ಕಂಡಕ್ಟರ್ ಹಲ್ಲೆ ಪ್ರಕರಣ: ಕರ್ನಾಟಕ ಸ್ಪಷ್ಟ ನಿಲುವು ತೆಗೆದುಕೊಳ್ಳಲಿ ಎಂದ ಮಹಾರಾಷ್ಟ್ರ!

Maharashtra vs Karnataka: ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವೆ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಎರಡೂ ರಾಜ್ಯಗಳ ನಡುವೆ ಬಸ್‌ ಸಂಚಾರ ಈಗಾಗಲೇ ಬಹುತೇಕ ಸ್ಥಗಿತಗೊಂಡಿದೆ. ಕರ್ನಾಟಕದ ಕೆಎಸ್‌ಆರ್‌ಟಿಸಿ ಬಸ್‌ ಕಂಡಕ್ಟರ್‌ ಮೇಲೆ ಹಲ್ಲೆ ಮಾಡಿರುವ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು. ಎರಡೂ ರಾಜ್ಯಗಳ ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ಇದೆ. ಅಲ್ಲದೆ ಎರಡೂ ರಾಜ್ಯಗಳ ಬಸ್‌ಗಳ ಮೇಲೆ ದಾಳಿ ಮಾಡಲಾಗಿದ್ದು, ಕಪ್ಪು ಮಸಿ ಬಳಿಯಲಾಗಿದೆ. ರಾಜ್ಯಗಳ ನಡುವೆ ಪರಿಸ್ಥತಿ ಬಿಗಡಾಯಿಸುತ್ತಿದೆ. ಈ ರೀತಿ ಇರುವಾಗಲೇ ಕರ್ನಾಟಕ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎನ್ನುವ ಆಗ್ರಹ ಮಹಾರಾಷ್ಟ್ರದಿಂದ ಬಂದಿದೆ. ರಾಜ್ಯ ಸರ್ಕಾರವು ಈ ನಿರ್ಧಾರ ತೆಗೆದುಕೊಂಡರೆ ಮಾತ್ರ ಮುಂದಿನದರ ಬಗ್ಗೆ ವಿಚಾರ ಮಾಡಬಹುದು ಎಂದು ಮಹಾರಾಷ್ಟ್ರದ ಸಚಿವರು ಹೇಳಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಭಾಷಾ ವಿಚಾರವಾಗಿ ಶುರುವಾಗಿರುವ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಮಹಾರಾಷ್ಟ್ರ ಸರ್ಕಾರವು ಕರ್ನಾಟಕವೇ ಈ ವಿಚಾರದಲ್ಲಿ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದೆ. ಕರ್ನಾಟಕ ಸರ್ಕಾರವು ನಮ್ಮೊಂದಿಗೆ ಈ ವಿಚಾರವಾಗಿ ಚರ್ಚೆ ಮಾಡುವ ವರೆಗೂ ನಾವು ಮುಂದಿನ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ. ಮುಂದುವರಿದು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಸರ್ಕಾರಿ ಬಸ್ ಸೇವೆಗಳನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದೆ. ಅಲ್ಲಿನ ಸರ್ಕಾರ ಈ ಬಗ್ಗೆ ನಮ್ಮೊಂದಿಗೆ ಚರ್ಚೆ ಮಾಡಿದರೆ ಮಾತ್ರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್‌ನಾಯಕ್ ಅವರು ಹೇಳಿದ್ದಾರೆ.

Belagavi Conductor Attack Case Maharashtra Asks Karnataka to Take Clear Stand

ಈಗಾಗಲೇ ಎರಡು ರಾಜ್ಯಗಳ ನಡೆದಿರುವ ಘಟನೆಯ ಬಗ್ಗೆ ಕರ್ನಾಟಕ ಸರ್ಕಾರವು ಸ್ಪಷ್ಟವಾದ ನಿಲುವನ್ನು ತೆಗೆದುಕೊಳ್ಳಬೇಕು. ಅಲ್ಲದೆ ಈ ವಿಚಾರವಾಗಿ ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತನಾಡುವ ವರೆಗೆ ನಾವು ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ. ಅಂದರೆ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬಸ್‌ ಸೇವೆಯನ್ನು ಪ್ರಾರಂಭಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಶಿವಸೇನಾ & ಎಂಇಎಸ್ ಕಾರ್ಯಕರ್ತರ ಪುಂಡಾಟ: ಇನ್ನು ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಭಾಗದಲ್ಲಿ ಶಿವಸೇನೆ ಹಾಗೂ ಎಂಇಎಸ್‌ ಪುಂಡರ ಪುಂಡಾಟ ಹೆಚ್ಚಾಗಿದೆ. ಈ ಪುಂಡರು ಕರ್ನಾಟಕದ ಸರ್ಕಾರಿ ಬಸ್‌ಗಳಿಗೆ ಮಸಿ ಬಳಿಯುವುದು ಹಾಗೂ ಸರ್ಕಾರಿ ಬಸ್‌ ಕಂಡಕ್ಟರ್‌ ಹಾಗೂ ಬಸ್‌ ಡ್ರೈವರ್‌ಗಳಿಗೆ ಕಿರಿಕಿರಿ ಮಾಡುವುದು ಮುಂದುವರಿದಿದೆ. ಇನ್ನು ಪುಣೆಯಲ್ಲಿ ಶಿವಸೇನಾ (ಯುಬಿಟಿ) ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಅಲ್ಲದೆ ಕರ್ನಾಟಕದ ನಂಬರ್ ಪ್ಲೇಟ್‌ ಇರುವ ಸರ್ಕಾರಿ ಹಾಗೂ ಇತರ ಬಸ್‌ಗಳಿಗೆ ಕಪ್ಪು ಮಸಿ ಹಚ್ಚುತ್ತಿದ್ದಾರೆ.

ಬೆಳಗಾವಿ ವಿವಾದಕ್ಕೆ ಕಾರಣವೇನು ?

ಇನ್ನು ಬೆಳಗಾವಿಯಲ್ಲಿ ನಡೆದಿರುವ ಘಟನೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಬೆಳಗಾವಿಯ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ವಾಯವ್ಯ ಸಾರಿಗೆ ಸಂಸ್ಥೆಯ ಬಸ್‌ ಡ್ರೈವರ್‌ & ಕಂಡಕ್ಟರ್‌ ಮೇಲೆ ಮರಾಠಿ ಭಾಷಿಕರು ಹಲ್ಲೆ ಮಾಡಿದ ಮೇಲೆ ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವೆ ಬಸ್‌ ಸಂಚಾರ ವ್ಯತ್ಯಾಸವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+