ಕುಂದಾ ನಗರಿ ಬೆಳಗಾವಿಯಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ಬೆಳಗಾವಿ, ಮೇ 06: ಮಂಗಳವಾರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದರಲ್ಲಿ ಕುಂದಾ ನಗರಿ ಬೆಳಗಾವಿಯೂ ಸಹ ಸೇರಿದೆ. ಬೆಳಗಾವಿ ಜಿಲ್ಲೆಯಲ್ಲಿ 1923788 ಮತದಾರರಿದ್ದಾರೆ. ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಮತ್ತು ಕಾಂಗ್ರೆಸ್‌ನಿಂದ ಮೃಣಾಲ್ ಹೆಬ್ಬಾಳ್ಕರ್ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು.

ಮೇ 7ರಂದು ಮತದಾನ ನಡೆಯಲಿದ್ದು, ಸುಗಮ‌ ಮತ್ತು ಶಾಂತಿಯುತ ಮತದಾನ ನಡೆಸಲು ಎಲ್ಲ ರೀತಿಯ ಸಿದ್ಧತೆಗಳನ್ನು‌ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

Belagavi Lok Sabha Seat All Set For Voting On May 7th

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 9,57,559 ಪುರುಷ ಮತದಾರರು, 9,66,134 ಮಹಿಳೆಯರು, 95 ಇತರೆ ಸೇರಿದಂತೆ 19,23,788 ಮತದಾರರಿದ್ದಾರೆ. ಅದೇ ರೀತಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ 8,85,200 ಪುರಷರು, 8,76,414 ಮಹಿಳೆಯರು ಹಾಗೂ 80 ಇತರೆ ಮತದಾರರು ಸೇರಿದಂತೆ ಒಟ್ಟು 1761694 ಮತದಾರರಿದ್ದಾರೆ.

ಚುನಾವಣೆಗೆ ಸಕಲ ಸಿದ್ಧತೆ: ಮಂಗಳವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದೆ. ಚುನಾವಣಾ ಆಯೋಗ ಅನುಮೋದಿಸಿರುವ ಗುರುತಿನ ಚೀಟಿಗಳನ್ನು ತೋರಿಸಿ ಮತದಾರರು ತಮ್ಮ ಮತ ಚಲಾಯಿಸಬಹುದು. ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ) ಮತ್ತು ಸಾರ್ವಜನಿಕ ವಲಯದ ಉದ್ಯಮಗಳಿಗೆ ಮೇ 7ರ ಮಂಗಳವಾರ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ವ್ಯಾಪಾರಿ, ಉದ್ಯಮಗಳು ಕೈಗಾರಿಕೆಗಳು ಮತ್ತು ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ಅಧಿಕಾರಿ/ ಸಿಬ್ಬಂದಿಗಳು ಅಥವಾ ದಿನಗೂಲಿ ವೇತನದಲ್ಲಿ ಕೆಲಸ ಮಾಡುವ ಮತದಾರರು ತಮ್ಮ ಮತ ಚಲಾಯಿಸಲು ಅನುಕೂಲವಾಗುವಂತೆ ಮಾಡಿಕೊಡಲು ಆರ್‌ಪಿ ಕಾಯ್ದೆ 1951 ರ ಸೆಕ್ಷನ್ 135 ಬಿ ಪ್ರಕಾರ ಪಾವತಿಸಿದ ರಜೆಯನ್ನು ಮಂಜೂರು ಮಾಡಲು ಆದೇಶಿಸಲಾಗಿದೆ.

ಮದ್ಯ ಮಾರಾಟವನ್ನು ನಿಷೇಧಿಸಿ ಆದೇಶಿಸಲಾಗಿದೆ. ಚುನಾವಣಾ ಪ್ರಚಾರಕ್ಕಾಗಿ ಕ್ಷೇತ್ರದ ಹೊರಗಿನಿಂದ ಬಂದಿರುವ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಪದಾಧಿಕಾರಿಗಳು, ಸ್ಟಾರ್ ಪ್ರಚಾರಕರು, ಆ ಕ್ಷೇತ್ರದ ಮತದಾರರಲ್ಲದ ರಾಜಕೀಯ ವ್ಯಕ್ತಿಗಳು ಕ್ಷೇತ್ರವನ್ನು ತೊರೆಯಬೇಕು ಎಂದು ಸೂಚನೆ ನೀಡಲಾಗಿದೆ.

ಚುನಾವಣಾ ಆಯೋಗದ ನಿರ್ದೇಶನದಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು, ಚುನಾವಣಾ ಆಡಳಿತ/ ಪೊಲೀಸ್ ಆಡಳಿತವು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬಹುದಾಗಿದೆ. ಇದಕ್ಕಾಗಿ ಕಲ್ಯಾಣ ಮಂಟಪ/ ಸಮುದಾಯ ಭವನ ಇತ್ಯಾದಿಗಳನ್ನು ಪರಿಶೀಲಿಸಲಾಗುತ್ತಿದೆ.

ಈ ಆವರಣದಲ್ಲಿ ಯಾರಾದರೂ ಹೊರಗಿನವರಿಗೆ ವಸತಿ ಕಲ್ಪಿಸಲಾಗಿದೆಯೇ? ಎಂದು ಪರಿಶೀಲಿಸಲು ಸೂಚಿಸಲಾಗಿದೆ. ಕ್ಷೇತ್ರದ ಗಡಿಗಳಲ್ಲಿ ಚೆಕ್ ಪೋಸ್ಟಗಳನ್ನು ಸ್ಥಾಪಿಸಿ ಕ್ಷೇತ್ರದ ಹೊರಗಿನಿಂದ ಬರುವ ವಾಹನಗಳ ಚಲನವಲನದ ನಿಗಾವಹಿಸಲಾಗಿದೆ. ಆಯಾ ಕ್ಷೇತ್ರದ ಮತದಾರರೇ ಅಥವಾ ಇಲ್ಲವೇ ಎಂಬುದನ್ನು ಕಂಡುಹಿಡಿಯಲು ಅವರ ಗುರುತಿನ ಚೀಟಿಗಳನ್ನು ಪರಿಶೀಲಿಸಲಾಗುತ್ತಿದೆ.

ಮತದಾನದ ದಿನ ಮುದ್ರಣ ಅಥವಾ ವಿದ್ಯುನ್ಮಾನ ಮಾಧ್ಯಮ ಸೇರಿದಂತೆ ಯಾವುದೇ ಮಾಧ್ಯಮಗಳಲ್ಲಿ ಚುನಾವಣಾ ಸಮೀಕ್ಷೆಗಳು ಸೇರಿದಂತೆ ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ರೀತಿಯ ಸಮೀಕ್ಷೆಗಳನ್ನು ಮಾಡಬಾರದು ಎಂದು ಸೂಚನೆ ನೀಡಲಾಗಿದೆ.

ಮತದಾನದ ಕುರಿತು ಜನಾಭಿಪ್ರಾಯ ಸಂಗ್ರಹ, ಫಲಿತಾಂಶಗಳು ಅಥವಾ ಯಾವುದೇ ಇತರೆ ರೀತಿಯ ಸಮೀಕ್ಷೆಯ ಫಲಿತಾಂಶಗಳು ಸೇರಿದಂತೆ ಯಾವುದೇ ಚುನಾವಣಾ ವಿಷಯವನ್ನು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರದರ್ಶಿಸುವುದು/ ಪ್ರಕಟಿಸುವುದು ದೇಶದಲ್ಲಿ ನಡೆಯುತ್ತಿರುವ ಒಟ್ಟು 7 ಹಂತಗಳ ಮತದಾನ ಮುಗಿಯುವವರೆಗೆ ನಿಷೇಧಿಸಲಾಗಿದೆ.

ಬಿಸಿಲಿನ ತಾಪ: ಬೇಸಿಗೆಯ ಬಿಸಿಲಿನ ಝಳದ ನಡುವೆಯೇ ಮತದಾನ ಮಾಡಬೇಕಿದೆ. ಮತಗಟ್ಟೆಗಳಲ್ಲಿ ಬಿಸಿಲಿನ ತಾಪ ಜನರಿಗೆ ತಾಕದಂತೆ ಅನುಕೂಲವಾಗುವಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮತಗಟ್ಟೆಗಳಲ್ಲಿ ಕುಡಿಯುವ ನೀರು, ವಿದ್ಯುತ್, ಪೀಠೋಪಕರಣಗಳು ಪುರುಷರು ಮತ್ತು ಮಹಿಳೆಯರಿಗಾಗಿ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮತ್ತು ಮತದಾರರಿಗೆ ಸಹಾಯವಾಗಲು ಸಂಕೇತ ಫಲಕಗಳನ್ನು ಅಳವಡಿಸಲಾಗಿದೆ. ಮತಗಟ್ಟೆಯ ಅಕ್ಕಪಕ್ಕದ ಕೊಠಡಿಗಳನ್ನು ವಿಶ್ರಾಂತಿ ಕೊಠಡಿಗಳನ್ನಾ ಮಾಡಲಾಗಿದೆ. ಮತಗಟ್ಟೆಯ ಆವರಣದಲ್ಲಿ ಶೂಶ್ರೂಷಕರು/ ಆಶಾ ಕಾರ್ಯಕರ್ತರೊಂದಿಗೆ ವೈದ್ಯಕೀಯ ಕಿಟ್‌ಗಳ ವ್ಯವಸ್ಥೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+