸಹಾಯ ಮಾಡಲೇಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಡಾ. ನಂಜುಂಡಪ್ಪ ವರದಿಗೆ ಹೊಸ ರೂಪ

ಡಾ. ನಂಜುಂಡಪ್ಪ ವರದಿಗೆ ಹೊಸ ರೂಪ

ನಂಜುಂಡಪ್ಪ ವರದಿಯನ್ನು ಪುನರ್ ಪರಿಶೀಲಿಸಲಾಗುತ್ತಿದೆ. ಮುಂದಿನ 5 ವರ್ಷಗಳಿಗೆ ವಿಸ್ತರಿಸಿ ಪ್ರಸ್ತುತ ಸವಾಲುಗಳನ್ನು ಎದುರಿಸಲು ಅನುಕೂಲವಾಗುವಂತೆ ಅದಕ್ಕೆ ಹೊಸ ರೂಪ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ನೈಸರ್ಗಿಕ ಸಂಪತ್ತು, ನದಿಗಳನ್ನು ಕೃಷಿಗೆ ಬಳಕೆ ಮಾಡುವ ಯೋಜನೆಗಳು, ಕೃಷ್ಣಾ ಮೇಲ್ದಂಡೆ - 3 ನೇ ಹಂತದಲ್ಲಿ ಈ ಭಾಗದ ಯೋಜನೆಗಳನ್ನು ಪೂರ್ಣಗೊಳಿಸುವುದು. ಕಲಬುರಗಿಯಲ್ಲಿ ಟೆಕ್ಸ್‌ಟೈಲ್ ಪಾರ್ಕ್, ಯಾದಗಿರಿಯಲ್ಲಿ ಫಾರ್ಮಾ ಪಾರ್ಕ್ ಸ್ಥಾಪನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಬಳಿ ಚರ್ಚಿಸಲಾಗುವುದು ಎಂದ ಸಿಎಂ ಬೊಮ್ಮಾಯಿ, ಪ್ರತಿ 3 ತಿಂಗಳಿಗೊಮ್ಮೆ ಕೆ.ಕೆ.ಡಿ.ಬಿ ಹಾಗೂ ನಂಜುಂಡಪ್ಪ ವರದಿ ಯೋಜನೆಗಳ ಅನುಷ್ಠಾನದ ಪ್ರಗತಿಯನ್ನು ಖುದ್ದು ತಾವೇ ಮಾಡುವುದಾಗಿ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಮಂಡಳಿಗೆ ನೇಮಕಾತಿ

ಕಲ್ಯಾಣ ಕರ್ನಾಟಕ ಮಂಡಳಿಗೆ ನೇಮಕಾತಿ

ನೇಮಕಾತಿ ಎಂದಾಗ ಈ ಭಾಗದಲ್ಲಿ ನೇಮಕಾತಿಯನ್ನು ಮಾಡಬೇಕಾದ ಪ್ರಮಾಣದಲ್ಲಿ ಮಾಡಲಾಗಿಲ್ಲ. ಅದನ್ನು ಪೂರ್ಣಗೊಳಿಸುವ ಸಂಕಲ್ಪ ನಮ್ಮ ಸರ್ಕಾರದ್ದು. ಡಿ ವರ್ಗದಿಂದ ಹಿಡಿದು, ಸಿ. ಬಿ ಮತ್ತು ಎ ವರ್ಗದ ಹುದ್ದೆಗಳ ನೇಮಕಾತಿ ಮಾಡಲಾಗುವುದು. ಎಲ್ಲಕ್ಕಿಂತ ಹೆಚ್ಚಾಗಿ ಕಲ್ಯಾಣ ಕರ್ನಾಟಕ ಮಂಡಳಿಯಲ್ಲಿ ನೇಮಕಾತಿ ಆಗಬೇಕಿದೆ. ಕಲ್ಯಾಣ ಕರ್ನಾಟಕ ಮಂಡಳಿಯನ್ನು ಬಲಪಡಿಸಿ, ಅದಕ್ಕೆ ಶಾಶ್ವತವಾಗಿ ಒಬ್ಬ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು.

372 ಜೆ ಅನುಷ್ಠಾನ ಮಾಡಲು ಇರುವ ಸೆಲ್ ಕಚೇರಿಯನ್ನು ಕಲಬುರಗಿಯಲ್ಲಿ ಸ್ಥಾಪನೆ ಮಾಡಲಾಗುವುದು. ಜೊತೆಗೆ ಅದರಿಂದ ಖರ್ಚಾಗಿರುವ ಹಣದ ಸಾರ್ಥಕತೆ ಎಷ್ಟು? ಎಷ್ಟು ವಿದ್ಯಾರ್ಥಿಗಳಿಗೆ ಲಾಭ ಆಗಿದೆ? ಮಾನವ ಸಂಪನ್ಮೂಲ ಅಭಿವೃದ್ಧಿ ಏನಾಗಿದೆ? ಆರೋಗ್ಯ ಕ್ಷೇತ್ರ, ಉದ್ಯೋಗ, ಕೈಗಾರಿಕೆಗಳು ಏನಾಗಿದೆ ಎಂಬ ಮೌಲ್ಯಮಾಪನ ಮಾಡಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ವಿವರಿಸಿದ್ದಾರೆ.

Recommended Video

ಸ್ಟೇಡಿಯಂನಲ್ಲಿ IPL ಮ್ಯಾಚ್ ನೋಡ್ಬೇಕಾ? ಹಾಗಾದ್ರೆ ತಡಮಾಡ್ದೆ ಟಿಕೆಟ್ ಬುಕ್ ಮಾಡಿ | Oneindia Kannada
ಮುಂದಿನ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ!

ಮುಂದಿನ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ!

ಕಲ್ಯಾಣ ಕರ್ನಾಟಕ ಮಂಡಳಿಗೆ ಒದಗಿಸಲಾಗಿರುವ 8 ಸಾವಿರ ಕೋಟಿಗೂ ಹೆಚ್ಚು ಅನುದಾನದಲ್ಲಿ ಕೇವಲ 6 ಸಾವಿರ ಕೋಟಿ ರೂ.ಗಳು ವೆಚ್ಚವಾಗಿದೆ. ಇನ್ನು ಈ ವರ್ಷ 2 ಸಾವಿರ ಕೋಟಿ ರೂ. ವೆಚ್ಚವಾಗಬೇಕಿದೆ. ಸುಮಾರು 13 ಸಾವಿರ ಕೋಟಿ ರೂ. ಕಾಮಗಾರಿಗಳು ಪ್ರಗತಿಯಲ್ಲಿದ್ದು, ಪೂರ್ಣವಾಗಬೇಕಿದೆ.

ಈ ಭಾಗಕ್ಕೆ ಮುಂದಿನ ಆಯವ್ಯಯದಲ್ಲಿ 1,500 ಕೋಟಿ ರೂ. ಖರ್ಚು ಮಾಡಿದರೆ ಹೆಚ್ಚಿನ ಅನುದಾನ ನೀಡುವ ಕರಾರು ಹಾಕಿದ್ದೇನೆ. ಅಷ್ಟು ಹಣವನ್ನು ಉಪಯೋಗಿಸಿದರೆ, 1,500 ಕೋಟಿಗೆ ವಿಶೇಷ ಕಾರ್ಯಕ್ರಮವನ್ನು ರೂಪಿಸಿ, ಆಸ್ತಿ ಸೃಜನೆ, ಮಾನವ ಸಂಪನ್ಮೂಲ ಅಭಿವೃದ್ಧಿಗೆ ವ್ಯಯಿಸಿದರೆ, ಇನ್ನಷ್ಟು ಅನುದಾನ ನೀಡಲು ಸಿದ್ಧವಿರುವುದಾಗಿ ಬೊಮ್ಮಾಯಿ ತಿಳಿಸಿದ್ದಾರೆ.

ರಾಜಕಾರಣಿಯ ಕಣ್ಣು ಮುಂದಿನ ಚುನಾವಣೆ ಮೇಲಿರುತ್ತದೆ. ಒಬ್ಬ ಮುತ್ಸದ್ದಿಯ ಕಣ್ಣು ಮುಂದಿನ ಜನಾಂಗದ ಮೇಲಿರುತ್ತದೆ. ಕಲ್ಯಾಣ ಕರ್ನಾಟಕದ ಕೆಲಸಗಳು ಮುಂದಿನ ಜನಾಂಗಕ್ಕೂ ಒಳಿತಾಗುವ ನಿಟ್ಟಿನಲ್ಲಿ ನಮ್ಮ ಯೋಜನೆ ಮತ್ತು ಯೋಚನೆಗಳಿರಬೇಕು ಎಂದು ತಿಳಿಸಿದರು.

English summary
Even before the Budget, Chief Minister Basavaraj Bommai had announced that he would make a grand contribution to the Kalyana Karnataka. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X