ಸ್ವಾಮೀಜಿಯಾಗಲಿ, ಯಾರಾದರೂ ಆಗಲಿ ಕಾನೂನು ಒಂದೇ: ಲಾಠಿಚಾರ್ಜ್ ಸಮರ್ಥಿಸಿಕೊಂಡ ಸಿಎಂ
ಬೆಳಗಾವಿ ಸುವರ್ಣಸೌಧದ ಮುಂದೆ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿಚಾರ್ಜ್ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಮಾಹಿತಿ ಹಂಚಿಕೊಂಡಿದ್ದಾರೆ. ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.
ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ಯಾವುದೇ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ, ಎಲ್ಲರಿಗೂ ಕಾನೂನು ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ. ಸಂವಿಧಾನದ 14ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಕಾನೂನು ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದಿದ್ದಾರೆ.

ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಸಮುದಾಯದವರ ಮೇಲೆ ಪೊಲೀಸರು ಕಲ್ಲು ಹೊಡೆದಿದ್ದಾರೆ ಎಂದು ಬಿಜೆಪಿ ಆರೋಪ ಮಾಡುತ್ತಿದೆ. ವಾಸ್ತವವಾಗಿ ಕಲ್ಲು ಹೊಡೆದಿರುವುದು ಬಿಜೆಪಿಗರು, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುವುದರ ಫೋಟೋಗಳನ್ನು ತೋರಿಸುತ್ತೇವೆ. ಸ್ವಾಮೀಜಿಗಳು ರಸ್ತೆಯಲ್ಲಿ ಏಕೆ ಕುಳಿತುಕೊಂಡಿದ್ದಾರೆ? ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು? ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ? ನಾನು ಹೇಳಿರುವುದಕ್ಕೆ ಸಾಕ್ಷಿಯಿದೆ ಎಂದು ಗರಂ ಆಗಿ ಉತ್ತರಿಸಿದ್ದಾರೆ.
ಪಂಚಮಸಾಲಿ ಸಮಾಜದವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು. ಬಿಜೆಪಿ ಕಾಲದಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗಡೆಯವರ ವರದಿಯಲ್ಲಿ ಈಗಿರುವಂತೆಯೇ ಪ್ರವರ್ಗ 2ಎ, 2ಬಿ ಇರಬೇಕು. ಇದಕ್ಕೆ ಹೊಸ ಸೇರ್ಪಡೆಯಾಗಬಾರದು. 2ಬಿ ಯಲ್ಲಿರುವ ಶೇ 4ರಷ್ಟು ಮೀಸಲಾತಿಯನ್ನು ರದ್ದು ಮಾಡಬಾರದು ಎಂದು ಹೇಳಿದ್ದಾರೆ.

ಬಿಜೆಪಿ ಅವಧಿಯಲ್ಲಿ ಅಂದು ಪ್ರತಿಭಟನೆ ಏಕೆ ಆಗಲಿಲ್ಲ? ಈಗ ಅದೇ ಬಿಜೆಪಿಯವರು ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಮುಸಲ್ಮಾನರಿಗೆ ಇದ್ದ ಶೇ 4ರ ಮೀಸಲಾತಿಯನ್ನು ರದ್ದು ಮಾಡಿ, 3ಎ ಒಕ್ಕಲಿಗರಿಗೆ ಶೇ 2ರಷ್ಟು ಮತ್ತು 3ಬಿ ಪ್ರವರ್ಗಗಳಿಗೆ ಲಿಂಗಾಯತರಿಗೆ ಶೇ 2ರಷ್ಟು ಮೀಸಲಾತಿ ನೀಡಿದರು. ಇದನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯದ ರಸೂಲ್ ಎಂಬ ವ್ಯಕ್ತಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರವೇ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿತ್ತು ಎಂದು ವಿವರಣೆ ನೀಡಿದ್ದಾರೆ.

ಪಂಚಮಸಾಲಿ ಹೋರಾಟವನ್ನು ಟ್ರ್ಯಾಕ್ಟರ್ ತರುವ ಮೂಲಕ ಮಾಡುತ್ತೇವೆ ಎಂದು ಮೊದಲೇ ತಿಳಿಸಿದ್ದರು. ನ್ಯಾಯಾಲಯ ಹೋರಾಟವನ್ನು ಶಾಂತಿಯುತವಾಗಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ಸೂಚನೆ ನೀಡಲಾಗಿತ್ತು. ಆದರೆ ಹೋರಾಟಗಾರರು ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರು. ಸ್ಥಳಕ್ಕೆ ಮಹದೇವಪ್ಪ ಸೇರಿದಂತೆ ಮೂರು ಸಚಿವರನ್ನು ಕಳುಹಿಸಿದ್ದೆವು ಎಂದು ಸ್ಪಷ್ಟನೆ ನೀಡಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications