Belagavi Session: ಪಂಚಮಸಾಲಿ ಹೋರಾಟ ಕಿಚ್ಚು ಮತ್ತೆ ಆರಂಭ, ಇಷ್ಟಲಿಂಗ ಪೂಜೆ, ಶ್ರೀಗಳು ಹೇಳಿದ್ದೇನು?

ಬೆಳಗಾವಿ, ನವೆಂಬರ್ 30: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲು ಡಿಸೆಂಬರ್ 05ರಂದು ಬೆಳಗಾವಿಯಲ್ಲಿ ಸರ್ವಪಕ್ಷದಲ್ಲಿರುವ ಪಂಚಮಸಾಲಿ ಸಮುದಾಯದ ಶಾಸಕ ಹಾಗೂ ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗುವುದು ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಸಮುದಾಯದ ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಗುರುವಾರ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ನಮಗೆ ನೀಡಿದ್ದ 2ಡಿ ಮೀಸಲಾತಿ ತೃಪ್ತಿ ತಂದಿಲ್ಲ. ಹೊರಾಟ ಮಾಡದೇ ನಮಗೆ ನ್ಯಾಯ ಸಿಗುವುದಿಲ್ಲ ಹಾಗಾಗಿ ಇಷ್ಟಲಿಂಗ ಪೂಜೆಯೊಂದಿಗೆ ಹೋರಾಟವನ್ನು ಆರಂಭಿಸಿದ್ದೇವೆ ಎಂದು ತಿಳಿಸಿದರು.

Belagavi Session 2023: Jayamrutyunjaya Swamy Will Protest Urge 2A Reservation Given to Panchamasali

ಇದಲ್ಲದೆ ವಿವಿಧ ಜಿಲ್ಲೆಗಳಲ್ಲಿ ಹೆದ್ದಾರಿಯನ್ನು ತಡೆದು ಪ್ರತಿಭಟನೆಯನ್ನು ನಡೆಸಿದ್ದೇವೆ. ಆದರೂ ಇನ್ನೂ ನಮಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಇಂದು ಕಾರ್ಯಕಾರಿಣಿ ನಡೆಸಿ ಡಿಸೆಂಬರ್ 05ರಂದು ಸಮುದಾಯದ ಶಾಸಕರು, ಸಚಿವರು ಹಾಗೂ ಮಾಜಿ ಶಾಸಕರೊಂದಿಗೆ ಸರ್ವಪಕ್ಷ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ ಸಭೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸುತ್ತೇವೆ. ಮುಖ್ಯಮಂತ್ರಿಗಳನ್ನು ಕರೆ ತರುವ ಜವಾಬ್ದಾರಿಯನ್ನು ಐವರು ಸಚಿವರಿಗೆ ವಹಿಸಲಾಗಿದೆ.

ಸೌಧದೆದುರು ಇಷ್ಟಲಿಂಗ ಪೂಜೆ

ಡಿಸೆಂಬರ್​ 04ರಿಂದ 15ರವರೆಗೂ ವಿಧಾನಮಂಡಲ ಅಧಿವೇಶನ ನಡೆಯಲಿದೆ. 14ರ ಒಳಗಾಗಿ ಸುವರ್ಣ ವಿಧಾನಸೌಧದ ಎದುರು ಪ್ರತಿಭಟಿಸಿ ಇಷ್ಟಲಿಂಗ ಪೂಜೆ ಮಾಡುತ್ತೇವೆ. ಒಂದು ವೇಳೆ ನಮಗೆ ನ್ಯಾಯ ಸಿಗದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಸಮಾವೇಶ ನಡೆಸಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

Belagavi Session 2023: Jayamrutyunjaya Swamy Will Protest Urge 2A Reservation GivBelagavi Session 2023: Jayamrutyunjaya Swamy Will Protest Urge 2A Reservation Given to Panchamasali en to Panchamasali

ಡಿಸೆಂಬರ್ 1ರಿಂದಲೇ ನಿಷೇಧಾಜ್ಞೆ ಜಾರಿ

ತಾಲೂಕಿನ ಹಿರೇಬಾಗೆವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತತೆ ಕಾಪಾಡುವ ಹಿತದೃಷ್ಟಿಯಿಂದ ಸುವರ್ಣಸೌಧದ ಸುತ್ತಲಿನ ಪ್ರದೇಶದಲ್ಲಿ ಡಿ.1ರಿಂದ 30ರವರೆಗೆ 144 ಕಲಂ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಸುವರ್ಣಸೌಧದ ಪೂರ್ವ ಕಡೆಗೆ ಶೆಗನಮಟ್ಟಿ ಜಮೀನ 500 ಮೀಟರ್ ಅಂತರ, ಉತ್ತರಕ್ಕೆ ಸುವರ್ಣ ಗಾರ್ಡನ್ ಕಲ್ಯಾಣ ಮಂಟಪದವರೆಗೆ 500 ಮೀಟರ್ ಹಾಗೂ ಪಶ್ಚಿಮಕ್ಕೆ ರಾಷ್ಟ್ರೀಯ ಹೆದ್ದಾರಿಯ ಆಚೆಗೆ ಇರುವ ಸಂಪೂರ್ಣ ಗಾರ್ಡನ್ ಹೊಟೇಲ್‍ದವರೆಗೆ 500 ಮೀಟರ್ ಅಂತರ ಮತ್ತು ದಕ್ಷಿಣ ದಿಕ್ಕಿನ ಕಡೆಗೆ ಟೊಯೊಟಾ ಶೋರೂಮ್ ವರೆಗೆ 500 ಮೀಟರ್ ಅಂತರದಲ್ಲಿ ಡಿ.1ರಿಂದ 30ರವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಅಪಾಯ ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+